Mangaluru Airport: ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್: ಎಫ್​ಐಆರ್ ದಾಖಲು

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ. ಐಪಿಸಿ 507 ಅಡಿ‌ ಬಜಪೆ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Mangaluru Airport: ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್: ಎಫ್​ಐಆರ್ ದಾಖಲು
ಮಂಗಳೂರು ವಿಮಾನ ನಿಲ್ದಾಣ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Dec 28, 2023 | 10:34 PM

ಮಂಗಳೂರು, (ಡಿಸೆಂಬರ್ 28): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru Airport) ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ. ಡಿಸೆಂಬರ್ 26ರಂದು ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ xonocikonoci10@beeble.com ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಅದಾನಿ ಆಡಳಿತದ ಮಂಗಳೂರು ಏರ್ಪೋರ್ಟ್ ಸಂಸ್ಥೆ ಬಜಪೆ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿ ಪಡೆದುಕೊಂಡು ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದೆ.

ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ xonocikonoci10@beeble.com ಮೇಲ್ ಐಡಿಯಿಂದ ಡಿಸೆಂಬರ್ 26ರಂದು ಬೆದರಿಕೆ ಸಂದೇಶ ಬಂದಿತ್ತು. ‘FUNING’ ಎಂಬ ಉಗ್ರಗಾಮಿ ಸಂಘಟನೆ ಎಂದು ಘೋಷಿಸಿಕೊಂಡು ಬೆದರಿಕೆ ಹಾಕಲಾಗಿತ್ತು. ಆದ್ರೆ, ಮಂಗಳೂರು ಏರ್​​ಪೋರ್ಟ್ ಆಡಳಿತ ಮಂಡಳಿ ಡಿಸೆಂಬರ್ .27ರಂದು ಇ-ಮೇಲ್ ಗಮನಿಸಿ ಅಲರ್ಟ್ ಆಗಿದ್ದು, ಭದ್ರತಾ ತಂಡ ಏರ್ಪೋರ್ಟ್ ನಲ್ಲಿ ತೀವ್ರ ತಪಾಸಣೆ ನಡೆಸಿತ್ತು. ಅಲ್ಲದೇ ಸಿಐಎಸ್ ಎಫ್ ಹಾಗೂ ಬಜಪೆ ಪೊಲೀಸರು ಸಹ ತೀವ್ರ ಶೋಧ ನಡೆಸಿದ್ದರು.

ಇದನ್ನೂ ಓದಿ: Mangalore Airport: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರು ಪಾರ್ಕಿಂಗ್​ಗೆ ವಿನೂತನ ಯೋಜನೆ ಜಾರಿ

ಕೊನೆಗೆ ಇದರೊಂದು ಹುಸಿ ಬಾಂಬ್ ಕರೆ ಎಂದು ಖಾತ್ರಿಯಾಗಿತ್ತು. ಬಳಿಕ ಮಂಗಳೂರು ವಿಮಾನ ನಿಲ್ದಾಣ ಆಡಳಿ ಮಂಡಳಿ ಈ ಬಗ್ಗೆ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿಯಿಂದ ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

ಮಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 10:32 pm, Thu, 28 December 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ