ಮದ್ಯದ ಅಮಲಿನಲ್ಲಿ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ; ಬಾಲಕಿ ಸಾವು
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ(Belthangady) ತಾಲೂಕಿನ ಮುಂಡಾಜೆ ಸೀಟು ಬಳಿ ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವರನ್ನು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಸ್ಥಳೀಯರು ಹಿಡಿದಿದ್ದಾರೆ.
ದಕ್ಷಿಣ ಕನ್ನಡ, ಜು.27: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ(Belthangady) ತಾಲೂಕಿನ ಮುಂಡಾಜೆ ಸೀಟು ಬಳಿ ನಡೆದಿದೆ. ಕಲ್ಮಂಜ ಗ್ರಾಮದ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಗಾನವಿ ಪುತ್ರಿಯಾದ ಅನರ್ಘ್ಯ ಮೃತ ಬಾಲಕಿ. ಇನ್ನು ಅಪಘಾತ ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವರನ್ನು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಸ್ಥಳೀಯರು ಹಿಡಿದಿದ್ದಾರೆ.
ಆರನೇ ತರಗತಿಯಲ್ಲಿ ಓದುತ್ತಿದ್ದ ಮೃತ ವಿದ್ಯಾರ್ಥಿ ಅನರ್ಘ್ಯ
ಇನ್ನು ಮೃತ ಅನರ್ಘ್ಯ, ಉಜಿರೆ ಎಸ್‌ಡಿಎಂ ಶಾಲೆಯ ಆರನೇ ತರಗತಿಯಲ್ಲಿ ಓದುತ್ತಿದ್ದರು. ಇಂದು ಬೈಕ್ನಲ್ಲಿ ತೆರಳುತ್ತಿದ್ದಾಗ ಡಿಕ್ಕಿ ಹೊಡೆದ ಬೊಲೆರೊ 30 ಮೀಟರ್ ಎಳೆದುಕೊಂಡು ಹೋಗಿದೆ. ಪರಿಣಾಮ ಸ್ಥಳದಲ್ಲೇ ಅನರ್ಘ್ಯ ಕೊನೆಯುಸಿರೆಳೆದಿದ್ದಾಳೆ. ಅಪಘಾತ ಬಳಿಕ ಬೊಲೆರೊ ವಾಹನ ಸಮೇತ ಪರಾರಿ ಆಗ್ತಿದ್ದ ನಾಲ್ವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ಈ ವೇಳೆ ಓರ್ವ ಎಸ್ಕೇಫ್ ಆಗಿದ್ದಾನೆ. ಬೊಲೆರೊ ವಾಹನದಲ್ಲಿ ತೆರಳುತ್ತಿದ್ದ ನಾಲ್ವರೂ ಮದ್ಯ ಸೇವಿಸಿದ್ದು, ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ
ಟೋಲ್‌ನಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ; ಚಾಲಕ ಸಾವು
ಧಾರವಾಡ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಧಾರವಾಡ ಹೊರವಲಯದ ನರೇಂದ್ರ ಟೋಲ್‌ನಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಲಾರಿ ಚಾಲಕ ಕೊನೆಯುಸಿರೆಳೆದಿದ್ದಾರೆ. ಜು. 25 ರ ಬೆಳಿಗ್ಗೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೀರಾಲಾಲ್ (30), ಮೃತ ಚಾಲಕ. ಟೋಲ್‌ನಲ್ಲಿ ನಿಂತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಚಾಲಕನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:38 pm, Sat, 27 July 24