ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ; ನಾಲ್ಕು ಮಕ್ಕಳಿಗೆ ಗಾಯ, 180 ವಿದ್ಯಾರ್ಥಿಗಳು ಬಚಾವ್​​

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 27, 2024 | 6:18 PM

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯವಾದ ಘಟನೆ ನಡೆದಿದೆ. ಅದೃಷ್ಟವಶಾತ್​ 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಫೀಲ್ಡ್ ಇಂಜಿನಿಯರ್​ನನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​​ ಆದೇಶಿಸಿದ್ದಾರೆ.

ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ; ನಾಲ್ಕು ಮಕ್ಕಳಿಗೆ ಗಾಯ, 180 ವಿದ್ಯಾರ್ಥಿಗಳು ಬಚಾವ್​​
ಕುಂತೂರು ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ
Follow us on

ದಕ್ಷಿಣ ಕನ್ನಡ, ಆ.27: ಸರ್ಕಾರಿ ಶಾಲೆ(Government school)ಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹೊರಗೆ ಆಟ ಆಡುತ್ತಿರುವಾಗ ಈ ದುರ್ಘಟನೆ ನಡೆದ ಹಿನ್ನಲೆ ಅದೃಷ್ಟವಶಾತ್​ 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫಾತಿಮತ್ ಸುಹಾನ, ರಶ್ಮಿ, ದೀಕ್ಷೀತಾ ಹಾಗೂ ಯಶ್ಮಿತಾ ಎಂಬುವವರಿಗೆ ಗಾಯಾವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ದೌಡಾಯಿಸಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯ, ಫೀಲ್ಡ್ ಇಂಜಿನಿಯರ್ ಅಮಾನತುಗೊಳಿಸಿ ಡಿಸಿ ಆದೇಶ

ಈ ಘಟನೆ ಸಂಬಂಧಪಟ್ಟಂತೆ ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಕುಂತೂರು ಹಾಗೂ ಫೀಲ್ಡ್ ಇಂಜಿನಿಯರ್​ನನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​​ ಆದೇಶಿಸಿದ್ದಾರೆ. ವಿಪತ್ತು ಪರಿಹಾರ ನಿಧಿಯಲ್ಲಿ ಶಾಲೆ ರಿಪೇರಿಗೆ ಹಣ ಬಂದಿತ್ತು. ಈ ಹಿನ್ನಲೆ ಶಾಲೆಯಲ್ಲಿ ಮಕ್ಕಳನ್ನಿರಿಸಿಕೊಂಡು ರಿಪೇರಿ ಕಾರ್ಯ ಮಾಡುತ್ತಿದ್ದು, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ಮನೆಯೊಳಗಡೆಯೇ ಕುರಿ-ಮೇಕೆಗಳನ್ನ ಬಿಟ್ಟು ಮನೆ ಸೀಜ್ ಮಾಡಿದ ಪೈನಾನ್ಸ್ ಸಿಬ್ಬಂದಿ; 2 ತಿಂಗಳಿಂದ ಮೇವು ನೀಡಲು ವೃದ್ದರ ಪರದಾಟ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಗುದ್ದಿದ ಕಾರು

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆ ಗೋಡೆಗೆ ಕಾರು ಗುದ್ದಿದ ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಕಾರು ಗುದ್ದಿರುವ ರಭಸಕ್ಕೆ ಮನೆಯ ಗೋಡೆ ಕುಸಿದಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Tue, 27 August 24