ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: 25 ದಿನಗಳ ಬಳಿಕ ಬಿಜೆಪಿ ಯುವಮೋರ್ಚಾ ಮುಖಂಡನಿಗೆ ಜಾಮೀನು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 13, 2024 | 9:24 PM

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿ ಬೆಳ್ತಂಗಡಿ(Belthangady) ಬಿಜೆಪಿ ಯುವಮೋರ್ಚಾ ಮುಖಂಡನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ 25 ದಿನಗಳ ಬಳಿಕ ಬಿಜೆಪಿ ಮುಖಂಡ(BJP Leader) ಶಶಿರಾಜ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: 25 ದಿನಗಳ ಬಳಿಕ ಬಿಜೆಪಿ ಯುವಮೋರ್ಚಾ ಮುಖಂಡನಿಗೆ ಜಾಮೀನು
ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಗೆ ಜಾಮೀನು
Follow us on

ದಕ್ಷಿಣ ಕನ್ನಡ, ಜೂ.13: ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿ ಬೆಳ್ತಂಗಡಿ(Belthangady) ಬಿಜೆಪಿ ಯುವಮೋರ್ಚಾ ಮುಖಂಡನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ 25 ದಿನಗಳ ಬಳಿಕ ಬಿಜೆಪಿ ಮುಖಂಡ(BJP Leader) ಶಶಿರಾಜ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ಇನ್ನು ದಾಳಿ ವೇಳೆ ಪರಾರಿಯಾಗಿದ್ದ ಮತ್ತೊಬ್ಬ ಬಿಜೆಪಿ ಮುಖಂಡ ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಬಂಧನದ ಬಳಿಕ ಭಾರೀ ವಿವಾದಕ್ಕೆ ಕಾರಣವಾಗಿದ್ದ ಪ್ರಕರಣ

ಇನ್ನು ಬಿಜೆಪಿ ಮುಖಂಡನನ್ನು ಬಂಧಿಸುತ್ತಿದ್ದಂತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಒಡ್ಡಿ, ನಿಂದಿಸಿದ ಆರೋಪದಡಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದವೂ ಪ್ರಕರಣ ದಾಖಲಾಗಿತ್ತು. ಈ ವೇಳೆ ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದನಿದ್ದೇನೆ, ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಕೆ ಹಾಕಿ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ:ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಹಿನ್ನಲೆ ಗಣಿಗಾರಿಕೆಗೆ ದಾಳಿ ನಡೆಸಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ಆರೋಪಿ ಬಿಜೆಪಿ ಮುಖಂಡ ಶಶಿರಾಜ್‌ ಶೆಟ್ಟಿ (35) ಬಂಧಿಸಿದ್ದರು. ಬಂಧಿತ ಆರೋಪಿ ಶಶಿರಾಜ್ ರೌಡಿಶೀಟರ್ ಆಗಿದ್ದ. ಆದರೆ ಶಶಿರಾಜ್‌ ಪರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಕಾಲತ್ತು ವಹಿಸಿದ್ದರು. ಮೇ.18ರಂದು ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ ಪೊಲೀಸರ ವಿರುದ್ದ ದರ್ಪ ಪ್ರದರ್ಶನ ಆರೋಪ ಹಿನ್ನಲೆ ಕೇಸ್​ ದಾಖಲಾಗಿತ್ತು. ಇದೀಗ ಶಶಿರಾಜ್​ಗೆ ಜಾಮೀನು ಮಂಜೂರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ