ಹಿಂದೂ ಧರ್ಮದ ಒಂದು ಸಮಾಜದ ಹೆಣ್ಣುಮಕ್ಕಳನ್ನು ವೇಶ್ಯೆಯರು ಎಂದ ಸರ್ಕಾರಿ ಅಧಿಕಾರಿ: ಆಕ್ರೋಶ

ದಕ್ಷಿಣ ಕನ್ನಡದ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯಯರು ಇದ್ದಾರೆ ಎಂದು ಹೇಳಿದ್ದಾನೆ.

ಹಿಂದೂ ಧರ್ಮದ ಒಂದು ಸಮಾಜದ ಹೆಣ್ಣುಮಕ್ಕಳನ್ನು ವೇಶ್ಯೆಯರು ಎಂದ ಸರ್ಕಾರಿ ಅಧಿಕಾರಿ: ಆಕ್ರೋಶ
ಸಂಜೀವ ಪೂಜಾರಿ, ದೂರು ಪ್ರತಿ
Follow us
| Updated By: ವಿವೇಕ ಬಿರಾದಾರ

Updated on:Oct 17, 2024 | 1:13 PM

ಮಂಗಳೂರು, ಅಕ್ಟೋಬರ್​​ 17: ಸರ್ಕಾರಿ ಅಧಿಕಾರಿಯೊಬ್ಬ (Government Officer) ಹಿಂದೂ (Hindu) ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟದ್ದಾನೆ. ಹಿಂದೂ ಧರ್ಮದ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರಿದ್ದಾರೆ ಅಂತ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿರುವ ಆಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್​​ ಆಗಿದೆ. ಆಡಿಯೋ ವೈರಲ್ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್​ ಠಾಣೆ ಸೇರಿದಂತೆ ಎರಡು ಕಡೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ನಾಲಿಗೆ ಹರಿಬಿಟ್ಟಿದ್ದಾನೆ.

ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎರಡು ದಿನಗಳ ಹಿಂದೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಮರ ಪರವಾಗಿ ಪೋಸ್ಟ್ ಹಾಕಿದ್ದನು. ಸಹಾಯ ಮಾಡುವುದರಲ್ಲಿ ಮುಸ್ಲಿಮರು ಎತ್ತಿದ ಕೈ ಎಂದು ಪೋಸ್ಟ್ ಹಾಕಿದ್ದನು. ಈ ಪೋಸ್ಟ್ ವಿರೋಧಿಸಿ ಹಿಂದೂ ಕಾರ್ಯಕರ್ತ ಸುರೇಶ್ ಕಾಸರಗೋಡು ಅವರು ಸಂಜೀವ್​ ಪೂಜಾರಿಗೆ ಕರೆ ಮಾಡಿದ್ದರು.

ಇದನ್ನೂ ಓದಿ: ನದಿ, ಸಮುದ್ರ ತೀರಕ್ಕೆ ಯಾರೂ ತೆರಳದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ

ದೂರವಾಣಿಯಲ್ಲಿ ಮಾತನಾಡುವಾಗ “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ.  ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು” ಎಂದು ಹಿಂದೂ ಹೆಣ್ಣುಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ.

ಅಧಿಕಾರಿ ಸಂಜೀವ ಪೂಜಾರಿ ಈ ಹಿಂದೆಯೂ ವಿವಾದ ಸೃಷ್ಟಿಸಿ ಸೇವೆಯಿಂದ ಅಮಾನತ್ತಾಗಿದ್ದನು. ಇದೀಗ, ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳದಿದ್ದರೆ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ತಕ್ಷಣ ಆತನನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಅಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:08 pm, Thu, 17 October 24