ಮಂಗಳೂರು: ಗೆಲುವಿನ ಸಂಭ್ರಮಾಚಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರ್ ದಾಳಿ

ಬೆಳ್ತಂಗಡಿ(Belthangady) ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್(Congress) ಕಾರ್ಯಕರ್ತನೊಬ್ಬ ತಲವಾರ್​ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದ. ವಿಷಯ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ವಿಚಾರಣೆ ನಡೆಸಿದ್ದಾರೆ.

ಮಂಗಳೂರು: ಗೆಲುವಿನ ಸಂಭ್ರಮಾಚಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರ್ ದಾಳಿ
ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರ್ ದಾಳಿ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 04, 2024 | 9:11 PM

ದಕ್ಷಿಣ ಕನ್ನಡ, ಜೂ.04: ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್(Congress) ಕಾರ್ಯಕರ್ತನೊಬ್ಬ ತಲವಾರ್​ನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ(Belthangady) ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ. ಹಲ್ಲೆಗೊಳಾಗಾದ ಬಿಜೆಪಿ ಕಾರ್ಯಕರ್ತ ರಾಜೇಶ್ ಎಮ್.ಕೆ(33) ಅವರನ್ನು ರಾಜೇಶ್ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಿಜೆಪಿ‌ ಗೆಲುವು ಸಾಧಿಸಿದ್ದಕ್ಕೆ ರಾಜೇಶ್​ ಮತ್ತು ತಂಡ ಪಟಾಕಿ ಸಿಡಿಸಿತ್ತು. ಈ ಹಿನ್ನಲೆ ರೊಚ್ಚಿಗೆದ್ದ ಕಳೆಂಜದ ಕುಶಲಪ್ಪ ಗೌಡ ಕಜೆ ಎಂಬಾತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ವಿಷಯ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ವಿಮ್ಸ್‌ನ ಮಹಿಳಾ ವೈದ್ಯೆ ಮೇಲೆ ಹಲ್ಲೆ

ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ದಿಢೀರ್​ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಎಂದು ಸಿಟ್ಟಾದ ಮಗನೊಬ್ಬ ವಿಮ್ಸ್‌ನ ಮಹಿಳಾ ವೈದ್ಯೆ ಮೇಲೆ ಹಲ್ಲೆ ನಡೆಸಿದ್ದಾನೆ. ಡಾಕ್ಟರ್​ ತಲೆ ಜುಟ್ಟು ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಗೂಡಾರ್‌ನಗರ ನಾಗೇಶ್ ಎಂಬಾತ ಕರ್ತವ್ಯ ನಿರತ ವೈದ್ಯೆ ಮೇಲೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ:ಬೈಕ್ ಟಚ್ ಮಾಡಿರುವುದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಮೇಲೆ ಹಲ್ಲೆ

ನಾಗೇಶ್‌ನ ತಂದೆ ಅನಾರೋಗ್ಯದಿಂದ ವಿಮ್ಸ್‌ಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ನಾಗೇಶ್‌ ಕರ್ತವ್ಯದಲ್ಲಿದ್ದ ವೈದ್ಯೆ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಹಿನ್ನಲೆ ವೈದ್ಯೆ ಮೇಲಿನ ಹಲ್ಲೆ ಖಂಡಿಸಿ ಬಳ್ಳಾರಿಯ ವಿಮ್ಸ್ ತುರ್ತು ಚಿಕಿತ್ಸಾ ಘಟಕದ ಮುಂದೆ ವೈದ್ಯಕೀಯ ವಿದ್ಯಾರ್ಥಿಗಳು ಸೋಮವಾರ ತಡರಾತ್ರಿ ದಿಢೀರ್ ಪ್ರತಿಭಟಿಸಿದರು. ಬಳಿಕ ತಡರಾತ್ರಿ ಘಟನಾ ಸ್ಥಳಕ್ಕೆ ವಿಮ್ಸ್ ನಿರ್ದೇಶಕ ಡಾ.ಗಂಗಾಧರ‌ಗೌಡ್ ಹಾಗೂ ಕೌಲ್‌ಬಜಾರ್ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Tue, 4 June 24