ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೆ.ಎಸ್ ಈಶ್ವರಪ್ಪ ಸೇರಿ ಸಚಿವರೆಲ್ಲಾ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ. ನಾವು ಲಂಚ ತೆಗೆದುಕೊಂಡಿಲ್ಲ ಎಂದು ಸಚಿವರು ಆಣೆ ಮಾಡಲಿ. ನಿಮಗೆ ಪ್ರಮಾಣ ಮಾಡಲು ಆಗುತ್ತಾ? ಆ ತಾಕತ್ತು ಇದೆಯಾ? ಎಂದು ಸಚಿವರಿಗೆ ಅಖಿಲ ಭಾರತ ಹಿಂದೂ ಮಹಾಸಭಾ ಪ್ರಶ್ನೆ ಮಾಡಿದೆ. ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈಶ್ವರಪ್ಪ ನಾನು ಕಮಿಷನ್ ಕೇಳಿಲ್ಲ ಎಂದು ಹೇಳ್ತಿದ್ದಾರೆ. ನಾನು ಅವರಿಗೆ ಸವಾಲ್ ಹಾಕ್ತಿದ್ದೀನಿ. ಈಶ್ವರಪ್ಪ ಸಹಿತ ಈಗಿನ ಮಂತ್ರಿಮಂಡಲದ ಸಚಿವರು ಧರ್ಮಸ್ಥಳಕ್ಕೆ ಬಂದು, ನಾವು ಲಂಚ ತೆಗೆದಿಲ್ಲ ಎಂದು ಆಣೆ ಮಾಡಲಿ. ನಿಮಗೆ ಪ್ರಮಾಣ ಮಾಡಲು ಆಗುತ್ತಾ? ಆ ತಾಕತ್ತ್ ಇದ್ಯಾ? ಧರ್ಮಸ್ಥಳದ ದೇವರನ್ನು ಒಪ್ಪುವುದಾದ್ರೆ ಅಲ್ಲಿಗೆ ಬರಲು ರೆಡಿ ಇದ್ದೀರಾ? ನಾವು ಕೂಡಾ ಬರ್ತೀವಿ. ಇಡೀ ಮಾಧ್ಯಮದವರನ್ನು ಕರೆಯೋಣ. ಆಗ ನಾವು ನಿಮ್ಮನ್ನು ಒಳ್ಳೆಯವರು ಎಂದು ಕರೆಯಬಹುದು. ಆದ್ರೆ ಪ್ರಮಾಣ ಮಾಡಿಯೂ ನೀವು ತಪ್ಪಿತಸ್ಥರು ಎಂದು ಸಾಬೀತಾದಲ್ಲಿ ನೀವು ಎರಡೆರಡು ಧರ್ಮದ್ರೋಹಿಗಳು ಆಗ್ತೀರಾ ಎಂದು ಎಚ್ಚರಿಕೆ ನೀಡಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಕೆಎಸ್ ಈಶ್ವರಪ್ಪ ಮನೆಗೆ ವಿವಿಧ ಸ್ವಾಮೀಜಿಗಳು ಭೇಟಿ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮನೆಗೆ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. ಶಿವಮೊಗ್ಗದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಕಾಗಿನೆಲೆಯ ಪುರುಷೋತ್ತಮನಂದಪುರಿ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗದ ಈಶ್ವರನಂದಪುರಿ, ಸಹಿತ ಒಟ್ಟು 9 ಸ್ವಾಮೀಜಿಗಳು ಈಶ್ವರಪ್ಪ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ಸಂತೋಷ್ ಆತ್ಮಹತ್ಯೆ ಕೇಸ್‌ನಲ್ಲಿ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ ಈಶ್ವರಪ್ಪಗೆ ಸ್ವಾಮೀಜಿಗಳು ಧೈರ್ಯ ತುಂಬಿದ್ದಾರೆ. ಅಷ್ಟೇ ಅಲ್ಲದೆ, ಕೆ.ಎಸ್. ಈಶ್ವರಪ್ಪಗೆ ಕರೆ ಮಾಡಿದ ಮಂತ್ರಾಲಯದ ಶ್ರೀಗಳು ನೀವು ಯಾವುದಕ್ಕೂ ವಿಚಲಿತರಾಗಬೇಡಿ, ನೀವು ರಾಮ ಭಕ್ತರು. ನಿಮ್ಮ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ.
ಸಂತೋಷ್ ಪ್ರಕರಣದ ಬಗ್ಗೆ ಶ್ರೀಗಳಿಗೆ ಕೆ.ಎಸ್. ಈಶ್ವರಪ್ಪ ವಿವರಣೆ ನೀಡಿದ್ದಾರೆ. ಪಕ್ಷದ ವರಿಷ್ಠರ ಜೊತೆ ಚರ್ಚಿಸಿಯೇ ರಾಜೀನಾಮೆ ನೀಡಿರುವೆ. ಎರಡು ದಿನ ಮೊದಲೇ ರಾಜೀನಾಮೆಯನ್ನ ನೀಡಲು ತೆರಳುತ್ತಿದ್ದೆ. ರಾಜೀನಾಮೆ ನೀಡಲು ಮೈಸೂರಿನಿಂದ ಬೆಂಗಳೂರಿಗೆ ಹೋಗ್ತಿದ್ದೆ. ಆತುರಬೇಡವೆಂಬ ಸೂಚನೆ ಹಿನ್ನೆಲೆ ರಾಜೀನಾಮೆಗೆ ತಡ ಮಾಡಿದ್ದೆ ಎಂದು ಕಾಗಿನೆಲೆ ಶ್ರೀ ಸೇರಿದಂತೆ ವಿವಿಧ ಶ್ರೀಗಳಿಗೆ ಕೆ.ಎಸ್. ಈಶ್ವರಪ್ಪ ವಿವರಣೆ ಕೊಟ್ಟಿದ್ದಾರೆ.
ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಕೆಎಸ್ ಈಶ್ವರಪ್ಪ ಮನೆಗೆ ವಿವಿಧ ಸ್ವಾಮೀಜಿಗಳು ಭೇಟಿ
ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳಲು ನಿಷೇಧಿತ ಮೋನೊ ಕ್ರೋಟೋಫಸ್ ಬಳಕೆ? ಚಿಕ್ಕಮಗಳೂರಿನಲ್ಲಿ ಏನೇನಾಗಿತ್ತು?