AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023-24ರ ಅವಧಿಯಲ್ಲಿ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ 450 ಕೋಟಿ ರೂ. ಲಾಭ; ನಿರೀಕ್ಷೆ

2023-24ರ ಅವಧಿಯಲ್ಲಿ ನವಮಂಗಳೂರು ಬಂದರು ಪ್ರಾಧಿಕಾರವು 450 ಕೋಟಿ ರೂ. ಲಾಭ ಗಳಿಸುವ ನಿರೀಕ್ಷೆ ಇದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎ.ವಿ.ರಮಣ ಅವರು ಹೇಳಿದರು. ಬಂದರಿಗೆ ಬಂದು ಇಳಿದ ಪ್ರವಾಸಿಗರಿಗೆ ಹೆಲಿ (ಹೆಲಿಕಾಪ್ಟರ್) ಟ್ಯಾಕ್ಸಿ ಸೇವೆಯನ್ನು ಒದಗಿಸಲು ಪ್ರಾಧಿಕಾರ ರಾಜ್ಯ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದೆ ಎಂದರು.

2023-24ರ ಅವಧಿಯಲ್ಲಿ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ 450 ಕೋಟಿ ರೂ. ಲಾಭ; ನಿರೀಕ್ಷೆ
ನವಮಂಗಳೂರು ಬಂದರು ಪ್ರಾಧಿಕಾರ
Follow us
ವಿವೇಕ ಬಿರಾದಾರ
|

Updated on:Aug 21, 2023 | 11:39 AM

ನವದೆಹಲಿ: 2023-24ರ ಅವಧಿಯಲ್ಲಿ ನವಮಂಗಳೂರು ಬಂದರು ಪ್ರಾಧಿಕಾರವು (NMPA) 450 ಕೋಟಿ ರೂ. ಲಾಭ ಗಳಿಸುವ ನಿರೀಕ್ಷೆ ಇದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎ.ವಿ.ರಮಣ ಅವರು ಹೇಳಿದರು. ದೆಹಲಿಯಲ್ಲಿ ನಡೆದ ಮೂರು ದಿನಗಳ 2023 ರ ಜಾಗತಿಕ ಸಾಗರ ಭಾರತ ಶೃಂಗಸಭೆಯ ಕರ್ನಾಟಕ ಪ್ರದೇಶ ಪೂರ್ವಭಾವಿ ಕಾರ್ಯಕ್ರಮ (GMIS) ನಲ್ಲಿ ಮಾತನಾಡಿದ ಅವರು 2022-23ರಲ್ಲಿ ಪ್ರಾಧಿಕಾರಕ್ಕೆ 375 ಕೋಟಿ ರೂ. ನಿವ್ವಳ ಲಾಭ ಬಂದಿದೆ ಎಂದು ಹೇಳಿದರು.

ಇನ್ನು ಬಂದರಿಗೆ ಬಂದು ಇಳಿದ ಪ್ರವಾಸಿಗರಿಗೆ ಹೆಲಿ (ಹೆಲಿಕಾಪ್ಟರ್) ಟ್ಯಾಕ್ಸಿ ಸೇವೆಯನ್ನು ಒದಗಿಸಲು ಪ್ರಾಧಿಕಾರ ರಾಜ್ಯ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದೆ. ಪ್ರವಾಸಿಗರನ್ನು ಇಲ್ಲಿಂದ ಟೇಕ್ ಆಫ್ ಮಾಡಿಕೊಂಡು ಹತ್ತಿರದ ಪ್ರವಾಸಿ ತಾಣಗಳಿಗೆ ಶೀಘ್ರದಲ್ಲೇ ತಲುಪಿಸಬಹುದು. ಅವರು ಪ್ರವಾಸಿ ತಾಣಗಳನ್ನು ಸುತ್ತಾಡಿಕೊಂಡು ಸಂಜೆಯ ವೇಳೆಗೆ ಹಡಗಿಗೆ ಮರಳಲು ಅನುಕೂಲವಾಗಲಿದೆ. ಪ್ರವಾಸಿಗರು, ಪ್ರವಾಸಿ ತಾಣಗಳಿಗೆ ಹೋಗುವುದಿಂದ ಸ್ಥಳೀಯ ಆರ್ಥಿಕತೆಯ ಬೆಳವಣಿಗೆಯಾಗುತ್ತದೆ ಎಂದು ಹೇಳಿದರು.

ಬಂದರಿಗೆ ರಸ್ತೆ ಸಂಪರ್ಕ ಸಮಸ್ಯೆಯಾಗಿದ್ದು, ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಬಿ.ಸಿ.ರೋಡ್ ಮತ್ತು ಹಾಸನ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಅಗಲಿಕರಣ ಕಾಮಗಾರಿ ಬಾಕಿ ಉಳಿದಿದೆ. 2024ರ ಫೆಬ್ರವರಿ ಒಳಗೆ ಇದು ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದರು.

ಇದನ್ನೂ ಓದಿ: ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಕಾಲೇಜಿನಲ್ಲಿ ಬಿಲ್ಡಪ್ ಕೊಡ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

ಕರ್ನಾಟಕದಲ್ಲಿ ಪ್ರವಾಸೋದ್ಯಮದ ಹೆಬ್ಬಾಗಿಲು ಮಂಗಳೂರು ಆಗಬೇಕು. ಮಂಗಳೂರನ್ನು ಬಂದರು, ಕಡಲ ಸಂಶೋಧನೆ ಮತ್ತು ಕೈಗಾರಿಕೆಗಳ ಶ್ರೇಷ್ಠ ಕೇಂದ್ರವಾಗಿ ಉತ್ತೇಜಿಸಬೇಕು. ನಗರವನ್ನು ಮಲ್ಟಿ ಮಾದರಿ ಲಾಜಿಸ್ಟಿಕ್ ಹಬ್ ಆಗಿ ಅಭಿವೃದ್ಧಿಪಡಿಸಲು ವಾತಾವರಣ ಸೃಷ್ಠಿಯಾಗಬೇಕೆಂದು ದಕ್ಷಿಣ ಕನ್ನಡ ಸಂಸದ ಮುಲ್ಲೈ ಮುಹಿಲನ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಎ.ರಾಘವೇಂದ್ರರಾವ್, ಸಿಐಐನ ಮಂಗಳೂರು ವಿಭಾಗದ ಅಧ್ಯಕ್ಷ ಪ್ರವೀಣ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Mon, 21 August 23

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ