AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru news: ಬೈಕಂಪಾಡಿಯಲ್ಲಿ ಗೂಡ್ಸ್​ ರೈಲಿಗೆ ಸಿಲುಕಿ 20 ಎಮ್ಮೆಗಳು ಸಾವು

ಗೂಡ್ಸ್ ರೈಲಿಗೆ ಸಿಲುಕಿ ಸುಮಾರು 20 ಎಮ್ಮೆಗಳು ಮೃತಪಟ್ಟಿರುವ ಘಟನೆ ಬೈಕಂಪಾಡಿಯ ಅಂಗರಗುಂಡಿಯಲ್ಲಿ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಭಾನುವಾರ ತಡರಾತ್ರಿಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳು ಸಾವನ್ನಪ್ಪಿವೆ ಎನ್ನಲಾಗಿದೆ.

Mangaluru news: ಬೈಕಂಪಾಡಿಯಲ್ಲಿ ಗೂಡ್ಸ್​ ರೈಲಿಗೆ ಸಿಲುಕಿ 20 ಎಮ್ಮೆಗಳು ಸಾವು
ಸಾಂದರ್ಭಿಕ ಚಿತ್ರ
Ganapathi Sharma
|

Updated on:May 15, 2023 | 2:58 PM

Share

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ ಸುಮಾರು 20 ಎಮ್ಮೆಗಳು ಮೃತಪಟ್ಟಿರುವ ಘಟನೆ ಬೈಕಂಪಾಡಿಯ ಅಂಗರಗುಂಡಿಯಲ್ಲಿ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಭಾನುವಾರ ತಡರಾತ್ರಿಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳು ಸಾವನ್ನಪ್ಪಿವೆ ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ. ಗೂಡ್ಸ್ ರೈಲು ಕಂಕನಾಡಿಯಿಂದ ಎಂಸಿಎಫ್ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ರೈಲಿನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಲವು ಎಮ್ಮೆಗಳು 25 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿವೆ ಎಂದು ಹೇಳಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಉಳಿದ ಎಮ್ಮೆಗಳನ್ನು ರಕ್ಷಿಸಿದ್ದಾರೆ.

ಕಾರುಗಳ ನಡುವೆ ಡಿಕ್ಕಿ; ಮಹಿಳೆಯರಿಗೆ ಗಾಯ

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಕೊಡಾಜೆಯಲ್ಲಿ ರಸ್ತೆ ಬದಿ ನಿಂತಿದ್ದ ಆಲ್ಟೋ ಕಾರಿಗೆ ಹಿಂಬದಿಯಿಂದ ಬಂದ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನೊಳಗಿದ್ದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ.

ಇದನ್ನೂ ಓದಿ: ಹಾಸನ: ಸಕಲೇಶಪುರದ ಗುಳಗಳಲೆಯಲ್ಲಿ ಕಾಡಾನೆ ದಾಳಿ, ಇಬ್ಬರಿಗೆ ಗಾಯ

ಕೇರಳ ಗಡಿಯಲ್ಲಿ ಮಾವೋವಾದಿ ಗುಂಪು ಪ್ರತ್ಯಕ್ಷ

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೇರಳದ ಕಣ್ಣೂರಿನ ಅರಣ್ಯ ಪ್ರದೇಶದಲ್ಲಿ ಐದು ಮಂದಿಯ ಮಾವೋವಾದಿಗಳ ಗುಂಪು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಗುಂಪನ್ನು ಮಾವೋವಾದಿ ಮೊಯ್ದೀನ್ ನೇತೃತ್ವ ವಹಿಸಿದ್ದಾರೆ ಎಂದು ನಂಬಲಾಗಿದೆ. ಈ ಗುಂಪಿನಲ್ಲಿ ಮಹಿಳಾ ಸದಸ್ಯೆಯೂ ಸೇರಿದ್ದಾರೆ ಎನ್ನಲಾಗಿದೆ.

ತನಿಖೆ ಆರಂಭಿಸಿರುವ ಕೇರಳ ಪೊಲೀಸರಿಗೆ, ಈ ಗುಂಪು ಇರಟ್ಟಿಯ ಅರಣ್ಯ ಪ್ರದೇಶದಲ್ಲಿ ನೆಲೆಸಿರುವ ಮನೆಯೊಂದಕ್ಕೆ ಬಂದು ಆಹಾರ ಕೇಳಿದೆ ಮತ್ತು ಅವರ ಮೊಬೈಲ್ ಫೋನ್‌ಗಳನ್ನು ಚಾರ್ಜ್ ಮಾಡಿದೆ ಎಂದು ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Mon, 15 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?