ಚಿಕ್ಕಮ್ಮನ ಮೇಲೆಯೇ ಅತ್ಯಾಚಾರಕ್ಕೆ ಯತ್ನ; ಒಪ್ಪದಿದ್ದಕ್ಕೆ ಕತ್ತು ಹಿಸುಕಿ ಕೊಂದ ಬಾಲಕ
ದಕ್ಷಿಣ ಕನ್ನಡ(Dakshina Kannada) ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆಯ ಬಿಳಿಯೂರು ಎಂಬಲ್ಲಿ ಚಿಕ್ಕಮ್ಮನ ಮೇಲೆಯೇ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ, ಸಹಕರಿಸದ ಹಿನ್ನಲೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ. ಈ ಕುರಿತು ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ದಕ್ಷಿಣ ಕನ್ನಡ, ಜೂ.19: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಬ್ಬಿನಹೊಳೆ ಬಳಿ ಸಿ.ಆರ್.ಪಿ.ಎಫ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸಂಬಂಧದಲ್ಲಿ ಅಕ್ಕನ ಗಂಡನ ತಮ್ಮನಾಗಿರುವವನೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇದೀಗ ಚಿಕ್ಕಮ್ಮನ ಮೇಲೆಯೇ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ, ಸಹಕರಿಸದ ಹಿನ್ನಲೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆಯ ಬಿಳಿಯೂರು ಎಂಬಲ್ಲಿ ನಡೆದಿದೆ. ಹೇಮಾವತಿ(37) ಕೊಲೆಯಾದ ಮಹಿಳೆ.
ಅತ್ಯಾಚಾರದ ಕೃತ್ಯ ಬಯಲಾಗುವ ಭಯದಲ್ಲಿ ಕೊಲೆ
ಜೂ.17 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಮೊದಲು ಮನೆ ಮಂದಿ ಎಲ್ಲರೂ ಪೋಲೀಸರಿಗೆ ಹೃದಯಾಘಾತದಿಂದ ಸಾವು ಎನ್ನುವ ಮಾಹಿತಿ ನೀಡಿದ್ದರು. ಆದರೆ, ಮೃತದೇಹವನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೊಲೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ವಿಚಾರಣೆಯ ವೇಳೆ ಬಾಲಕ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಅತ್ಯಾಚಾರದ ಕೃತ್ಯ ಬಯಲಾಗುವ ಭಯದಲ್ಲಿ ಈ ರೀತಿ ಮಾಡಿದೆ ಎಂದಿದ್ದಾನೆ. ಈ ಕುರಿತು ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಇನ್ಸ್ಟಾಗ್ರಾಂನಿಂದ ಹುಟ್ಟಿದ ಸ್ನೇಹ, ಮಹಿಳೆಗೆ ಕೆಲಸ ಕೊಡಿಸುವುದಾಗಿ ಕರೆದೊಯ್ದು ಹೋಟೆಲ್ನಲ್ಲಿ ಸಾಮೂಹಿಕ ಅತ್ಯಾಚಾರ
ಯೋಧನಿಂದ ಅತ್ಯಾಚಾರ ಪ್ರಯತ್ನ ಆರೋಪ
ನಿನ್ನೆ (ಜೂ.18) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಬ್ಬಿನಹೊಳೆ ಬಳಿ ಸಿ.ಆರ್.ಪಿ.ಎಫ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸಂಬಂಧದಲ್ಲಿ ಅಕ್ಕನ ಗಂಡನ ತಮ್ಮನಾಗಿರುವ ಕೊಟ್ರೇಶ್ (46 ವರ್ಷ) ಎಂಬಾತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ರೇಣುಕಾ ಪಟ್ಟೇದ (40 ವರ್ಷ) ಎಂಬುವವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದೀಗ ಮತ್ತೊಂದು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:41 pm, Wed, 19 June 24