ಮಂಗಳೂರು, ಫೆಬ್ರವರಿ 9: ಸಂಸದ ಡಿಕೆ ಸುರೇಶ್ ಕುಮಾರ್ ಹೇಳಿಕೆಗೆ ಸಾಮಾನ್ಯ ರೀತಿ ಖಂಡನೆ ಮಾಡಿದರೆ ಅವರಿಗೆ ಅರ್ಥ ಆಗಲ್ಲ. ಹಾಗಾಗಿ ಈ ರೀತಿಯ ಹೇಳಿಕೆ ನೀಡಿ ಮನವರಿಕೆ ಮಾಡಲು ಪ್ರಯತ್ನಿಸಿದ್ದೇನೆ. ಹಿಂದೂಗಳ ತೆರಿಗೆಯನ್ನು ಹಿಂದೂಗಳಿಗೆ ಅಭಿವೃದ್ಧಿ ಮಾಡಿ ಎಂದು ಕೇಳುವುದರಲ್ಲಿ ತಪ್ಪೇನಿದೆ ಎಂದು ಶಾಸಕ ಹರೀಶ್ ಪೂಂಜಾ (Harish Poonja) ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂಬುವುದನ್ನು ನಾನು ಸಮರ್ಥನೆ ಮಾಡುತ್ತೇನೆ. ಉತ್ತರ-ಭಾರತ ಅಂತ ವಿಭಜನೆ ಮಾಡಲು ಕಾಂಗ್ರೆಸ್ ಹೊರಟಿದೆ. ಹಿಂದೂಗಳ ತೆರಿಗೆಯನ್ನು ಲೆಕ್ಕ ಹಾಕೋಕೆ ಕಷ್ಟವೇ ಇಲ್ಲ. ಪ್ರತಿಯೊಬ್ಬನ ಹೆಸರಿನ ಮುಂದೆ ಅವನ ಧರ್ಮವೂ ಉಲ್ಲೇಖವಾಗಿರುತ್ತದೆ. ಸಿಂಗಲ್ ಟ್ಯಾಪ್ನಲ್ಲಿ ತೆರಿಗೆಯನ್ನು ವಿಭಾಗಿಸಬಹುದಾಗಿದೆ ಎಂದು ಹೇಳಿದ್ದಾರೆ.
ತೆರಿಗೆ ವಿಚಾರ ಒಂದು ಕ್ಷುಲ್ಲಕ ವಿಚಾರ. ಆ ವಿಚಾರವನ್ನು ಇಟ್ಟುಕೊಂಡು ದೇಶ ವಿಭಜನೆಯನ್ನು ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು: ಧ್ವನಿ ಎತ್ತಿದ ಬಿಜೆಪಿ ಶಾಸಕ ಹರೀಶ್ ಪೂಂಜಾ
ಈ ವಿಚಾರವಾಗಿ ನಿನ್ನೆ ಶಾಸಕ ಹರೀಶ್ ಪೂಂಜಾ ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂದು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಿಕೊಂಡಿದ್ದರು. “ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು”. “ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ”. ದೇಶದಲ್ಲಿರುವ ತೆರಿಗೆ ಸಂಗ್ರಹದಲ್ಲಿ ಹಿಂದೂಗಳ ಪಾಲು ಎಷ್ಟು. ಇದರಲ್ಲಿ ಹಿಂದೂಗಳ ಅಭಿವೃದ್ಧಿಗೆ ಉಪಯೋಗವಾಗುತ್ತಿರುವುದು ಎಷ್ಟು ಎಂದು ಪ್ರಶ್ನಿಸಿದ್ದರು.
ಈ ವಿಚಾರವಾಗಿ ನಿನ್ನೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಟ್ವೀಟ್ ಮಾಡಲಾಗಿದ್ದು, ಕೇಂದ್ರ ಸರ್ಕಾರದ ಆರ್ಥಿಕ ತಾರತಮ್ಯದ ಕುರಿತು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಎತ್ತಿದ ದನಿ ಇಂದು ಮಹಾ ಕ್ರಾಂತಿ ಎಬ್ಬಿಸಿದೆ.
ಇದನ್ನೂ ಓದಿ: ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತರಬೇಕು: ಮಾಜಿ ಶಾಸಕ ಕೆಎಸ್ ಈಶ್ವರಪ್ಪ
ಕೇಂದ್ರ ಸರ್ಕಾರದ ಆರ್ಥಿಕ ಶೋಷಣೆಯ ವಿರುದ್ಧ ದಕ್ಷಿಣ ಭಾಗದ ರಾಜ್ಯಗಳು ಒಂದೊಂದಾಗಿಯೇ ದೆಹಲಿಯಲ್ಲಿ ನ್ಯಾಯದ ಹೋರಾಟಕ್ಕೆ ಮುಂದಾಗಿವೆ. ಇಂತಹದೊಂದು ಜಾಗೃತಿಗೆ, ಹೋರಾಟಕ್ಕೆ ಮುನ್ನುಡಿ ಬರೆದ ಡಿ. ಕೆ ಸುರೇಶ್ ಅವರು ಅಭಿನಂದನಾರ್ಹರು ಎಂದು ಟ್ವೀಟ್ ಮಾಡಲಾಗಿತ್ತು.
ಕೇಂದ್ರದ ಮಧ್ಯಂತರ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳುವ ಬರದಲ್ಲಿ ದಕ್ಷಿಣ ಭಾರತದ ಪ್ರತ್ಯೇಕ ದೇಶದ ಸಂಸದ ಡಿ.ಕೆ.ಸುರೇಶ್ ಮಾತನಾಡಿದ್ದರು. ಇದೆ ವಿಚಾರ ಇತ್ತೀಚೆಗೆ ಸಂಸತ್‌ನಲ್ಲೂ ಪ್ರತಿಧ್ವನಿಸಿತ್ತು. ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.