ಮಂಗಳೂರು: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ
ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಭೀಕರ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಕ್ಷಿಣ ಕನ್ನಡ, ಸೆ.07: ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಗುದ್ದಿ ಹಾರಿ ಕೆಎಸ್ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನು ಇದೇ ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಯಿಲ್ ಲೀಕ್ನಿಂದ ಸರಣಿ ಅಪಘಾತ
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಯಿಲ್ ಲೀಕ್ನಿಂದ ಸರಣಿ ಅಪಘಾತ ಸಂಭವಿಸಿದ್ದು, ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಿಂದ ಮರವಂತೆವರೆಗೆ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರವನ್ನು ಬಂದ್ ಮಾಡಿ, ಪೂರ್ವ ಭಾಗದ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಟ್ಯಾಂಕರ್ ನಿಂದ ಆಯಿಲ್ ಲೀಕಾದ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು, ಬೈಕ್ ಸವಾರರ ಬೈಕ್ ಟೈಯರ್ಗೆ ಆಯಿಲ್ ತಗುಲಿ ಜಾರಿ ಬೀಳುತ್ತಿದ್ದಾರೆ. ಇಂದು ಮುಂಜಾನೆ 7:30 ಸುಮಾರಿಗೆ ಟ್ಯಾಂಕರ್ ಒಂದರಿಂದ ಆಯಿಲ್ ಲೀಕ್ ಆಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕೋಟೇಶ್ವರದ ಬಳಿ ಅಗ್ನಿಶಾಮಕ ದಳದವರು ರೋಡ್ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:36 pm, Sat, 7 September 24