ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿದೆ, ಶಿವರಾಜ ತಂಗಡಗಿ ಹೇಳಿಕೆಯೇ ಉದಾಹರಣೆ: ಹರೀಶ್ ಪೂಂಜಾ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೀಡಿರುವ ವಿವಾದಾತ್ಮ ಹೇಳಿಕೆ ವಿರುದ್ಧ ಬೆಳ್ತಂಗಡಿ ಶಾಸಕ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಕಾಂಗ್ರೆಸ್ ಪಕ್ಷದ ಹತಾಶೆಯನ್ನು ಬಿಂಬಿಸಿದೆ ಎಂದಿದ್ದಾರೆ.

ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿದೆ, ಶಿವರಾಜ ತಂಗಡಗಿ ಹೇಳಿಕೆಯೇ ಉದಾಹರಣೆ: ಹರೀಶ್ ಪೂಂಜಾ
ಹರೀಶ್ ಪೂಂಜಾ
Follow us
| Updated By: ಗಣಪತಿ ಶರ್ಮ

Updated on: Mar 27, 2024 | 11:52 AM

ಮಂಗಳೂರು, ಮಾರ್ಚ್ 27: ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು ಎಂಬ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿಕೆಗೆ ಬೆಳ್ತಂಗಡಿ ಶಾಸಕ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ (Harish Poonja) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​​ನ ಹತಾಶೆಯ ಭಾವನೆ ರಾಜ್ಯದಲ್ಲಿ ವ್ಯಕ್ತವಾಗಿದೆ. ಶಿವರಾಜ ತಂಗಡಗಿ ಹೇಳಿಕೆಯೇ ಇದಕ್ಕೆ ಉದಾಹರಣೆ. 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಒಪ್ಪಿಕೊಂಡಿದೆ. ಇದು ತಂಗಡಗಿ ಅವರ ಬಾಯಲ್ಲಿ ಬಂದಿದೆ ಎಂದು ಹೇಳಿದರು.

ಕಾಂಗ್ರೆಸ್ ಮೇಲಿನಿಂದ ಕೆಳಗಿನವರೆಗೂ ಒಂದೇ ಮಾನಸಿಕತೆ ಇರುವ ಪಕ್ಷ. ಒಬ್ಬ ಒಳ್ಳೆಯ ಮನುಷ್ಯನನ್ನು ಹೆಕ್ಕಿ ತೆಗೆಯಲು ಸಾಧ್ಯ ಇಲ್ಲದಂತ ಪಕ್ಷ. ಯಾರು ಯಾವ ಮಾತನ್ನು ಹೇಳಿದರೂ ಡಿಕೆ ಶಿವಕುಮಾರ್ ಆದಿಯಾಗಿ ರಾಹುಲ್ ಗಾಂಧಿವರೆಗೂ ಅದನ್ನು ಸಮರ್ಥನೆ ಮಾಡುತ್ತಾರೆ. ಆದರೆ, ಬಿಜೆಪಿಯ ಯಾವನೇ ನಾಯಕ ತಪ್ಪು ಹೇಳಿಕೆ ಕೊಟ್ಟರೆ ಅದು ವೈಯಕ್ತಿಕ ಹೇಳಿಕೆ ಎಂದು ಹೇಳುತ್ತದೆ. ಪಕ್ಷಕ್ಕೂ ಅದಕ್ಕೂ ಸಂಬಂಧ ಇಲ್ಲ ಎಂದು ಹೇಳಿ ತಿದ್ದಿಕೊಳ್ಳುತ್ತದೆ. ಮನೆ ಮಕ್ಕಳ ಚಾಲಿ ಊರಿಗೆಲ್ಲಾ ಎಂಬಂತೆ ಕಾಂಗ್ರೆಸ್​ನ ಎಲ್ಲಾ ನಾಯಕರಿಗೂ ಇದು ಅನ್ವಯವಾಗುತ್ತದೆ ಎಂದು ಹರೀಶ್ ಪೂಂಜಾ ಕಿಡಿ ಕಾರಿದರು.

ಕಾಂಗ್ರೆಸ್ ದ್ವೇಷ, ಅಸಹಿಷ್ಣುತೆಯ ಮಾತುಗಳನ್ನಾಡಿರುವುದು ಇದೇ ಮೊದಲೇನಲ್ಲ. ಬಿಜೆಪಿ ಮತ್ತು ಮೋದಿಯನ್ನು ಎದುರಿಸಲಾಗದೆ ಅನೇಕ ನಾಯಕರು ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಈ ದೇಶದ ಇತಿಹಾಸವನ್ನು ತಂಗಡಗಿ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್​​ನ ದುರಾಡಳಿತ ಮುಚ್ಚಿ ಹಾಕಲು ಈ ರೀತಿ ಹೇಳಿದ್ದಾರೆ ಎಂದು ಹರೀಶ್ ಪೂಂಜಾ ಹೇಳಿದರು.

ಇದನ್ನೂ ಓದಿ: ಮೋದಿ…ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ದೇಶದಲ್ಲಿ ಮೋದಿ ಸರ್ಕಾರ ಭರವಸೆ ನೀಡಿದ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡಿಲ್ಲ. ಹೀಗಾಗಿ ಯುವಕರು, ವಿದ್ಯಾರ್ಥಿಗಳು ‘ಮೋದಿ ಮೋದಿ’ ಎಂದು ಘೋಷಣೆ ಕೂಗಿದರೆ ಅವ ಕಪಾಳಕ್ಕೆ ಹೊಡೆಯಬೇಕು ಎಂದು ಶಿವರಾಜ ತಂಗಡಗಿ ಕೆಲವು ದಿನಗಳ ಹಿಂದೆ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’