ಪ್ರಚೋದನಕಾರಿ ಭಾಷಣ ಕೇಸ್: ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್​ಗೆ ಜೈಲು ಶಿಕ್ಷೆ!

2015ರ ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೆಎಂಎಫ್‌ಸಿ ಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

ಪ್ರಚೋದನಕಾರಿ ಭಾಷಣ ಕೇಸ್: ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್​ಗೆ ಜೈಲು ಶಿಕ್ಷೆ!
ರಿಯಾಜ್ ಪರಂಗೀಪೇಟೆ
Edited By:

Updated on: Aug 05, 2026 | 7:33 AM

ಮುಖ್ಯಾಂಶಗಳು

  • ಪ್ರಚೋದನಕಾರಿ ಭಾಷಣ ಕೇಸ್‌ನಲ್ಲಿ ಎಸ್‌ಡಿಪಿಐ ಮುಖಂಡ ರಿಯಾಜ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
  • ಬೆಳ್ತಂಗಡಿ ನ್ಯಾಯಾಲಯವು ಆರೋಪಿಗೆ 6 ತಿಂಗಳ ಜೈಲು ಮತ್ತು ದಂಡ ವಿಧಿಸಿದೆ.
  • 2015ರ ಪಿಎಫ್‌ಐ ಪ್ರತಿಭಟನೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಸಾಬೀತಾಗಿದೆ.

ಬೆಳ್ತಂಗಡಿ, ಆಗಸ್ಟ್ 05: ಸುಮಾರು 11 ವರ್ಷಗಳ ಹಳೆಯ ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ (Riyaz Parangipete) ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ. ರೋಪಿ ವಿರುದ್ಧ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಪ್ರಿನ್ಸಿಪಲ್ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ರಿಯಾಜ್ ಪರಂಗೀಪೇಟೆಗೆ 6 ತಿಂಗಳ ಸಾದಾ ಕಾರಾಗೃಹ ವಾಸದ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಲಾಗಿದೆ.

11 ವರ್ಷಗಳ ಹಿಂದೆ ಏನಾಗಿತ್ತು?

2015ರ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕಚೇರಿ ಬಳಿ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಿದ್ದ ರಿಯಾಜ್ ಪರಂಗೀಪೇಟೆ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಹಾಗೂ ಸಮಾಜದಲ್ಲಿ ಪ್ರಚೋದನೆ ಸೃಷ್ಟಿಸುವ ರೀತಿಯಲ್ಲಿ ಮಾತುಗಳನ್ನಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಆಗಿನ ಐಪಿಸಿ (IPC) ಕಾಯ್ದೆಯ ಕಲಂ 153(A) (ಕೋಮು ಸೌಹಾರ್ದತೆಗೆ ಧಕ್ಕೆ ತರುವುದು) ಹಾಗೂ 295(A) (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದೋಷಾರೋಪಣೆ ಸಾಬೀತು

ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣೆಯ ಉಪನಿರೀಕ್ಷಕರು (PSI) ಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಸಾಕ್ಷ್ಯಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಆಶೀತಾ ಅವರು ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಕಲಂ 153(A) ಅಡಿಯಲ್ಲಿ ಶಿಕ್ಷೆ ಪ್ರಕಟಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us