AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!

ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಕೊಲೆ ನಡೆದಿದೆ. ಘಟನೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ವಿಶ್ವ ಹಿಂದೂ ಪರಿಷತ್​ ಈಗಾಗಲೇ ಕರೆ ಕೊಟ್ಟಿದೆ. ಸುಹಾಸ್ ಹತ್ಯೆಯಾಗಿ ಕೆಲವೇ ನಿಮಿಷಗಳಲ್ಲಿ "ಫಿನೀಶ್" ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ 'ಫಿನೀಶ್' ಎಂಬ ಪೋಸ್ಟ್ ಬಹಿರಂಗ!
ವೈರಲ್​ ಆದ ಪೋಸ್ಟ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:May 02, 2025 | 8:13 AM

Share

ಮಂಗಳೂರು, ಮೇ 2: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು (Suhas Shetty) ಹಂತಕರು ಬರ್ಬರವಾಗಿ ಹತ್ಯೆ (death) ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್​ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಇದೇ ಸೇಡಿಗೆ ಈಗ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ. ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಅಂತ ಸೋಶಿಯಲ್​ ಮೀಡಿಯಾದಲ್ಲಿ ಅದೊಂದು ಪೋಸ್ಟ್ ವೈರಲ್​ ಆಗಿದ್ದು, ಸದ್ಯ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ.

ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಮುಹೂರ್ತ ಫಿಕ್ಸ್ ಆಗಿತ್ತಾ ಎಂಬ ಅನುಮಾನಗಳು ಸದ್ಯ ಹುಟ್ಟಿಕೊಂಡಿವೆ. ಏಕೆಂದರೆ ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿ ಫೋಟೋ ಹಾಕಿ‌ ಶೀಘ್ರದಲ್ಲೇ ಸೇಡು ತೀರಿಸಿಕೊಳ್ಳುವುದಾಗಿ ಪ್ರಚೋದನಕಾರಿ ಪೋಸ್ಟ್ ಹಾಕಲಾಗಿತ್ತು.

‘ಫಿನೀಶ್’ ಅಂತ ಪೋಸ್ಟ್​​ ಬಹಿರಂಗ

ಇತ್ತ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಹೆಸರಿನ ಇನ್‌ಸ್ಟಾಗ್ರಾಂ ಪೇಜ್​ನಲ್ಲಿ ‘ಫಿನೀಶ್’ ಅಂತ ಪೋಸ್ಟ್​​ ಬಹಿರಂಗವಾಗಿತ್ತು. ಮಂಗಳೂರಿನಿಂದಲೇ ಹಲವು ನಕಲಿ ಇನ್‌ಸ್ಟಾಗ್ರಾಂ ಪೇಜ್​​ಗಳನ್ನು ನಿಯಂತ್ರಣ ಮಾಡಲಾಗುತ್ತಿದೆ. ಹತ್ಯೆ ಬೆನ್ನಲ್ಲೇ ವಿಡಿಯೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಗಿದೆ. ಜೊತೆಗೆ ‘Waiting for next wicket’ ಅಂತ ಪೋಸ್ಟ್​ ಮಾಡಲಾಗಿದೆ.

ಇದನ್ನೂ ಓದಿ
Image
ಸುಹಾಸ್ ಶೆಟ್ಟಿ ಹತ್ಯೆ: ಇಂದು ದ.ಕ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ
Image
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
Image
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
Image
ನೆಟ್ಟಾರು ಹತ್ಯೆ ಬಳಿಕ ಮಂಗಳೂರಿನಲ್ಲಿ ಮತ್ತೋರ್ವ ಹಿಂದೂ ಕಾರ್ಯಕರ್ತನ ಕೊಲೆ

ಇದನ್ನೂ ಓದಿ: ನೆಟ್ಟಾರು ಕೊಲೆ ಪ್ರತಿಕಾರಕ್ಕೆ ಫಾಜಿಲ್​ ಹತ್ಯೆ: ಇದೇ ಸೇಡಿಗೆ ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ

ಕೊಲೆಯಾದ ಸುಹಾಸ್‌ ಶೆಟ್ಟಿ ಹಿಂದೂ ಕಾರ್ಯಕರ್ತನಾಗಿದ್ದ. ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ. ಸುಹಾಸ್ ಶೆಟ್ಟಿ ವಿರುದ್ಧ ಒಟ್ಟು 5 ಪ್ರಕರಣಗಳಿದ್ದವು. ಬಜಪೆ ಠಾಣೆಯಲ್ಲಿ 3, ಬೆಳ್ತಂಗಡಿ, ಸುರತ್ಕಲ್ ಠಾಣೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದು, ಇನ್ನೆರಡು ವಿಚಾರಣೆ ಹಂತದಲ್ಲಿದ್ದವು. ಮತ್ತು ಎರಡರಲ್ಲಿ ಖುಲಾಸೆಗೊಂಡಿದ್ದರು.

ಕೊಲೆ, ಕೊಲೆಗೆ ಯತ್ನ ಆರೋಪ ಹಿನ್ನಲೆ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದರು. ಸುರತ್ಕಲ್​​ನಲ್ಲಿ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ A1 ಆರೋಪಿಯಾಗಿದ್ದರು. ಮಾರ್ಚ್​​ನಲ್ಲಿ ಹೈಕೋರ್ಟ್​ನಿಂದ ಜಾಮೀನು ಪಡೆದು ಹೊರ ಬಂದಿದ್ದರು.

ಸಿನಿಮಾ ಸ್ಟೈಲ್​ನಲ್ಲಿ ಸುಹಾಸ್ ಕೊಲೆ

ಹಂತಕರು ಪಕ್ಕಾ ಪ್ಲ್ಯಾನ್ ಮಾಡಿಯೇ ಸುಹಾಸ್ ಶೆಟ್ಟಿಯ ಕತೆ ಮುಗಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರು ಸುಹಾಸ್ ಶೆಟ್ಟಿ ತನ್ನ ಸಹಚರರ ಜೊತೆ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರಿನ ಮೂಲಕ ಸುಹಾಸ್ ಕಾರನ್ನ ಚೇಸ್ ಮಾಡಿದ್ದಾರೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ, ಮೀನಿನ ಟೆಂಪೋ ಮೂಲಕ ಸುಹಾಸ್ ಕಾರಿಗೆ ಡಿಕ್ಕಿಹೊಡೆದಿದ್ದಾರೆ.

ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್, ಮಂಗಳೂರಿನಲ್ಲಿ ನಿಷೇಧಾಜ್ಞೆ

ಡಿಕ್ಕಿ ಹೊಡೆದ ರಭಸಕ್ಕೆ ಸುಹಾಸ್ ಕಾರು ಸಲೂನ್‌ಗೆ ನುಗ್ಗಿದೆ. ಇದೇ ವೇಳೆ ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರು ಹಂತಕರು ಮಾರಕಾಸ್ತ್ರಗಳನ್ನ ಹಿಡಿದು ಸಾರ್ವಜನಿಕರ ಕಣ್ಣೆದುರೇ ಸುಹಾಸ್‌ ಮೇಲೆ ಮುಗಿಬಿದ್ದಿದ್ದಾರೆ. ರಸ್ತೆಯಲ್ಲೇ ಕೊಚ್ಚಿಕೊಂದಿದ್ದಾರೆ. ಭೀಕರ ಹತ್ಯೆಯ ಲೈವ್ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:08 am, Fri, 2 May 25