ಹಿಜಾಬ್ ತೀರ್ಪು ಪಾಲಿಸುವಂತೆ ಮಂಗಳೂರು ವಿವಿ ಸುತ್ತೋಲೆ: ರಸ್ತೆಯಲ್ಲಿ ಧಿಕ್ಕಾರ ಕೂಗಿದ ಹಿಜಾಬ್ ಧಾರಿ ವಿದ್ಯಾರ್ಥಿನಿಯರು
ಮಂಗಳೂರು ವಿವಿ ಸಮನ್ವಯ ಸಮಿತಿ ಹೆಸರಲ್ಲಿ ಪೊಲೀಸ್ ಅನುಮತಿ ಪಡೆದು ಮಂಗಳೂರಿನ ಕ್ಲಾಕ್ ಟವರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.
ಮಂಗಳೂರು: ಹಿಜಾಬ್(Hijab) ವಿಚಾರದಲ್ಲಿ ಹೈಕೋರ್ಟ್(High Court) ನೀಡಿದ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯ(Mangalore University) ಸುತ್ತೋಲೆ ಹೊರಡಿಸಿದೆ. ತನ್ನ ವ್ಯಾಪ್ತಿಗೆ ಬರುವ 212 ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು ಸ್ಥಳದಲ್ಲಿ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಸ್ಥಳದ ಸುತ್ತಮುತ್ತ ಮುಸ್ಲಿಮರು ಜಮಾಯಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದ ಹತ್ತಿರ ಜನರನ್ನು ಬಿಡದೆ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಹಿಜಾಬ್ ಧಾರಿಗಳು ರಾಷ್ಟ್ರಧ್ವಜ ಹಿಡಿದು ಅಲ್ಲಾಹು ಅಕ್ಬರ್ ಕೂಗುತ್ತಿದ್ದಾರೆ. ಹಿಜಾಬ್ ಮೂವ್ಮೆಂಟ್ ಎಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಲಾಗುತ್ತಿದೆ.
ಪೊಲೀಸರ ಜೊತೆ ಪ್ರತಿಭಟನಾಕಾರರ ವಾಗ್ವಾದ ಮಂಗಳೂರು ವಿವಿ ಸಮನ್ವಯ ಸಮಿತಿ ಹೆಸರಲ್ಲಿ ಪೊಲೀಸ್ ಅನುಮತಿ ಪಡೆದು ಮಂಗಳೂರಿನ ಕ್ಲಾಕ್ ಟವರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಇನ್ನು ರಸ್ತೆಗೆ ಅಡ್ಡಲಾಗಿ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆದಿದೆ. ರಸ್ತೆ ಮಧ್ಯೆ ಪ್ರತಿಭಟನೆಗೆ ಅವಕಾಶ ಕೊಡುವಂತೆ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕೂತು ಧರಣಿ ನಡೆಸಿದ್ದಾರೆ. ಪ್ರೈವೇಟ್ ಟೂರಿಸ್ಟ್ ಬಸ್ನಲ್ಲಿ ಪ್ರತಿಭಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸರು ಆಗಮಿಸಿದ್ದು ಸಿವಿಲ್ ಡ್ರೆಸ್ ನಲ್ಲಿ ಪ್ರಯಾಣಿಕರಂತೆ ಪೊಲೀಸರು ಕುಳಿತಿದ್ದಾರೆ.
ಬಂಗಾಳದಲ್ಲಿನ ಹತ್ಯೆಯ ಬಗ್ಗೆ ಹೇಳಿ ರಾಜ್ಯಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಸಂಸದೆ ರೂಪಾ ಗಂಗೂಲಿ
Published On - 4:59 pm, Fri, 25 March 22