ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವ್ಯಾವ ಲೆಕ್ಕ? ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಅವರ ಮಾತುಗಳು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ.

ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನೀವ್ಯಾವ ಲೆಕ್ಕ? ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ
ದೇಗುಲ ತೆರವು ಕಾರ್ಯಾಚರಣೆ
Updated By: guruganesh bhat

Updated on: Sep 18, 2021 | 4:19 PM

ಮಂಗಳೂರು: ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? ಯಾವ ತುಘಲಕ್ ಸರ್ಕಾರ ನಡೆಸ್ತಾ ಇದೀರಾ ನೀವು, ತಾಲಿಬಾನ್ ಸರ್ಕಾರ ಇದ್ಯಾ ಕರ್ನಾಟಕದಲ್ಲಿ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸ್ತಾ ಇದೀರ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಅವರ ಮಾತುಗಳು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 

ನಂಜನಗೂಡು ಹುಚ್ಚಗಣಿ ಮಹದೇವಮ್ಮ ದೇಗುಲ ತೆರವು: ಗ್ರಾಮಸ್ಥರ ಪ್ರತಿಭಟನೆ, ಕಾಂಗ್ರೆಸ್ ಆಕ್ರೋಶ

ಇನ್ನೂ 92 ದೇಗುಲಗಳು ಇವೆ; ಅವುಗಳನ್ನು ಮುಟ್ಟಲು ಬಿಡಲ್ಲ- ನಂಜನಗೂಡು ದೇಗುಲ ತೆರವು ಬಳಿಕ ಪ್ರತಾಪ್ ಸಿಂಹ ವಾಗ್ದಾಳಿ

Published On - 4:18 pm, Sat, 18 September 21