ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ: 6 ಲಕ್ಷ ರೂ. ಮೌಲ್ಯದ ಚಿನ್ನ ವಶ

Gold smuggling: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಣೆ ಪ್ರಕರಣ ಮತ್ತೆ ವರದಿಯಾಗಿದೆ. ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಭಟ್ಕಳದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು ಚಿನ್ನ ವಶಪಡಿಸಿಕೊಂಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ: 6 ಲಕ್ಷ ರೂ. ಮೌಲ್ಯದ ಚಿನ್ನ ವಶ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ

Updated on: Mar 20, 2024 | 3:33 PM

ಮಂಗಳೂರು, ಮಾರ್ಚ್ 20: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mangaluru international airport) ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು (Gold smuggling) ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ (Bhatkal) ಮೂಲದ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು 6,19,200 ರೂಪಾಯಿ ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ಇದನ್ನು ಕಳ್ಳಸಾಗಣೆ ಮಾಡುವುದಕ್ಕಾಗಿ ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿ ಇಡಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಂಜಾ ಮಾರಾಟ: ಇಬ್ಬರ ಬಂಧನ

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಿಎಸ್‌ಐ ಪ್ರತಿಭಾ ಅವರಿಗೆ ಮಾರ್ಚ್ 17ರಂದು ಸಿಕ್ಕ ಮಾಹಿತಿ ಮೇರೆಗೆ ಬೀಜೈ ಮೂಲದ ಕಿಶನ್ (30), ಮಲ್ಲಿಕಟ್ಟೆಯ ಹಿತೇಶ್ (29) ಎಂಬುವರನ್ನು ಬಂಧಿಸಲಾಗಿತ್ತು. ಗುಪ್ತಚರ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಶಂಕಿತ ಆರೋಪಿಗಳು ಪಂಪ್‌ವೆಲ್‌ನಿಂದ ನಂತೂರು ಮಾರ್ಗವಾಗಿ ಸ್ಕೂಟರ್‌ನಲ್ಲಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದಾಗ ಅಡ್ಡಗಟ್ಟಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಅಧಿಕಾರಿಗಳು ಶಂಕಿತರನ್ನು ವಶಕ್ಕೆ ಪಡೆದು ಸುಮಾರು 155 ಗ್ರಾಂ ತೂಕದ ಸುಮಾರು 10,000 ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಜತೆಗೆ ಅಕ್ರಮಕ್ಕೆ ಬಳಸಿದ್ದ ಸ್ಕೂಟರ್ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಮಂಗಳೂರು ಪೊಲೀಸರಿಂದ 19 ರೌಡಿ ಶೀಟರ್‌ಗಳ ಗಡಿಪಾರು

ಈ ಕಾರ್ಯಾಚರಣೆಯನ್ನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಉಪ ಪೊಲೀಸ್ ಆಯುಕ್ತರಾದ ಸಿದ್ಧಾರ್ಥ ಗೋಯಲ್ ಮತ್ತು ಬಿಪಿ ದಿನೇಶ್ ಕುಮಾರ್ ಮತ್ತು ಎಸಿಪಿ ಪ್ರತಾಪ್ಸಿಂಗ್ ತೋರಟ್ ನೇತೃತ್ವದಲ್ಲಿ ನಡೆಸಲಾಗಿದೆ. ತಂಡದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸೋಮಶೇಖರ್ ಜೆಸಿ, ಪಿಎಸ್ ಐ ಪ್ರತಿಭಾ, ಸಿಐಡಿ ಸಿಬ್ಬಂದಿ ಇದ್ದರು.

ಮಂಗಳೂರಿನಲ್ಲಿ ಇತ್ತೀಚೆಗೆ ಗಾಂಜಾ ಹಾಗೂ ಇತರ ಡ್ರಗ್ಸ್ ಮಾರಾಟ ಜಾಲ ಹೆಚ್ಚಾಗಿದೆ. ಇದರ ವಿರುದ್ಧ ನಿರಂತರ ನಗರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದಾಗ್ಯೂ ಹಲವೆಡೆ ಗಾಂಜಾ, ಕೊಕೇನ್ ಮಾರಾಟ ವರದಿಯಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us