ಮಂಗಳೂರು, ಸೆಪ್ಟೆಂಬರ್ 13: ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ (Chaitra Kundapura) ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದರು ಎನ್ನಲಾಗಿತ್ತು. ಸದ್ಯ ಈ ಕುರಿತಾಗಿ ಟಿವಿ9ಗೆ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಪ್ರತಿಕ್ರಿಯೆ ನೀಡಿದ್ದು, ಚೈತ್ರಾ ಕುಂದಾಪುರಕ್ಕೆ ನಾನು ಆಶ್ರಯ ನೀಡಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಆಶ್ರಯ ನೀಡಿದ್ದರೆ ಪೊಲೀಸರು ವಿಚಾರಣೆಗೆ ಕರೆಯಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಸಿಸಿಬಿ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಚೈತ್ರಾ ಕುಂದಾಪುರ ಭೇಟಿಯಾಗಿ ಒಂದು ವರ್ಷ ಆಗಿದೆ. ಐದು ವರ್ಷದ ಹಿಂದಿನ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಎಂಎಲ್ಎ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆ
ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಆ ಮೂಲಕ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಅಂಜುಂಗೆ ಸಂಕಷ್ಟ ಎದುರಾಗಿತ್ತು.
ಅಂಜುಂ ಹಾಗೂ ಚೈತ್ರಾ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರನ್ನೊಬ್ಬರು ಬೈದುಕೊಳ್ಳುತ್ತಿದ್ದರು. ಆದರೆ ಇವರಿಬ್ಬರ ನಡುವೆ ಅತೀ ಹೆಚ್ಚು ಫೋನ್ ಸಂಪರ್ಕ ಆಗಿದೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರನ್ನೊಬ್ಬರು ಬೈದುಕೊಳ್ಳಾರೆ. ಆದರೆ ಆತ್ಮೀಯ ಸ್ನೇಹಿತರು ಎನ್ನಲಾಗುತ್ತಿದೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ: 10 ತಿಂಗಳ ಹಿಂದೆಯೇ ಕೋಟಿ ದೋಚುವ ಪ್ಲ್ಯಾನ್! ಸಲೂನ್ ಮಾಲೀಕನಿಂದ ಸ್ಪೋಟಕ ಮಾಹಿತಿ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಮೂಲದ ಉದ್ಯಮಿ, ಬಿಲ್ಲವ ಮುಖಂಡ ಗೋವಿಂದಬಾಬು ಪೂಜಾರಿಗೆ, ಈ ಚೈತ್ರ ಕುಂದಾಪುರ ಬರೋಬ್ಬರಿ 5 ಕೋಟಿ ರೂ. ವಂಚಿಸಿದ್ದಾರೆ. ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸೂದಾಗಿ ನಂಬಿಸಿ, ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಈ ಸಂಬಂಧ ಗೋವಿಂದ ಬಾಬು ಪೂಜಾರಿ ತಿಂಗಳ ಹಿಂದೆಯೇ ದೂರು ನೀಡಿದ್ದರು.
ನಿನ್ನೆ ರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಆವರಣದಲ್ಲಿ, ಚೈತ್ರ ಕುಂದಾಪುರ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಚೈತ್ರ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ತೀವ್ರಗೊಂಡಂತೆ, ಚೈತ್ರ ಕುಂದಾಪುರ ವಂಚನೆಯ ಕಥೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:57 pm, Wed, 13 September 23