AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore Dargah: ಮಂಗಳೂರಿನಲ್ಲಿ ದರ್ಗಾ ನವೀಕರಣದ ವೇಳೆ ಹಿಂದೂ ಶೈಲಿಯ ದೇವಸ್ಥಾನ ಪತ್ತೆ!

ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತಹಶೀಲ್ದಾರ್ ಮುಂದಾಗಿದ್ದಾರೆ. ಸದ್ಯಕ್ಕೆ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ ನೀಡಿದ್ದಾರೆ. ಇನ್ನು, ದರ್ಗಾ ಆಡಳಿತ ಮಂಡಳಿಯು ಕೆಲಸ ಸ್ಥಗಿತಗೊಳಿಸಿ ಜಿಲ್ಲಾಡಳಿತದ ನಡೆಗೆ ಸಮ್ಮತಿ ಸೂಚಿಸಿದೆ.

Mangalore Dargah: ಮಂಗಳೂರಿನಲ್ಲಿ ದರ್ಗಾ ನವೀಕರಣದ ವೇಳೆ ಹಿಂದೂ ಶೈಲಿಯ ದೇವಸ್ಥಾನ ಪತ್ತೆ!
ಮಂಗಳೂರಿನ ದರ್ಗಾ ನವೀಕರಣದ ವೇಳೆ ಹಿಂದೂ ಶೈಲಿಯ ದೇವಸ್ಥಾನ ಪತ್ತೆ!
TV9 Web
| Edited By: |

Updated on:Apr 21, 2022 | 4:34 PM

Share

ಮಂಗಳೂರು: ಮಂಗಳೂರಿನಲ್ಲಿ ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ಹಿಂದೂ ಶೈಲಿಯ ದೇವಸ್ಥಾನ ಪತ್ತೆಯಾಗಿದೆ. ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾದಲ್ಲಿ ಗುಡಿಯೊಂದು ಪತ್ತೆಯಾಗಿದೆ. ನವೀಕರಣದ ವೇಳೆ ದರ್ಗಾ ಮುಂಭಾಗ ಕೆಡವಲಾಗಿತ್ತು. ದರ್ಗಾದ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿದೆ. ದರ್ಗಾದಲ್ಲಿ ಜೈನ ಅಥವಾ ಹಿಂದೂ ದೇವಸ್ಥಾನ ಇರುವ ಸಾಧ್ಯತೆಯಿದೆ.

ಮಾಹಿತಿ ತಿಳಿದು ಮಂಗಳೂರು ತಹಶೀಲ್ದಾರ್ ಪುರಂದರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಪ್ರಮುಖರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಸಹ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕುವ ಕಾರ್ಯದಲ್ಲಿ ತಹಶೀಲ್ದಾರ್ ಮುಂದಾಗಿದ್ದಾರೆ. ಸದ್ಯಕ್ಕೆ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ ನೀಡಿದ್ದಾರೆ. ಇನ್ನು, ದರ್ಗಾ ಆಡಳಿತ ಮಂಡಳಿಯು ಕೆಲಸ ಸ್ಥಗಿತಗೊಳಿಸಿ ಜಿಲ್ಲಾಡಳಿತದ ನಡೆಗೆ ಸಮ್ಮತಿ ಸೂಚಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಇದ್ದಾಗ 20 %, ಈಗ 40% ಸರ್ಕಾರ ಇದೆ, ದೆಹಲಿಯಲ್ಲಿ 0% ಸರ್ಕಾರವಿದೆ: ಆಯ್ಕೆ ನಿಮ್ಮದು ಎಂದ ಅರವಿಂದ್ ಕೇಜ್ರಿವಾಲ್

ಇದನ್ನೂ ಓದಿ: Karnataka Second PUC Exams: ಇನ್ನೂ ಹಾಲ್​ ಟಿಕೆಟ್​ ಪಡೆಯದ ಉಡುಪಿಯ ಆ 4 ವಿದ್ಯಾರ್ಥಿನಿಯರಿಗೆ ನಾಳೆಯಿಂದ ಅಗ್ನಿಪರೀಕ್ಷೆ

Published On - 4:31 pm, Thu, 21 April 22