AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿಯರೇ ಎಚ್ಚರ….: ಒಟಿಪಿ, ಬ್ಯಾಂಕ್‌ ವಿವರ ಕೇಳಿದ್ರೆ ನೀಡಬೇಡಿ; ಇಲ್ಲಿದೆ ಸರ್ಕಾರ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆಯ ಮರು-ಪರಿಶೀಲನೆ ಹೆಸರಿನಲ್ಲಿ ಒಟಿಪಿ ಹಾಗೂ ಬ್ಯಾಂಕ್ ಖಾತೆ ವಿವರ ಕೇಳುವ ನಕಲಿ ಜಾಲದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯಕ್ಕೆ ಯಾವುದೇ ಮರು-ಪರಿಶೀಲನೆ ಅಥವಾ ಸರ್ವೇ ಆರಂಭವಾಗಿಲ್ಲ. ಫಲಾನುಭವಿಗಳು ತಮ್ಮ ವೈಯಕ್ತಿಕ ಮಾಹಿತಿ, ಒಟಿಪಿ ಅಥವಾ ಬ್ಯಾಂಕ್ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ಇಂತಹ ವಂಚಕರಿಂದ ಎಚ್ಚರದಿಂದಿರುವಂತೆ ಇಲಾಖೆ ಮನವಿ ಮಾಡಿದೆ.

ಗೃಹಲಕ್ಷ್ಮಿಯರೇ ಎಚ್ಚರ....: ಒಟಿಪಿ, ಬ್ಯಾಂಕ್‌ ವಿವರ ಕೇಳಿದ್ರೆ ನೀಡಬೇಡಿ; ಇಲ್ಲಿದೆ ಸರ್ಕಾರ ಮಹತ್ವದ ಸೂಚನೆ
ಸಾಂದರ್ಭಿಕ ಚಿತ್ರ Image Credit source: Google
ಅಕ್ಷಯ್​ ಪಲ್ಲಮಜಲು​​
|

Updated on:Nov 02, 2026 | 3:44 PM

Share

ಮಂಗಳೂರು, ನ.2: ಈಗಾಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗೃಹಜ್ಯೋತಿ ಸರ್ವೆಯನ್ನು ನಡೆಸಲಾಗುತ್ತಿದೆ. ಇದರಲ್ಲಿ ಬೆಂಗಳೂರಿನ ಸಮೀಕ್ಷೆ ಪೂರ್ಣಗೊಂಡಿದೆ. ಆದರೆ ಗೃಹಲಕ್ಷ್ಮೀ ಯೋಜನೆಯ ಸಮೀಕ್ಷೆ ಶುರು ಮಾಡಿಲ್ಲ. ಆದರೆ  ಕಾಂಗ್ರೆಸ್​​​ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯ ಮರು-ಪರಿಶೀಲನೆ (Re-verification) ಹಾಗೂ ಸರ್ವೇ ಹೆಸರು ಹೇಳಿಕೊಂಡು ಫಲಾನುಭವಿಗಳಿಂದ ಒಟಿಪಿ (OTP) ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಪಡೆಯುತ್ತಿರುವ ನಕಲಿ ಜಾಲದ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತೀವ್ರ ಎಚ್ಚರಿಕೆ ನೀಡಿದೆ. ಕೆಲವು ಪ್ರದೇಶಗಳಲ್ಲಿ ಅನಧಿಕೃತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯ ಸರ್ವೇ ನೆಪದಲ್ಲಿ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ವೈಯಕ್ತಿಕ ರಹಸ್ಯ ಮಾಹಿತಿ ಸಂಗ್ರಹಿಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇಲಾಖೆಯ ಉಪನಿರ್ದೇಶಕರು ಸಾರ್ವಜನಿಕರಿಗೆ ಜಾಗೃತರಾಗಿರಲು ಸೂಚಿಸಿದ್ದಾರೆ.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಕೃತ ಸ್ಪಷ್ಟನೆಯನ್ನು ನೀಡಿದೆ. ಇಲಾಖೆಯು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಮರು-ಪರಿಶೀಲನೆ ಅಥವಾ ಸರ್ವೇ ಕಾರ್ಯವನ್ನು ಸದ್ಯಕ್ಕೆ ಇನ್ನೂ ಪ್ರಾರಂಭಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರದ ಆದೇಶದಂತೆ ಅಧಿಕೃತ ಮರು-ಪರಿಶೀಲನೆ ಆರಂಭವಾದಾಗ ಫಲಾನುಭವಿಯ ಗುರುತನ್ನು ದೃಢೀಕರಿಸಲು ಅವರ ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ (OTP) ಮೂಲಕ ಅಥೆಂಟಿಕೇಶನ್ ಮಾಡುವುದು ಅಗತ್ಯವಾಗಿರುತ್ತದೆ.

ಇದನ್ನೂ ಓದಿ: ಕೊನೆಗೂ ಮುಕ್ತಾಯಗೊಂಡ ಗೃಹ ಜ್ಯೋತಿ ಮರುಪರಿಶೀಲನೆ: 1.42 ಲಕ್ಷ ಫಲಾನುಭವಿಗಳಿಗೆ ಶಾಕ್

ಪ್ರಸ್ತುತ ಇಲಾಖೆಯಿಂದ ಯಾವುದೇ ಸರ್ವೇ ಆರಂಭವಾಗದಿರುವುದರಿಂದ, ಯೋಜನೆ ಹೆಸರಿನಲ್ಲಿ ಬರುವ ಅನಧಿಕೃತ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ಒಟಿಪಿ (OTP), ಬ್ಯಾಂಕ್ ಖಾತೆ ಸಂಖ್ಯೆ ಅಥವಾ ಇತರ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಬೇಡಿ ಎಂದು ಸೂಚಿಸಲಾಗಿದೆ. ಅಧಿಕೃತ ಮರು-ಪರಿಶೀಲನೆ ಪ್ರಕ್ರಿಯೆಯ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ನಂತರವಷ್ಟೇ ಇಲಾಖೆಯು ಮಾಹಿತಿ ನೀಡಲಿದ್ದು, ಅಲ್ಲಿಯವರೆಗೆ ಸಾರ್ವಜನಿಕರು ಇಂತಹ ವಂಚಕರ ಕರೆ ಹಾಗೂ ಭೇಟಿಗಳಿಗೆ ಸ್ಪಂದಿಸದಂತೆ ಮನವಿ ಮಾಡಿದೆ. ಈಗಾಲೇ ಇಂತಹ ಹಲವು ಘಟನೆಗಳು ನಡೆದಿದೆ. ಯಾವುದೇ ಕಾರಣಕ್ಕೂ ಇಂತಹ ಜಾಲದಲ್ಲಿ ಮಹಿಳೆಯರು ಬೀಳಬಾರದು. ಎಚ್ಚರಿಕೆಯಿಂದ ಇರುವಂತೆ ಇಲಾಖೆ ಮನವಿಯನ್ನು ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Mon, 2 November 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ಕೃಷ್ಣಾ ನದಿ ನೀರು ವಿವಾದ, ಮಹಾರಾಷ್ಟ್ರದ ವಿರುದ್ಧ ಎಂಬಿ ಪಾಟೀಲ್ ವಾಗ್ದಾಳಿ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ
ನಂದಿನಿ ಹಾಲು ದರ ಏರಿಕೆ ಪರಿಣಾಮ: ರಾಜ್ಯಾದ್ಯಂತ ಕಾಫಿ, ಟೀ ಬೆಲೆ ₹5 ಹೆಚ್ಚಳ