AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ: ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ 22 ಕೋಟಿ ರೂಪಾಯಿ ಗೃಹಲಕ್ಷ್ಮಿ ಯೋಜನೆಯಡಿ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಡಳಿತ ತಕ್ಷಣ ಕ್ರಮಕ್ಕೆ ಮುಂದಾಗಿದ್ದು, ಹಣ ವಾಪಸ್ ಪಡೆಯಲು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮ ತಡೆಯಲು ಅಧಿಕಾರಿಗಳಿಗೆ ಸೂಚಿಸಿದೆ. ಜೀವಂತ ಫಲಾನುಭವಿಗಳನ್ನು ಮೃತಪಟ್ಟವರು ಎಂದು ಗುರುತಿಸಿರುವ ಲೋಪಗಳ ಬಗ್ಗೆಯೂ ತನಿಖೆಗೆ ಆದೇಶಿಸಲಾಗಿದೆ.

ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ: ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ
ಗೃಹಲಕ್ಷ್ಮೀ ಯೋಜನೆ
ಪ್ರಸನ್ನ ಹೆಗಡೆ
|

Updated on:May 13, 2026 | 12:24 PM

Share

ಮಂಗಳೂರು, ಮೇ 12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್​​ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ ಮೃತಪಟ್ಟಿರುವ ಫಲಾನುಭವಿಗಳ ಖಾತೆಗಳಿಗೆ ಸುಮಾರು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ಗೊತ್ತಾಗುತ್ತಲೇ ಈ ಬಗ್ಗೆ ತಕ್ಷಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​​ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷ ಭರತ್ ಮುಂಡೋಡಿ  ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಕಚೇರಿಯಿಂದ ಬಂದ ಮಾಹಿತಿಯ ಪ್ರಕಾರ ಬಳಕೆಯಲ್ಲಿಲ್ಲದ ಖಾತೆಗಳಿಗೆ ಸಹ ಹಣ ವರ್ಗಾವಣೆ ಮುಂದುವರಿದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಮೃತ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ!

ಅಲ್ಲದೆ, ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟವರು ಎಂದು ಗುರುತಿಸಿರುವ ಗಂಭೀರ ವ್ಯತ್ಯಾಸಗಳೂ ಕಂಡುಬಂದಿರುವ ಬಗ್ಗೆಯೂ ಉಲ್ಲೇಖಿಸಿದ ಅವರು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ಪರಿಶೀಲನಾ ಸಭೆಯಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ 4,25,759 ರೇಷನ್ ಕಾರ್ಡ್ ಹೊಂದಿದವರು ಇದ್ದು, ಇದುವರೆಗೆ 3,82,178 ಫಲಾನುಭವಿಗಳು ನೋಂದಾಯಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮೃತ ಫಲಾನುಭವಿಗಳ ಹೆಸರು, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಬ್ಯಾಂಕ್ ವಿವರಗಳು ಲಭ್ಯವಿದ್ದರೆ, ಬ್ಯಾಂಕ್‌ಗಳ ಮೂಲಕ ಖಾತೆಗಳನ್ನು ಸ್ಥಗಿತಗೊಳಿಸಿ ಮುಂದಿನ ವ್ಯವಹಾರಗಳನ್ನು ತಡೆಯಬಹುದು ಎಂದು ಭಾರತ್ ಮುಂಡೋಡಿ ಹೇಳಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳಲ್ಲಿಯೂ ಮರಣ ದಾಖಲೆಗಳು ಲಭ್ಯವಿರುವುದರಿಂದ, ಸಂಬಂಧಿತ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮೃತಪಟ್ಟವರ ಖಾತೆಗಳಿಗೆ ನೆರವು ಬಿಡುಗಡೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:24 pm, Wed, 13 May 26

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ