ಗಾಯಾಳು ಆಟೊ ಚಾಲಕ ಪುರುಷೋತ್ತಮ್​ಗೆ ಚೆಕ್ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ: ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ

ಕುಕ್ಕರ್​ನಲ್ಲಿದ್ದ ಬಾಂಬ್ ಕೇವಲ ಹೊಗೆಯನ್ನಷ್ಟೇ ಉಗುಳಿದೆ. ಒಂದು ವೇಳೆ ಬಾಂಬ್ ಸ್ಫೋಟಿಸಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂದು ಅವರು ಹೇಳಿದರು.

ಗಾಯಾಳು ಆಟೊ ಚಾಲಕ ಪುರುಷೋತ್ತಮ್​ಗೆ ಚೆಕ್ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ: ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 23, 2022 | 1:25 PM

ಮಂಗಳೂರು: ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ನಗರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳು ಆಟೊ ಚಾಲಕ ಪುರುಷೋತ್ತಮ್ ಅವರಿಗೆ ಗೃಹ ಸಚಿವರು ₹ 50,000 ಮೊತ್ತದ ಚೆಕ್ ನೀಡಿದರು. ‘ವೈಯಕ್ತಿಕವಾಗಿ ನಾನು ಹಣ ಸಹಾಯ ಮಾಡುತ್ತಿದ್ದೇನೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಪುರುಷೋತ್ತಮ್ ಅವರ ಮನೆಯವರಿಗೆ ಆರ್ಥಿಕ ಸಹಾಯ ಮಾಡುವ ಬಗ್ಗೆಯೂ ಮುಖ್ಯಮಂತ್ರಿ ಜೊತೆಗೆ ಚರ್ಚಿಸುತ್ತೇನೆ’ ಎಂದು ಅವರು ಭರವಸೆ ನೀಡಿದರು.

ಕುಕ್ಕರ್​ನಲ್ಲಿದ್ದ ಬಾಂಬ್ ಕೇವಲ ಹೊಗೆಯನ್ನಷ್ಟೇ ಉಗುಳಿದೆ. ಒಂದು ವೇಳೆ ಬಾಂಬ್ ಸ್ಫೋಟಿಸಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಇನ್ನೆರಡು ದಿನಗಳಲ್ಲಿ ಕೇಂದ್ರ ತಂಡವು ಈ ಪ್ರಕರಣದ ತನಿಖೆಯನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. ತೀರ್ಥಹಳ್ಳಿ ಒಂದು ಸುಸಂಸ್ಕೃತ ಊರು. ಅಲ್ಲಿಯವರಿಗೆ ಕರಾವಳಿ, ಕೇರಳದವರೊಂದಿಗೆ ಸಂಪರ್ಕ ದೊರೆತು ಭಯೋತ್ಪಾದಕರಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸ್ಥಳೀಯವಾಗಿ ಸಿಗುವ ಸ್ಫೋಟಕ ವಸ್ತುಗಳನ್ನೇ ಬಳಸಿಕೊಂಡು ಬಾಂಬ್ ತಯಾರಿಸಲಾಗಿದೆ. ಈ ಬಗ್ಗೆ ರಾಜ್ಯದ ಪೊಲೀಸರು ಸಂಪೂರ್ಣ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ರಾಜ್ಯ ಪೊಲೀಸರ ಜೊತೆಗೆ ರಾಷ್ಟ್ರೀಯ ತನಿಖಾ ದಳದ (ಎನ್​ಐಎ) ಅಧಿಕಾರಿಗಳೂ ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಹಿಂದಿರುವ ಶಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತೇವೆ ಎಂದು ಅವರು ತಿಳಿಸಿದರು.

ಗಾಯಾಳು ಶಾರೀಖ್ ಗುಣಮುಖನಾದರೆ ಅವನ ವಿಚಾರಣೆ ಮಾಡಬಹುದು. ಆಗ ಎಲ್ಲ ಮಾಹಿತಿ ಹೊರಬರಲಿದೆ. ಈಗಾಗಲೇ ವೈದ್ಯರ ತಂಡವು ಶಂಕಿತ ಉಗ್ರನಿಗೆ ಚಿಕಿತ್ಸೆ ನೀಡುತ್ತಿದೆ ಎಂದರು.

ಶಾರಿಖ್​ ಕುತ್ತಿಗೆಗೆ ಗಾಯ

ಶ್ವಾಸಕೋಶದಲ್ಲಿ ಹೊಗೆ ತುಂಬಿಕೊಂಡಿರುವುದರಿಂದ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ. ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಶಾರೀಖ್​ನನ್ನು ದಾಖಲಿಸಲಾಗಿದೆ. ಸ್ಫೋಟದ ಹೊಗೆ ಶ್ವಾಸಕೋಶ ಪ್ರವೇಶಿಸಿರುವುದರಿಂದ ವಿಶೇಷ ನಿಗಾ ವಹಿಸಲಾಗಿದೆ. ಶಂಕಿತ ಉಗ್ರ ಶಾರಿಖ್​​ನ ಕುತ್ತಿಗೆ ಭಾಗದಲ್ಲಿ ಸ್ಫೋಟದ ವೇಳೆ ಕುಕ್ಕರ್​ನ ಮುಚ್ಚಳ ಬಡಿದು ಗಾಯವಾಗಿದೆ. ಇನ್ನೂ 3 ವಾರಗಳ ಕಾಲ ಚಿಕಿತ್ಸೆ ಮುಂದುವರಿಯುವ ಸಾಧ್ಯತೆಯಿದೆ ಎಂದರು. ಶಾರಿಖ್​ ವಯಸ್ಸು ಇನ್ನೂ ಚಿಕ್ಕದಿರುವುದರಿಂದ ಚಿಕಿತ್ಸೆಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Mangalore Blast: ದೊಡ್ಡ ಆನಾಹುತ ಸ್ವಲ್ಪದರಲ್ಲಿ ತಪ್ಪಿದೆ, ದೇವರಿಗೊಂದು ಥ್ಯಾಂಕ್ಸ್​; ಅಲೋಕ್ ಕುಮಾರ್

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು