AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ಅಕ್ರಮ ವಲಸಿಗರ ಸದ್ದು: ಮಂಗಳೂರಲ್ಲಿ 6 ಮಂದಿ ವಶಕ್ಕೆ; ಮಂಡ್ಯಕ್ಕೂ ಎಂಟ್ರಿ ಕೊಟ್ರಾ ಬಾಂಗ್ಲಾ ಪ್ರಜೆಗಳು?

Illegal Immigrants: ಮಂಗಳೂರಿನ ಸುರತ್ಕಲ್‌ನಲ್ಲಿ ಆರು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್​​ನ ಮುಕ್ಕದ ಖಾಸಗಿ ಆಸ್ಪತ್ರೆಯೊಂದರ ಕಟ್ಟಡದ ಕಾಮಗಾರಿಗೆಂದು ಇವರು ಜಿಲ್ಲೆಗೆ ಆಗಮಿಸಿದ್ದರು ಎನ್ನಲಾಗಿದೆ. ಇತ್ತ ಮಂಡ್ಯದಲ್ಲೂ ಬಾಂಗ್ಲಾ ಪ್ರಜೆಗಳ ಎಂಟ್ರಿ ಶಂಕೆ ವ್ಯಕ್ತವಾಗಿದ್ದು, ಈ ನಡುವೆ ಸರ್ಕಾರದ ಶಾಶ್ವತ ನಿವಾಸ ಪ್ರಮಾಣಪತ್ರ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಮತ್ತೆ ಅಕ್ರಮ ವಲಸಿಗರ ಸದ್ದು: ಮಂಗಳೂರಲ್ಲಿ 6 ಮಂದಿ ವಶಕ್ಕೆ; ಮಂಡ್ಯಕ್ಕೂ ಎಂಟ್ರಿ ಕೊಟ್ರಾ ಬಾಂಗ್ಲಾ ಪ್ರಜೆಗಳು?
ಮಂಡ್ಯ ರೈಲ್ವೇ ನಿಲ್ದಾಣದ ಬಳಿ ವಲಸಿಗರ ವಿಚಾರಣೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jul 10, 2026 | 3:09 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತ್ತಷ್ಟು ಹೆಚ್ಚಿತಾ ಅಕ್ರಮ ವಲಸಿಗರ ಹಾವಳಿ?
  • ಮಂಗಳೂರಿನ ಸುರತ್ಕಲ್​​ನಲ್ಲಿ 6 ಬಾಂಗ್ಲಾ ಪ್ರಜೆಗಳು ವಶಕ್ಕೆ
  • ಮಂಡ್ಯ ನಗರಕ್ಕೂ ಅನೇಕರು ಎಂಟ್ರಿ ಕೊಟ್ಟಿರುವ ಶಂಕೆ

ಮಂಗಳೂರು/ ಮಂಡ್ಯ, ಜುಲೈ 10: ಕರ್ನಾಟಕಕ್ಕೆ ಬಾಂಗ್ಲಾದಿಂದ ಅಕ್ರಮ ವಲಸಿಗರ ಆಗಮನ ಮುಂದುವರಿದಿದ್ದು, ಕೂಲಿ ಕಾರ್ಮಿಕರಾಗಿ ಬಂದಿದ್ದ ಆರು ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಮುಕ್ಕದ ಖಾಸಗಿ ಆಸ್ಪತ್ರೆಯೊಂದರ ಕಟ್ಟಡದ ಕಾಮಗಾರಿಗೆಂದು ಇವರು ಜಿಲ್ಲೆಗೆ ಆಗಮಿಸಿದ್ದರು ಎನ್ನಲಾಗಿದೆ. ಗುತ್ತಿಗೆದಾರನ ಮೂಲಕ ಆಗಮಿಸಿದ್ದ ಬಾಂಗ್ಲಾದೇಶ ಪ್ರಜೆಗಳು ಕಟ್ಟಡ ಕಾಮಗಾರಿಯಲ್ಲಿ ಭಾಗಿಯಾಗಿರುವ ಮಾಹಿತಿ ಸಿಕ್ಕ ಹಿನ್ನೆಲೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ವರದಿಯನ್ನು ಎಫ್‌ಆರ್‌ಆರ್‌ಒ (FRRO)ಗೆ ಪೊಲೀಸರು ಕಳುಹಿಸಿದ್ದು, ಬಂಧನ ಕುರಿತು ಆದೇಶ ಹೊರಡಿಸಿ ಭಾರತದಿಂದ ಗಡೀಪಾರು ಮಾಡಲು ಕ್ರಮಕ್ಕಾಗಿ ವಿದೇಶೀಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ಕಳುಹಿಸಿದ್ದಾರೆ.

ಮಂಡ್ಯಕ್ಕೂ ಅಕ್ರಮ ವಲಸಿಗರ ಎಂಟ್ರಿ?

ಗಂಟು ಮೂಟೆ ಸಮೇತ ಬಂದ 50ಕ್ಕೂ ಹೆಚ್ಚು ಜನರ ಮೇಲೆ ಅನುಮಾನ ಬಂದ ಹಿನ್ನೆಲೆ ಮಂಡ್ಯ ರೈಲ್ವೆ ನಿಲ್ದಾಣ ಬಳಿ ಅವರನ್ನುತಡೆದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿರುವ ಘಟನೆ ನಡೆದಿದೆ. ಐಡಿ ಕಾರ್ಡ್, ಆಧಾರ್ ಕಾರ್ಡ್ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಹಲವರು ಪಶ್ಚಿಮ ಬಂಗಾಳ ಮೂಲದ ಆಧಾರ್ ಕಾರ್ಡ್ ಹೊಂದಿರೋದು ಕಂಡುಬಂದಿದೆ. ಬಿಜೆಪಿಗರು ವಿಚಾರಣೆ ನಡೆಸುತ್ತಿದ್ದಂತೆ ಕೆಲವು ವಲಸಿಗರು ರೈಲ್ವೆ ನಿಲ್ದಾಣದಿಂದ ಕಾಲ್ಕಿತ್ತಿದ್ದಾರೆ. ಹೀಗಾಗಿ ನಗರಕ್ಕೆ ಅಕ್ರಮ ವಲಸಿಗರು ಬಂದಿರುವ ಬಗ್ಗೆ ಅನುಮಾನ ಹೆಚ್ಚಿದೆ.

ಇದನ್ನೂ ಓದಿ: ‘ಅಕ್ರಮ ವಲಸಿಗರಿಗೆ ಮಣೆ, ಭದ್ರತೆಗೆ ಧಕ್ಕೆ’; ಕರ್ನಾಟಕ ಶಾಶ್ವತ ನಿವಾಸಿ ಪ್ರಮಾಣ ಪತ್ರಕ್ಕೆ ತಡೆನೀಡಲು ಅಮಿತ್ ಶಾಗೆ ಶೋಭಾ ಪತ್ರ

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿಗರ ಕಿಡಿ

ಮತ್ತೊಂದೆಡೆ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆ ಸಂಬಂಧ ರಾಜ್ಯ ಸರ್ಕಾರದ ನಿರ್ಧಾರ ವಿವಾದವಾಗಿ ಮಾರ್ಪಟ್ಟಿದೆ. ಈ ಬಗ್ಗೆ ಬಿಜೆಪಿಗರು ಕಿಡಿ ಕಾರಿದ್ದು, ಪೌರತ್ವ ನೀಡಲು ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಆಂತರಿಕ ಭದ್ರತೆ ಆಧಾರದಲ್ಲಿ ಇದನ್ನು ಕೇಂದ್ರ ನಿರ್ಧಾರ ಮಾಡುತ್ತೆ. ಕರ್ನಾಟಕದಲ್ಲಿ ಪ್ರಮಾಣ ಪತ್ರ ನೀಡುವ ಸರ್ಕಾರದ ಷಡ್ಯಂತ್ರ ಏನು? ರಾಜ್ಯದಲ್ಲಿ ಎಸ್ಐಆರ್ ಹಳ್ಳ ಹಿಡಿಸುವ ಪ್ರಯತ್ನ ನಡೆಸಿದ್ದಾರೆ. ಇದು ದೇಶದ ಆಂತರಿಕ ಭದ್ರತೆಗೆ ಸವಾಲು ಎಂದವರು ಆರೋಪಿಸಿದ್ದಾರೆ. ಅಕ್ರಮ ವಲಸಿಗರು ಶಾಶ್ವತವಾಗಿ ನೆಲೆಸಲು ರಾಜ್ಯ ಸರ್ಕಾರ ಕುತಂತ್ರ ಮಾಡುತ್ತಿದ್ದು, ದೇಶದ ಹಿತದೃಷ್ಟಿಗೆ ಧಕ್ಕೆ ತರುವ ನಿರ್ಧಾರ ಕೈಗೊಳ್ಳಬೇಡಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:03 pm, Fri, 10 July 26

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!