ಮದ್ಯದ ಅಮಲಿನಲ್ಲಿ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ; ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ(Belthangady) ತಾಲೂಕಿನ ಮುಂಡಾಜೆ ಸೀಟು ಬಳಿ ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವರನ್ನು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಸ್ಥಳೀಯರು ಹಿಡಿದಿದ್ದಾರೆ.

ಮದ್ಯದ ಅಮಲಿನಲ್ಲಿ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ; ಬಾಲಕಿ ಸಾವು
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 27, 2024 | 6:46 PM

ದಕ್ಷಿಣ ಕನ್ನಡ, ಜು.27: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೊಲೆರೊ ವಾಹನ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ(Belthangady) ತಾಲೂಕಿನ ಮುಂಡಾಜೆ ಸೀಟು ಬಳಿ ನಡೆದಿದೆ. ಕಲ್ಮಂಜ ಗ್ರಾಮದ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಗಾನವಿ ಪುತ್ರಿಯಾದ ಅನರ್ಘ್ಯ ಮೃತ ಬಾಲಕಿ. ಇನ್ನು ಅಪಘಾತ ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವರನ್ನು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಸ್ಥಳೀಯರು
ಹಿಡಿದಿದ್ದಾರೆ.

ಆರನೇ ತರಗತಿಯಲ್ಲಿ ಓದುತ್ತಿದ್ದ ಮೃತ ವಿದ್ಯಾರ್ಥಿ ಅನರ್ಘ್ಯ

ಇನ್ನು ಮೃತ ಅನರ್ಘ್ಯ, ಉಜಿರೆ ಎಸ್‌ಡಿಎಂ ಶಾಲೆಯ ಆರನೇ ತರಗತಿಯಲ್ಲಿ ಓದುತ್ತಿದ್ದರು. ಇಂದು ಬೈಕ್​ನಲ್ಲಿ ತೆರಳುತ್ತಿದ್ದಾಗ ಡಿಕ್ಕಿ ಹೊಡೆದ ಬೊಲೆರೊ 30 ಮೀಟರ್ ಎಳೆದುಕೊಂಡು ಹೋಗಿದೆ. ಪರಿಣಾಮ ಸ್ಥಳದಲ್ಲೇ ಅನರ್ಘ್ಯ ಕೊನೆಯುಸಿರೆಳೆದಿದ್ದಾಳೆ. ಅಪಘಾತ ಬಳಿಕ ಬೊಲೆರೊ ವಾಹನ ಸಮೇತ ಪರಾರಿ ಆಗ್ತಿದ್ದ ನಾಲ್ವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ, ಈ ವೇಳೆ ಓರ್ವ ಎಸ್ಕೇಫ್​ ಆಗಿದ್ದಾನೆ. ಬೊಲೆರೊ ವಾಹನದಲ್ಲಿ ತೆರಳುತ್ತಿದ್ದ ನಾಲ್ವರೂ ಮದ್ಯ ಸೇವಿಸಿದ್ದು,
ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ ಒಂದು ಕೋಟಿ ಪರಿಹಾರ

ಟೋಲ್​ನಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ; ಚಾಲಕ ಸಾವು

ಧಾರವಾಡ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಧಾರವಾಡ ಹೊರವಲಯದ ನರೇಂದ್ರ ಟೋಲ್‌ನಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಲಾರಿ ಚಾಲಕ ಕೊನೆಯುಸಿರೆಳೆದಿದ್ದಾರೆ. ಜು. 25 ರ ಬೆಳಿಗ್ಗೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೀರಾಲಾಲ್ (30), ಮೃತ ಚಾಲಕ. ಟೋಲ್​​ನಲ್ಲಿ ನಿಂತಿದ್ದಾಗ, ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಚಾಲಕನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Sat, 27 July 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us