ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌: ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 30, 2022 | 10:32 AM

ನಿರಂತರ ಸುರಿದ ಭಾರೀ ಮಳೆ ಹಿನ್ನಲೆ, ದೇವಸ್ಥಾನದೊಳಗೆ ಮಳೆ ನೀರು ನುಗ್ಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಪುರಸಭೆಯ ಅವೈಜ್ಞಾನಿಕ ಚರಂಡಿ ನಿರ್ವಹಣೆಯಿಂದ ರಘುನಾಥ ದೇವಸ್ಥಾನದೊಳಗೆ ನೀರು ನುಗ್ಗಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌: ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌
Follow us on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ‌ (Rain) ಹಿನ್ನೆಲೆ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಶಾಲೆಗೆ ಬರಲು ತೊಂದರೆಯಾದಲ್ಲಿ ಅಂತಹ ಕಡೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದ್ದು, ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಬಗ್ಗೆ ಕಟ್ಟೆಚ್ಚರ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಬೆಳಗ್ಗೆಯಿಂದ ಆರಿದ್ರಾ ಮಳೆ ಅಬ್ಬರಿಸುತ್ತಿದೆ. ಸೋಮವಾರಪೇಟೆ, ಮಡಿಕೇರಿ ತಾಲೂಕಿನ ಜೋಡುಪಾಲ, ಮದೆನಾಡು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಜನರು ಪರದಾಡುವಂತ್ತಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಕೂಡ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿಯಿಂದಲೇ ಮಳೆ ಸುರಿಯುತ್ತಿದೆ. ಇಂದು ದಟ್ಟ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Hasan Ali: ಔಟ್ ಕೊಟ್ಟಿಲ್ಲವೆಂದು ಅಂಪೈರ್ ಕೈಯನ್ನು ಬಲವಂತವಾಗಿ ಎತ್ತಿದ ಪಾಕ್ ಕ್ರಿಕೆಟಿಗ: ವಿಡಿಯೋ

ಭಾರಿ ಮಳೆಯಿಂದಾಗಿ ದೇವಸ್ಥಾನದೊಳಗೆ ನುಗ್ಗಿದ ಮಳೆ ನೀರು

ಕಾರವಾರ: ನಿರಂತರ ಸುರಿದ ಭಾರೀ ಮಳೆ ಹಿನ್ನಲೆ, ದೇವಸ್ಥಾನದೊಳಗೆ ಮಳೆ ನೀರು ನುಗ್ಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಪುರಸಭೆಯ ಅವೈಜ್ಞಾನಿಕ ಚರಂಡಿ ನಿರ್ವಹಣೆಯಿಂದ ರಘುನಾಥ ದೇವಸ್ಥಾನದೊಳಗೆ ನೀರು ನುಗ್ಗಿದೆ. ಸುಮಾರು 400 ವರ್ಷಗಳ ಇತಿಹಾಸವಿರುವ ದೇವಸ್ಥಾನ ಇದಾಗಿದ್ದು, ಪ್ರತಿ ಭಾರಿ ಮಳೆ ಹೆಚ್ಚು ಪ್ರಮಾಣದಲ್ಲಿ ಬಂದಾಗ  ನೀರು ಒಳ ನುಗ್ಗುತ್ತದೆ. ಪುರಾತತ್ವ ಇಲಾಖೆಗೆ ಸಮಸ್ಯೆ ಬಗ್ಗೆ ಸಾಕಷ್ಟು ಭಾರೀ ಮನವಿ ಮಾಡಿದರು ಡೋಂಟ್ ಕೇರ್ ಎನ್ನುತ್ತಿದ್ದಾರೆ. ಧಾರ್ಮಿಕ ಪೂಜಾ ಕೈಂಕರ್ಯಕ್ಕೂ ಮಳೆ ನೀರು ಅಡ್ಡಿ ಪಡಿಸಿದೆ. ಆದಷ್ಟು ಬೇಗ ಈ ಸಮಸ್ಯೆಯಿಂದ ಮುಕ್ತಿ ನೀಡುವಂತೆ ಜನರ ಒತ್ತಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ; Pranitha Subhash: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿದ ಪ್ರಣಿತಾ; ‘ಹಿಂದೂಗಳ ಜೀವ ಮುಖ್ಯ’ ಎಂದು ಫಲಕ ಹಿಡಿದ ನಟಿ