Mangaluru News: ಮಂಗಳೂರಲ್ಲಿ ಗಾಳಿ ಸಹಿತ ಭಾರಿ ಮಳೆ; ಧರೆಗೆ ಉರುಳಿದ ಜಾಹೀರಾತು ಫಲಕ, ಮರ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಜೊತೆಗೆ ಜೋರಾದ ಗಾಳಿ ಬೀಸಿದೆ. ಈ ಹಿನ್ನೆಲೆ ಈಗಾಗಲೆ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಅಲ್ಲದೇ ಹವಾಮಾನ ಇಲಾಖೆ ರೆಡ್​​ ಅಲರ್ಟ್​​ ಘೋಷಿಸಿದೆ. 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮರಗಳು ಮತ್ತು ಜಾಹೀರಾತು ಫಲಕಗಳು ಧರೆಗೆ ಉರುಳುತ್ತಿವೆ.

Mangaluru News: ಮಂಗಳೂರಲ್ಲಿ ಗಾಳಿ ಸಹಿತ ಭಾರಿ ಮಳೆ; ಧರೆಗೆ ಉರುಳಿದ ಜಾಹೀರಾತು ಫಲಕ, ಮರ
ಮನೆ ಮೇಲೆ ಬಿದ್ದ ಮರ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ

Updated on:Jul 05, 2023 | 2:37 PM

ಮಂಗಳೂರು: ಕರಾವಳಿ (Coastal) ಜಿಲ್ಲೆಗಳಿ ಗಾಳಿ ಸಹಿತ ಮಳೆಯಾಗುತ್ತಿದೆ (Rain). ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನಲ್ಲಿ (Mangaluru) ಭಾರಿ ಮಳೆಯಾಗುತ್ತಿದೆ. ಜೊತೆಗೆ ಜೋರಾದ ಗಾಳಿ ಬೀಸಿದೆ. ಈ ಹಿನ್ನೆಲೆ ಈಗಾಗಲೆ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಅಲ್ಲದೇ ಹವಾಮಾನ ಇಲಾಖೆ ರೆಡ್​​ ಅಲರ್ಟ್​​ ಘೋಷಿಸಿದೆ. ಇನ್ನು ಗಾಳಿ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದರ ಪರಿಣಾಮ ಕಮರ್ಷಿಯಲ್ ಕಟ್ಟಡದ ಮೇಲೆ ಹಾಕಿದ್ದ ಜಾಹೀರಾತು ಫಲಕ ಬಿದ್ದು 10ಕ್ಕೂ ಹೆಚ್ಚು ಬೈಕ್​ಗಳು ಜಖಂಗೊಂಡಿರುವ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ರಸ್ತೆಯಲ್ಲಿ ಜನರಿಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಫಲಕ ಮಾತ್ರವಲ್ಲದೇ ಭಾರ ತಾಳಲಾಗದೆ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ ಕೂಡ ಧರಗೆ ಬಿದ್ದಿದೆ.

ಇದನ್ನೂ ಓದಿ:  Mangaluru News: ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ; ಮಂಗಳೂರು ಪೊಲೀಸರಿಂದ ಕಡಬದ ರೆಹಮಾನ್ ಬಂಧನ

ಮಂಗಳೂರು ಹೊರವಲಯದ ಸೋಮೇಶ್ವರ ಪ್ರದೇಶದಲ್ಲಿ ಭಾರಿ ಗಾಳಿಮಳೆಗೆ ಮರಗಳು ಮನೆ ಮೇಲೆ ಉರುಳಿ ಬಿದ್ದಿವೆ. ಮರಗಳು ಉರುಳಿ ಮೂರು ಮನೆಗಳು, ವಾಹನಕ್ಕೆ ಹಾನಿಯಾಗಿದೆ. ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪೆರಿಬೈಲ್, ಕುಂಪಲ ಬಾರ್ದೆ, ಅಂಚಿಕಟ್ಟೆ ಪ್ರದೇಶದ ನಾಲ್ಕು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಅಬ್ಬಾಸ್ , ಕುಂಪಲ ಬಾರ್ದೆಯ ಯಮುನಾ ಬಂಗೇರ, ಸುನಿಲ್ ಹಾಗೂ ಅಂಚೆಕಟ್ಟೆಯ ಯು.ಎ ಹಸೈನಾರ್, ಯು.ಎ.ಖಾದರ್ ಎಂಬವರ ಮನೆಗಳಿಗೆ ಹಾನಿಯಾಗಿದೆ. ಒಂದು ಸ್ಕೂಟರ್ ಮರದಡಿ ಸಿಲುಕಿ ನುಜ್ಜುಗುಜ್ಜಾಗಿದೆ.

ಭಾರಿ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಿ.ವಿ.ಎಸ್ ಬಳಿ ಗುಡ್ಡ ಕುಸಿತಗೊಂಡಿದೆ. ಪಿ.ವಿ.ಎಸ್​​ ನಿಂದ ಕೆ.ಎಸ್ ರಾವ್ ರೋಡ್​​ಗೆ ಸಂಪರ್ಕ ಕಲ್ಪಿಸುವ ಒಳ ರಸ್ತೆಯಲ್ಲಿ ಗುಡ್ಡ ಕುಸಿದ ಹಿನ್ನಲೆ ಪಕ್ಕದಲ್ಲಿದ್ದ ಹಳೆಯ ಕಟ್ಟಡದ ಗೋಡೆ ಕೂಡ ಕುಸಿತವಾಗಿದೆ. ಗುಡ್ಡ ಕುಸಿತವಾದ ಸ್ಥಳಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದ್ದು, ಇನ್ನಷ್ಟು ಮಣ್ಣು ಕುಸಿಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಇನ್ನು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಗೆ ಹವಾಮಾನ ‌ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿಯ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾದ ಹಿನ್ನೆಲೆ ಮಂಗಳೂರಿನ ಉಚ್ಚಿಲ, ಉಳ್ಳಾಲ ಕಡಲ ತೀರ ಫುಲ್ ರಫ್ ಆಗಿದೆ. ಅಲೆಗಳು ಮನೆ, ಬೀಚ್ ರೆಸಾರ್ಟ್​​ಗಳಿಗೆ ಅಪ್ಪಳಿಸುತ್ತಿರುವ ಹಿನ್ನೆಲೆ ಜನರು ಆತಂಕದಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Wed, 5 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ