AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮಗುಚಿ ಬಿದ್ದ ದೋಣಿ: ನಿಷೇಧವಿದ್ದರೂ ಸಮುದ್ರಕ್ಕಿಳಿದವರು ದುರಂತ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿದೆ. ವರುಣನ ಆರ್ಭಟದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಗುಡ್ಡ ಕುಸಿದಿವೆ. ಗುಡ್ಡ ಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮತ್ತು ಸಾವು-ನೋವು ಸಂಭವಿಸಿವೆ. ಇದೀಗ, ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ.

ಮಂಗಳೂರಿನಲ್ಲಿ ಮಗುಚಿ ಬಿದ್ದ ದೋಣಿ: ನಿಷೇಧವಿದ್ದರೂ ಸಮುದ್ರಕ್ಕಿಳಿದವರು ದುರಂತ ಸಾವು
ನೀರುಪಾಲಾದ ಕಲ್ಮೇಶ​, ಯಶವಂತ್​
ಅಶೋಕ್​ ಪೂಜಾರಿ, ಮಂಗಳೂರು
| Updated By: ವಿವೇಕ ಬಿರಾದಾರ|

Updated on:May 30, 2025 | 6:51 PM

Share

ಮಂಗಳೂರು, ಮೇ 30: ದಕ್ಷಿಣ ಕನ್ನಡ (Dakshina kannada) ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಜೊತೆಗೆ ಕಡಲಬ್ಬರ ಕೂಡ ಜೋರಾಗಿದೆ. ಹೀಗಾಗಿ ಜಿಲ್ಲೆಗೆ ಹವಾಮಾನ ಇಲಾಖೆ (Meteorological Department) ರೆಡ್​ ಅಲರ್ಟ್​ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರಿಕೆಗೆ ನಿರ್ಭಂದಿಸಿದೆ. ಆದರೆ, ನಿಯಮ ಮೀರಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ. ಮಂಗಳೂರು ಕಡಲತೀರದ ತೋಟಬೆಂಗ್ರೆ ಅಳಿವೆ ಬಾಗಿಲು ಬಳಿ ಘಟೆನೆ ನಡೆದಿದೆ. ತೋಟಬೆಂಗ್ರೆ ನಿವಾಸಿಗಳಾದ ಯಶವಂತ್ ಮತ್ತು ಕಮಲಾಕ್ಷ ನೀರುಪಾಲಾದವರು.

ಈ ಇಬ್ಬರು ಮೀನುಗಾರರು ನಿಯಮ ಮೀರಿ ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ನಾಡದೋಣಿಯ ಅವಶೇಷಗಳು ಕಡಲತೀರಕ್ಕೆ ತೇಲಿ ಬಂದಿವೆ. ಸಮುದ್ರದಲ್ಲಿ ನಾಪತ್ತೆಯಾಗಿರುವ ಮೀನುಗಾರರಿಗಾಗಿ ಶೋಧ ಕಾರ್ಯ ನಡೆದಿದೆ.

ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಅವಾಂತರ

ಮಂಗಳೂರಿನ ಪಡೀಲ್ ನಿಂದ ಬಜಾಲ್ ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಪಡೀಲ್ ರೈಲ್ವೆ ಅಂಡರ್ ಪಾಸ್. ಅಂಡರ್ ಪಾಸ್ ಮತ್ತೆ ಜಲಾವೃತಗೊಂಡಿದೆ. ಅಂಡರ್ ಪಾಸ್ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಪ್ರತಿ ಮಳೆಗಾಲದಲ್ಲೂ ಪಡೀಲ್ ರೈಲ್ವೆ ಅಂಡರ್ ಪಾಸ್ ಮುಳುಗುತ್ತದೆ. ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆಯಿಲ್ಲದಿರುವುದರಿಂದ ಸಮಸ್ಯೆಯಾಗುತ್ತಿದೆ ಎಂದು ಜನರು ಹೇಳಿದ್ದಾರೆ.

ಇದನ್ನೂ ಓದಿ
Image
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
Image
ಮನೆಯಲ್ಲಿ ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ
Image
ಉಳ್ಳಾಲದಲ್ಲಿ ಮನೆಗಳಿಗೆ ನುಗ್ಗಿದ ನೀರು: ಬೈಕ್, ಕಾರು ಮುಳುಗಡೆ
Image
ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ, ಬಾಲಕಿ ಸಾವು

ತಡೆಗೋಡೆ ಕುಸಿತ

ಇನ್ನು, ಪುತ್ತೂರು ತಾಲೂಕಿನ ಲಿಂಗದಗುಡ್ಡೆದಲ್ಲಿ ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತಗೊಂಡಿದೆ. ತಡೆಗೋಡೆ ಕುಸಿತದ ಸಂದರ್ಭ ಯಾರೂ ಇಲ್ಲದ ಪರಿಣಾಮ ದುರಂತ ತಪ್ಪಿದೆ. ತಡೆಗೋಡೆ ಕುಸಿತದಿಂದಾಗಿ ಮೂರು ಮನೆಗಳು ಅಪಾಯದಲ್ಲಿವೆ. ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರಿ ಮಳೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಜಪ್ಪಿನಮೊಗರು ಪ್ರದೇಶ ಜಲಾವೃತ

ಮಳೆಯಿಂದ ಮಂಗಳೂರಿನ ಜಪ್ಪಿನಮೊಗರು ಪ್ರದೇಶಕ್ಕೆ ರಾಜಕಾಲುವೆ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿವೆ. ಇದರಿಂದ, ಮನೆಯಿಂದ ಹೊರಬರಲು ಸಾಧ್ಯವಾಗದೆ ವೃದ್ಧ ದಂಪತಿ ಪರದಾಡಿದರು. ಪೀಠೋಪಕರಣ, ಎಲೆಕ್ಟ್ರಾನಿಕ್ ವಸ್ತುಗಳು, ದವಸ ಧಾನ್ಯಗಳಿಗೆ ಹಾನಿಯಾಗಿದೆ. ರಾಜಕಾಲುವೆ ಚಿಕ್ಕದಾಗಿ ನಿರ್ಮಿಸಿರುವುದು ಮತ್ತು ಹೂಳು ತೆಗೆಯದಿರುವುದೇ ಘಟನೆಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Fri, 30 May 25