ಮಂಗಳೂರು: ಗುಳಿಗ ದೈವದ ಬಗ್ಗೆ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ: ದೈವ ನರ್ತಕರ ಆಕ್ರೋಶ

ಕರಾವಳಿಯ ಆರಾಧ್ಯ ಗುಳಿಗ ದೈವದ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದ್ದು, ದೈವ ನರ್ತಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ಗುಳಿಗ ದೈವದ ಬಗ್ಗೆ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ: ದೈವ ನರ್ತಕರ ಆಕ್ರೋಶ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
|

Updated on:Mar 18, 2023 | 1:41 PM

ಮಂಗಳೂರು: ಕರಾವಳಿಯ ಆರಾಧ್ಯ ಗುಳಿಗ ದೈವದ (Guliga Daiva) ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದ್ದು, ದೈವ ನರ್ತಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಸಚಿವರು ಕರಾವಳಿಯ ದೈವ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕು. ಗೃಹ ಸಚಿವರು ಫ್ಲೆಕ್ಸ್ ನೋಡಿ‌ ಗುಳಿಗೆ-ಗುಳಿಗೆ ಎಂದು ಹೇಳಿದ್ದಾರೆ. ನಮ್ಮ ದೈವವನ್ನು ಒಂದು ಮಾತ್ರೆಗೆ ಹೋಲಿಸಿದ್ದಾರೆ. ನಮ್ಮ ದೈವವೇ ಅವರಿಗೆ ಉತ್ತರ ಕೊಡಬೇಕು. ಎಲ್ಲಾ ಗುಳಿಗ ಶಕ್ತಿಗಳು ಒಟ್ಟು ಸೇರಿ ಅವರಿಗೆ ತಕ್ಕ ಶಾಸ್ತಿ ಮಾಡಬೇಕು. ದೈವ-ದೇವರ ಸನ್ನಿಧಿಯಲ್ಲಿ ಬಂದು ಗೃಹಸಚಿವರು ಕ್ಷಮೆ ಯಾಚಿಸಬೇಕು ಎಂದು ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಪ್ರಭಾಕರ ಶಾಂತಿಕೋಡಿ ಒತ್ತಾಯಿಸಿದ್ದಾರೆ.

ಒಂದು ವಾರದ ಗಡುವು ನೀಡುತ್ತೇವೆ. ಒಂದು ವಾರದಲ್ಲಿ ಬರದೆ ಇದ್ದರೆ ಮಂಗಳೂರು ಭೇಟಿ ಕಾರ್ಯಕ್ರಮದಲ್ಲಿ ಘೇರಾವ್ ಹಾಕುತ್ತೇವೆ. ಇನ್ಮುಂದೆ ದೈವಾರಾಧನೆಯನ್ನು ನಾಟಕ, ಯಕ್ಷಗಾನದಲ್ಲಿ ಬಳಕೆ ಮಾಡಬೇಡಿ. ದೈವರಾಧನೆಗೆ ಈ ರೀತಿ ನಡೆಯುವ ಅಪಚಾರ ತಪ್ಪಿಸಲು ದೈವರಾಧಕರ ಸಮಾವೇಶ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. ಆರಗ ಜ್ಞಾನೇಂದ್ರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ

ಗುಳಿಗ ದೈವದ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ

ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಮಾರ್ಚ್​ 14 ರಂದು ತೀರ್ಥಹಳ್ಳಿಯಲ್ಲಿ ಪ್ರಸಿದ್ದ ಶಿವದೂತೆ ಗುಳಿಗೆ ನಾಟಕ ನಡೆದಿತ್ತು. ಈ ನಾಟಕದ ಬಗ್ಗೆ ಮರುದಿನ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಅರಗ ಜ್ಞಾನೇಂದ್ರ ಕಾಂಗ್ರೆಸ್ ಟೀಕಿಸುವ ಭರದಲ್ಲಿ ನಿನ್ನೆಯಿಂದ ಎಂತದೋ ಗುಳಿಗೆ – ಗುಳಿಗೆ ಅಂತ ಹಾಕಿದ್ದಾರೆ. ಬಹಳ ಅಪಾಯ ಇದು. ಯಾವ ಗುಳಿಗೆ ಇವರು ಕೊಡುತ್ತಾರೆ ಅಂತ ಗೊತ್ತಿಲ್ಲ. ಜಾಪಾಳ್ ಗುಳಿಗೆ ಕೊಟ್ಟರು ಕೊಡಬಹುದು ಎಂದು ಹೇಳುವ ಮೂಲಕ, ದೈವಕ್ಕೆ ಅವಹೇಳನ ಮಾಡಿದ್ದಾರೆ, ಎಂಬ ಆರೋಪ ವ್ಯಕ್ತವಾಗಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Sat, 18 March 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!