ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಕುಖ್ಯಾತ ರೌಡಿ ಅರೆಸ್ಟ್​

ಆರೋಪಿ ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಇನ್ನು ಆರೋಪಿ ತಲ್ಲತ್ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಕುಖ್ಯಾತ ರೌಡಿ ಅರೆಸ್ಟ್​
ಆರೋಪಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 20, 2023 | 4:10 PM

ಮಂಗಳೂರು, ಸೆ.20: ಕುಖ್ಯಾತ ರೌಡಿ ತಲ್ಲತ್ (39) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಗೋವಾ, ಮುಂಬೈನಲ್ಲಿದ್ದು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ತಲ್ಲತ್. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿ ಯಾಗಿದ್ದ. ಇನ್ನು ಇತ ಗ್ಯಾಂಗ್ ಕಟ್ಟಿಕೊಂಡು ಹವಾ ಸೃಷ್ಠಿಸಲು ಯತ್ನಿಸುತ್ತಿದ್ದ. ಇದೀಗ ಮುಂಬೈನಿಂದ ತಲ್ಲತ್, ಊರಿಗೆ ಬಂದಿದ್ದ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು. ನಗರದ ಕೊಟ್ಟಾರ ಎಂಬಲ್ಲಿ ಬಂಧಿಸಿದ್ದಾರೆ.

ಮುಂಬೈ ಸೇರಿ ಹಲವೆಡೆ ಪ್ರಕರಣಗಳು ದಾಖಲು

ಇನ್ನು ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಇನ್ನು ಆರೋಪಿ ತಲ್ಲತ್ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಜೊತೆಗೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೂಡ ಹಲ್ಲೆ ಪ್ರಕರಣ ಸೇರಿದಂತೆ 28 ಪ್ರಕರಣಗಳಲ್ಲಿ ತಲ್ಲತ್ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ:ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಮೂವರು ಆರೋಪಿಗಳನ್ನು ಮೆಡಿಕಲ್ ಚೆಕಪ್ ಗೆ ಕರೆದೊಯ್ದ ಸಿಸಿಬಿ ಅಧಿಕಾರಿಗಳು

ನಾಪತ್ತೆಯಾಗಿದ್ದ ವೃದ್ಧ ಶವವಾಗಿ ಪತ್ತೆ

ಬೆಳಗಾವಿ: ನಾಲ್ಕು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ವೃದ್ಧ ಇದೀಗ ಬೆಳಗಾವಿ ತಾಲೂಕಿನ ಯಾದಗೂಡ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದೆ. ರಾಮಾ ಇಟ್ನಾಳೆ(60) ಮೃತ ವ್ಯಕ್ತಿ. ಇನ್ನು ಇತ ನಾಲ್ಕು ದಿನಗಳ ಹಿಂದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಮೃತ ರಾಮಾ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ನಿವಾಸಿಯಾಗಿದ್ದು, ಕುಡಿದ ಅಮಲಿನಲ್ಲಿ ನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದನಂತೆ. ನಾಲ್ಕು ದಿನಗಳ ಹಿಂದೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ರಾಮಾ ಅವರ ಮೃತದೇಹ ಸಿಕ್ಕಿದ್ದು, ಪಕ್ಕದಲ್ಲಿಯೇ ಕ್ರಿಮಿನಾಶಕ ಬಾಟಲ್ ಸಹ ಪತ್ತೆಯಾಗಿದೆ. ಸ್ಥಳಕ್ಕೆ ಹುಕ್ಕೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Wed, 20 September 23

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us