ಮುಂದಿನ 10 ದಿನ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ; ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ

ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಬಹುದು. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಉದ್ಭವಿಸಬಹುದು ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆ ತಿಳಿಸಿದೆ.

ಮುಂದಿನ 10 ದಿನ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ; ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ
ಮಳೆ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Jun 29, 2023 | 10:32 PM

ಮಂಗಳೂರು: ಮುಂದಿನ 10 ದಿನಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ (ಅಂದಾಜು 64.5 ಮಿಮೀ ನಿಂದ 115 ಮಿಮೀ). ಕರಾವಳಿಯ ವಿವಿಧ ಸ್ಥಳಗಳಲ್ಲಿ ಈ ಅವಧಿಯಲ್ಲಿ ಅತಿ ಹೆಚ್ಚು (244.4 ಮಿಮೀ ವರೆಗೆ) ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆ ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಬಹುದು. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಉದ್ಭವಿಸಬಹುದು ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆ ತಿಳಿಸಿದೆ.

ಅಗತ್ಯ ಎದುರಾದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಅಂತಹ ಪ್ರದೇಶಗಳಲ್ಲಿ ಮುಂಚಿತವಾಗಿ ಡಿ-ವಾಟರಿಂಗ್ ಪಂಪ್‌ಗಳು ಮತ್ತು ಇತರ ಉಪಕರಣಗಳನ್ನು ನಿಯೋಜಿಸಲು ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಡಿಆರ್‌ಎಫ್) ಸಿಬ್ಬಂದಿಯನ್ನು ಸಂಭಾವ್ಯ ಅಪಾಯದ ಪ್ರದೇಶಗಳಲ್ಲಿ ಸೂಚನೆ ನೀಡಲಾಗಿದೆ. ಯಾವುದೇ ರೀತಿಯ ಅನಾಹುತಗಳನ್ನು ಎದುರಿಸಲು ಸಿದ್ಧರಾಗಿರುವಂತೆ ಕೆಎಸ್‌ಎನ್‌ಡಿಎಂಸಿ ಸ್ಥಳೀಯ ಆಡಳಿತಗಳನ್ನು ಕೇಳಿದೆ.

ಇದನ್ನೂ ಓದಿ: Mangalore Rains: ಮಂಗಳೂರಿನ ಕೋಟೆಕಾರಿನಲ್ಲಿ ಒಂದೇ ದಿನ 245 ಮಿಮೀ ಮಳೆ, ಕರಾವಳಿ ಕರ್ನಾಟಕದಲ್ಲಿ ವರ್ಷಧಾರೆ ಸಾಧ್ಯತೆ

ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಜುಲೈ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 45 ಕಿಮೀ ಯಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸಮುದ್ರದಲ್ಲಿ 3 ರಿಂದ 3.2 ಮೀಟರ್ ವ್ಯಾಪ್ತಿಯಲ್ಲಿ ಹೆಚ್ಚಿನ ಅಲೆಗಳನ್ನು ಏಳುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ