ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Jul 04, 2023 | 7:43 AM

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಭಾರೀ ಮಳೆ (Rain) ಹಿನ್ನೆಲೆಯಲ್ಲಿ ಇಂದು(ಜುಲೈ 04) ಶಾಲಾ-ಕಾಲೇಜುಗಳಿಗೆ(schools and colleges )ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ(Holiday) ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನಲ್ಲಿ ಮಾತ್ರ ಸದ್ಯಕ್ಕೆ ರಜೆ ನೀಡಲಾಗಿದ್ದು, ಉಳಿದ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ತಹಶೀಲ್ದಾರ್ ಗಳಿಗೆ ನೀಡಲಾಗಿದೆ.

ಇದನ್ನೂ ಓದಿ: IMD Latest Forecast: ಕರಾವಳಿ ಕರ್ನಾಟಕದಲ್ಲಿ ಈ ವಾರ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಹವಾಮಾನ ಇಲಾಖೆಯು ದ‌‌ಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಹವಮಾನ ಇಲಾಖೆಯ ವರದಿ ಆಧರಿಸಿ ಯಾವ-ಯಾವ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆಯೋ ಆ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯ ಐದು ತಾಲೂಕುಗಳಲ್ಲಿನ ರಜೆ ಘೋಷಣೆ ಮಾಡಿದ್ದಾರೆ. ಇನ್ನು ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶೀಲ್ದಾರ್​ಗಳು ರಜೆ ಘೋಷಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

ಕರಾವಳಿ ಕರ್ನಾಟಕದಲ್ಲಿ (Coastal Karnataka) ಇಂದಿನಿಂದ (ಜುಲೈ 04) ಶನಿವಾರದ ನಡುವೆ(ಜುಲೈ 07) ಅತಿ ಹೆಚ್ಚು (115.6 ಮಿ.ಮೀ ನಿಂದ 204.4 ಮಿ.ಮೀ) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಈ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಜುಲೈ 3 ರಿಂದ ಜುಲೈ 7 ರವರೆಗೆ ಕರ್ನಾಟಕ ಕರಾವಳಿಯಲ್ಲಿ 40-45 ಕಿಲೋಮೀಟರ್ ಮತ್ತು 55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಒಂದು ರೀತಿಯಲ್ಲಿ ಚಂಡಮಾರುತದ ವಾತಾವರಣವಿದೆ ಎಂದು ಅದು ಹೇಳಿದೆ.

ಇನ್ನಷ್ಟು ದಕ್ಷಿಣ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ