ಸುಹಾಸ್ ಶೆಟ್ಟಿ ಕೊಲೆ ಕೇಸ್​: ಆರೋಪಿ ಅಬ್ದುಲ್ ರಜಾಕ್ ಬಂಧನ

ಮಂಗಳೂರಿನ ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳೊಂದಿಗೆ ಸೇರಿ ಹತ್ಯೆಗೆ ಸಂಚು ರೂಪಿಸಿದ್ದನು ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್​ ರಜಾಕ್ ಪ್ರಮುಖ ಆರೋಪಿ ಮುಜಾಮಿಲ್‌ನ ತಂದೆಯಾಗಿದ್ದಾನೆ. ಈ ಕೊಲೆಗೆ ಮೂರು ತಿಂಗಳ ಮುಂಚೆಯೇ ಸಂಚು ರೂಪಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಸುಹಾಸ್ ಶೆಟ್ಟಿ ಕೊಲೆ ಕೇಸ್​: ಆರೋಪಿ ಅಬ್ದುಲ್ ರಜಾಕ್ ಬಂಧನ
ಸುಹಾಸ್​ ಶೆಟ್ಟಿ
Edited By: ವಿವೇಕ ಬಿರಾದಾರ

Updated on: Jun 03, 2025 | 9:13 PM

ಮಂಗಳೂರು, ಜೂನ್​ 03: ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಬಂಧಿತ ಆರೋಪಿ. ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿರುವುದು ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್​ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್​ ಜೊತೆ ಸೇರಿ ಸುಹಾಸ್ ಶೆಟ್ಟಿ​ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದಾನೆ ಎಂಬ ಆರೋಪಿವಿದೆ.

ಸುಹಾಸ್ ಶೆಟ್ಟಿ ಕೊಲೆ

ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.

3 ತಿಂಗಳ ಹಿಂದೆಯೇ ಸುಹಾಸ್ ಕೊಲೆಗೆ ಸಿದ್ಧವಾಗಿತ್ತು ಸ್ಕೆಚ್

ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದನು. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದನು. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

PFI ಕೈವಾಡ ಶಂಕೆ

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್​ಐ ನೇರ ಕೈವಾಡವಿದೆ ಎಂದ ವಿ‌ಎಚ್​ಪಿ ಮುಖಂಡ ಶರಣ್ ಪಂಪ್ವೆಲ್ ಕೂಡ ಆರೋಪಿಸಿದ್ದರು. ಮಂಗಳೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಈ ಹಿಂದೆ ನಡೆದ ಹಿಂದೂ ನಾಯಕರ ಹತ್ಯೆಗೂ ಇದಕ್ಕೂ ಸಾಮ್ಯತೆ ಇದೆ. ತರಬೇತಿ ಪಡೆದುಕೊಂಡು ಈ ಹತ್ಯೆ ಮಾಡಿದ್ದಾರೆ. ಆರೋಪಿ ಸಫ್ವಾನ್ ಪಿಎಎಫ್​​​ಐ ಕಾರ್ಯಕರ್ತನ ಮನೆಯಲ್ಲಿದ್ದ ಎಂದಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 pm, Tue, 3 June 25

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us