AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ

ಕರಾವಳಿ ಕರ್ನಾಟಕದಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯಾಗಿದ್ದು, ಇದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ವಿಶ್ವ ಹಿಂದೂ ಪರಿಷತ್ ಕರೆ ಕೊಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ
ಮಂಗಳೂರಿನಲ್ಲಿ ಖಾಸಗಿ ಬಸ್​​ಗೆ ಕಲ್ಲೆಸೆದ ಪ್ರಕರಣ ವರದಿಯಾಗಿದೆ. ಕೊಲೆಯಾದ ಸುಹಾಸ್ ಶೆಟ್ಟಿ (ಬಲ ಚಿತ್ರ).
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 02, 2025 | 7:43 AM

Share

ಮಂಗಳೂರು, ಮೇ 2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ  ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ (Dakshina Kannada Bandh) ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಸುಹಾಸ್ ಶೆಟ್ಟಿ ನಿವಾಸ) ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಸುಹಾಸ್ ಶೆಟ್ಟಿ ಹಾಗೂ ಐದು ಜನ ಕಾರ್ಯಕರ್ತರು ಅವರ ಕಾರಿನಲ್ಲಿ ತೆರಳುತ್ತಾ ಇದ್ದರು. ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಸುಹಾಸ್ ಹತ್ಯೆ ಮಾಡಿದ್ದಾರೆ. ಇದೊಂದು ಪೂರ್ವ ಯೋಜಿತ ಹತ್ಯೆ, ಇದರ ಹಿಂದೆ ನಿಷೇಧಿತ ಪಿಎಫ್ಐ ಕೈವಾಡ ಇದೆ. ಹೀಗಾಗಿ ಬಂದ್​ಗೆ ಕರೆ ನೀಡಿದ್ದೇವೆ. ಪೊಲೀಸ್ ಇಲಾಖೆ ವೈಫಲ್ಯದ ವಿರುದ್ದ ನಾವು ಹೋರಾಟ ಮಾಡುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಿಷೇಧಾಜ್ಞೆ

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಬಿಎನ್​ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ
Image
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
Image
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
Image
ನೆಟ್ಟಾರು ಹತ್ಯೆ ಬಳಿಕ ಮಂಗಳೂರಿನಲ್ಲಿ ಮತ್ತೋರ್ವ ಹಿಂದೂ ಕಾರ್ಯಕರ್ತನ ಕೊಲೆ
Image
ಮಂಗಳೂರು ಗುಂಪು ಹತ್ಯೆ ಕೇಸ್​​: ಸ್ಫೋಟಕ ಅಂಶ ಬಿಚ್ಚಿಟ್ಟ ಕಮಿಷನರ್​

ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧ

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಬಂದ್ ಆಗಿದೆ. ಬಸ್ ಓಡಿಸಿದರೆ ನಮಗೂ ತೊಂದರೆಯಾಗಬಹುದು. ಈಗಾಗಲೇ ಬಸ್​ಗಳಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇವತ್ತು ಇಡೀ ದಿನ ಬಸ್ ಬಂದ್ ಇರುತ್ತದೆ ಎಂದು ಖಾಸಗಿ ಬಸ್ ಚಾಲಕರು ತಿಳಿಸಿದ್ದಾರೆ. ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ.

ಇದನ್ನೂ ಓದಿ: ನೆಟ್ಟಾರು ಕೊಲೆ ಪ್ರತಿಕಾರಕ್ಕೆ ಫಾಜಿಲ್​ ಹತ್ಯೆ: ಇದೇ ಸೇಡಿಗೆ ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ

ಸದ್ಯ ಕೆಎಸ್​ಆರ್​ಟಿಸಿ ಬಸ್ ಸಂಚಾರ ನಡೆಯುತ್ತಿದೆ. ಮತ್ತೊಂದೆಡೆ, ಅಂಗಡಿ ಮುಂಗಟ್ಟುಗಳು ಸಹ ಬಂದ್ ಆಗಿವೆ. ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ