AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸರಗೋಡಿನಲ್ಲಿ ಭಾರೀ ಮಳೆಗೆ ದುರಂತ: ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ಸಾವು

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಡೂರು ಗ್ರಾಮದಲ್ಲಿ ಅವಾಂತರವೊಂದು ಸಂಭವಿಸಿದೆ. ಮಳೆಗೆ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿ ಮಕ್ಕಳಿಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಇನ್ನೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಸದ್ಯ ಅಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡಿನಲ್ಲಿ ಭಾರೀ ಮಳೆಗೆ ದುರಂತ: ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ಸಾವು
ಮಳೆಗೆ ಮಣ್ಣು ಕುಸಿತImage Credit source: tv9 kannada
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Jun 06, 2026 | 9:33 PM

Share

ಮಂಗಳೂರು, ಜೂನ್​​ 06: ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ವರುಣಾರ್ಭಟ ತೀವ್ರಗೊಂಡಿದೆ. ಧಾರಾಕಾರ ಮಳೆಗೆ (Rain) ಮಣ್ಣು ಕುಸಿದು ಬಿದ್ದ ಪರಿಣಾಮ ಮಕ್ಕಳಿಬ್ಬರು ದಾರುಣವಾಗಿ ಸಾವನ್ನಪ್ಪಿರುವಂತಹ (death) ಘಟನೆ ಕಾಸರಗೋಡು ಜಿಲ್ಲೆಯ ಅಡೂರು ಎಂಬಲ್ಲಿ ನಡೆದಿದೆ. ಮುನ್ಸಿರ್(10) ಮತ್ತು ಮುಜಮ್ಮಿಲ್ (14) ಮೃತ‌ ಮಕ್ಕಳು. ಅಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಕಾಸರಗೋಡಿನಲ್ಲಿ ವರುಣನ ಅಟ್ಟಹಾಸ
  • ಮಳೆಯಿಂದ ಕುಸಿದ ಮಣ್ಣು
  • ಘಟನೆಯಲ್ಲಿ ಇನ್ನೋರ್ವ ಮಗುವಿನ ಸ್ಥಿತಿ ಗಂಭೀರ

ನಡೆದಿದ್ದೇನು?

ಸದ್ಯ ಕಾಸರಗೋಡು ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದೆ. ಮಕ್ಕಳು ತಮ್ಮ ಮನೆಯ ಸಮೀಪ ಆಟವಾಡುತ್ತಿದ್ದಾಗ ನಿರಂತರ ಮಳೆಯಿಂದಾಗಿ ನೆನೆದಿದ್ದ ಆವರಣ ಗೋಡೆಯು ಮಣ್ಣಿನ ಸಮೇತ ಕುಸಿದು ಬಿದ್ದಿದೆ. ಪರಿಣಾಮ ಮೂವರು ಮಕ್ಕಳು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಅಡೂರು ಠಾಣೆಯ ಪೊಲೀಸರು ಯುದ್ಧೋಪಾದಿಯಲ್ಲಿ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ, ದುರದೃಷ್ಟವಶಾತ್ ಇಬ್ಬರು ಮಕ್ಕಳು ಅದಾಗಲೇ ಸಾವನ್ನಪ್ಪಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ.

ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹಲವೆಡೆ ಅವಾಂತರಗಳು

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಾಗಲಕೋಟೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ನವನಗರದ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಜಿಲ್ಲಾ ಕ್ರೀಡಾಂಗಣದ ಬಳಿಯ ರಸ್ತೆಗಳು ಹಳ್ಳದಂತಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಜಲಾವೃತ ರಸ್ತೆಯಲ್ಲೇ ವಾಹನ ಸವಾರರು ಹರಸಾಹಸಪಟ್ಟು ಮನೆಯ ಕಡೆ ಪ್ರಯಾಣಿಸಿದರು.

ಇದನ್ನೂ ಓದಿ: ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ

ಇನ್ನು ಗದಗ ಜಿಲ್ಲೆಯ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದ ಗದಗ ನಗರದ ಪಂಚರಹೊಂಡ ಬಳಿಯ ರಸ್ತೆ ಕೆರೆಯಂತಾಗಿದೆ. ರಸ್ತೆಯಲ್ಲಿ ಎರಡರಿಂದ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರಮುಖ ಮಾರುಕಟ್ಟೆಗೆ ಹೋಗುವ ರಸ್ತೆಯೂ ಜಲಾವೃತಗೊಂಡಿದೆ.

ಈಜಲು ತೆರಳಿದ್ದ ಬಾಲಕ ಮಲಪ್ರಭಾ ನದಿಯಲ್ಲಿ ಮುಳುಗಿ ಸಾವು

ಈಜಲು ಹೋಗಿದ್ದ ಬಾಲಕ ಮಲಪ್ರಭಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ. ಆಳ ತಿಳಿಯದೇ ನದಿಯಲ್ಲಿ‌ ಮುಳುಗಿ ಮಹೇಶ್ ಗಣಾಚಾರಿ (15) ಮೃತಪಟ್ಟಿದ್ದಾನೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ನಡೆಸಿ ಬಾಲಕನ ಶವ ಹೊರತೆಗೆದಿದ್ದಾರೆ. ಬಾಲಕನ ಮೃತದೇಹ ಸಿಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:18 pm, Sat, 6 June 26

Follow Us
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ