ಮಂಗಳೂರಿನ ಮಳಲಿ ದರ್ಗಾದಲ್ಲಿ ದೇವಾಲಯ ಪತ್ತೆ ವಿಚಾರ; ತಾಂಬೂಲ ಪ್ರಶ್ನೆ ಇಟ್ಟು ಸಮಸ್ಯೆ ಬಗೆಹರಿಸಲು ಮುಂದಾದ ವಿಶ್ವ ಹಿಂದೂ ಪರಿಷತ್

ಮಂಗಳೂರು ಹೊರವಲಯದ ಮಳಲಿಯಲ್ಲಿ ಸಭೆ ನಡೆಸಿದ ಪ್ರಮುಖರು ತಾಂಬೂಲ ಪ್ರಶ್ನೆ ಹಾಗೂ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೇರಿ ಹಿಂದೂ ಪ್ರಮುಖರು ಭಾಗಿಯಾಗಿದ್ದಾರೆ. ಮಳಲಿಯಲ್ಲಿ ತಾಂಬೂಲ ಪ್ರಶ್ನೆ ಇಟ್ಟು ದೈವ ಸಾನಿಧ್ಯ ಪತ್ತೆಗೆ ಹಿಂದೂ ಪ್ರಮುಖರು ನಿರ್ಧರಿಸಿದ್ದಾರೆ.

ಮಂಗಳೂರಿನ ಮಳಲಿ ದರ್ಗಾದಲ್ಲಿ ದೇವಾಲಯ ಪತ್ತೆ ವಿಚಾರ; ತಾಂಬೂಲ ಪ್ರಶ್ನೆ ಇಟ್ಟು ಸಮಸ್ಯೆ ಬಗೆಹರಿಸಲು ಮುಂದಾದ ವಿಶ್ವ ಹಿಂದೂ ಪರಿಷತ್
ತಾಂಬೂಲ ಪ್ರಶ್ನೆ ಇಟ್ಟು ಸಮಸ್ಯೆ ಬಗೆಹರಿಸಲು ಮುಂದಾದ ವಿಶ್ವ ಹಿಂದೂ ಪರಿಷತ್
Follow us
TV9 Web
| Updated By: ಆಯೇಷಾ ಬಾನು

Updated on: May 22, 2022 | 3:08 PM

ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ (Malali) ಎಂಬಲ್ಲಿನ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾವನ್ನು (Dargah) ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನದ (Temple) ಮಾದರಿ ಪತ್ತೆಯಾಗಿತ್ತು. ಈ ಸಂಬಂಧ ಕೋರ್ಟ್ ನಿಂದ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಅಲ್ಲಿ ಪತ್ತೆಯಾಗಿರೊದು ದರ್ಗಾನಾ, ದೇವಸ್ಥಾನನಾ, ಬಸದಿನಾ ಅನ್ನೊ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರವಾಗಿ ಹಿಂದು ಸಂಘಟನೆಗಳು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದರು. ಆದ್ರೆ ಅಷ್ಟಮಂಗಳ ಪ್ರಶ್ನೆಯ ಬದಲಿಗೆ ತಾಂಬೂಲ ಪ್ರಶ್ನೆ ಇಡಲು ನಿರ್ಧಾರ ಮಾಡಿದ್ದಾರೆ. ಮೇ.25ಕ್ಕೆ ತಾಂಬೂಲ ಪ್ರಶ್ನೆಗೆ ವಿಶ್ವ ಹಿಂದೂ ಪರಿಷತ್ ನಿಂದ ದಿನಾಂಕ ನಿಗದಿಯಾಗಲಿದೆ.

ಈ ಬಗ್ಗೆ ಮಂಗಳೂರು ಹೊರವಲಯದ ಮಳಲಿಯಲ್ಲಿ ಸಭೆ ನಡೆಸಿದ ಪ್ರಮುಖರು ತಾಂಬೂಲ ಪ್ರಶ್ನೆ ಹಾಗೂ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸೇರಿ ಹಿಂದೂ ಪ್ರಮುಖರು ಭಾಗಿಯಾಗಿದ್ದಾರೆ. ಮಳಲಿಯಲ್ಲಿ ತಾಂಬೂಲ ಪ್ರಶ್ನೆ ಇಟ್ಟು ದೈವ ಸಾನಿಧ್ಯ ಪತ್ತೆಗೆ ಹಿಂದೂ ಪ್ರಮುಖರು ನಿರ್ಧರಿಸಿದ್ದಾರೆ. ಇದನ್ನೂ ಓದಿ: ‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ

ತಾಂಬೂಲ ಪ್ರಶ್ನೆ ಎಂದರೇನು? ತಾಂಬೂಲದ (ವೀಳ್ಯದೆಲೆ) ಸಹಾಯದಿಂದ ತನ್ವಾದಿ ದ್ವಾದಶ ಭಾವಗಳ ಸಮಸ್ತ ಶುಭಾ ಶುಭಫಲಗಳನ್ನು ಪತ್ತೆ ಹಚ್ಚುವುದು. ಪ್ರಶ್ನೆಶಾಸ್ತ್ರದಲ್ಲಿ ಚಕ್ರಗಳು, ಕವಡೆಗಳು, ತಾಂಬೂಲಗಳ ಸಂಖ್ಯೆ, ಸ್ವರೂಪ ಇತ್ಯಾದಿಗಳ ಆಧಾರದಿಂದ ಪ್ರಶ್ನೆಫಲ ಹೇಳಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಘಟನೆ ಮಾಹಿತಿ ಈಗಾಗಲೇ ಹಳೆಯ ಭೂ ದಾಖಲೆಗಳನ್ನು ದಕ್ಷಿಣಕನ್ನಡ ಜಿಲ್ಲಾಡಳಿತ ಪರಿಶೀಲನೆ ನಡೆಸುತ್ತಿದೆ. ಏಪ್ರಿಲ್ 21 ರಂದು ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದ ನವೀಕರಣದ ಸಲುವಾಗಿ ಮುಂಭಾಗ ಕೆಡವಲಾಗಿತ್ತು. ಆಗ ದರ್ಗಾದ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿತ್ತು. ಮಾಹಿತಿ ತಿಳಿದು ಮಂಗಳೂರು ತಹಶೀಲ್ದಾರ್ ಪುರಂದರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತಹಶೀಲ್ದಾರ್ ಮುಂದಾಗಿದ್ದಾರೆ. ಸದ್ಯಕ್ಕೆ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ ನೀಡಿದ್ದಾರೆ. ಪ್ರಸ್ತುತ ದರ್ಗಾದ ನವೀಕರಣ ಕಾಮಗಾರಿ‌ ಸ್ಥಗಿತಗೊಂಡಿದೆ.

ವಿಶ್ವ ಹಿಂದೂ ಪರಿಷತ್ ಪ್ರಮುಖರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು. ಇಲ್ಲಿ ದೇವಸ್ಥಾನವಿತ್ತು ಎಂದು ಹಿಂದೂಪರ ಸಂಘಟನೆ ಮುಖಂಡರು ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ. ಇನ್ನು, ದರ್ಗಾ ಆಡಳಿತ ಮಂಡಳಿಯು ಕೆಲಸ ಸ್ಥಗಿತಗೊಳಿಸಿ ಜಿಲ್ಲಾಡಳಿತದ ನಡೆಗೆ ಸಮ್ಮತಿ ಸೂಚಿಸಿದೆ. ಇದನ್ನೂ ಓದಿ: Narendra Modi: ಇಡೀ ಭಾರತವೇ ನಿಮ್ಮ ಸಾಧನೆ ಕೊಂಡಾಡಿದೆ: ಥಾಮಸ್ ಕಪ್ ಆಟಗಾರರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ