AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬೆನ್ನಲ್ಲೇ ಮಂಗಳೂರಿನಲ್ಲೂ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಟೇಕಾಫ್ ವೇಳೆ ತಪ್ಪಿತು ಭಾರೀ ಅನಾಹುತ

ಬೆಂಗಳೂರಿನ ಬೆನ್ನಲ್ಲೇ ಮಂಗಳೂರಿನಲ್ಲೂ ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. 229 ಪ್ರಯಾಣಿಕರು, 7 ಸಿಬ್ಬಂದಿ ಇದ್ದ ವಿಮಾನದ ಚಕ್ರದಲ್ಲಿ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆ ಮೆರೆದು ವಿಮಾನವನ್ನು ರನ್‌ವೇನಲ್ಲೇ ನಿಲ್ಲಿಸಿ ಸಂಭವಿಸಬಹುದಾಗಿದ್ದ ದುರಂತವನ್ನು ತಪ್ಪಿಸಿದ್ದಾರೆ. ಒಂದೇ ದಿನ ರಾಜ್ಯದಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷದ 2 ಘಟನೆಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಿನ ಬೆನ್ನಲ್ಲೇ ಮಂಗಳೂರಿನಲ್ಲೂ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಟೇಕಾಫ್ ವೇಳೆ ತಪ್ಪಿತು ಭಾರೀ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Nov 17, 2026 | 7:35 AM

Share

ಮುಖ್ಯಾಂಶಗಳು

  • ಬೆಂಗಳೂರಿನ ಬೆನ್ನಲ್ಲೇ ಮಂಗಳೂರಿನಲ್ಲಿಯೂ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ
  • ಟೇಕಾಫ್ ವೇಳೆ ತಪ್ಪಿದ ದುರಂತ
  • ಪೈಲೆಟ್ ಸಮಯ ಪ್ರಜ್ಞೆಗೆ ವ್ಯಾಪಕ ಪ್ರಶಂಸೆ

ಮಂಗಳೂರು, ನವೆಂಬರ್ 17: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವೊಂದರಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಬೆನ್ನಲ್ಲೇ, ಮಂಗಳೂರು ವಿಮಾನ ನಿಲ್ದಾಣದಲ್ಲೂ ಇಂತಹದ್ದೇ ಘಟನೆ ನಡೆದಿದೆ. ಟೇಕಾಫ್‌ಗೆ ಕೆಲವೇ ಕ್ಷಣಗಳು ಬಾಕಿ ಇರುವಾಗ ವಿಮಾನದಲ್ಲಿ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ. ಸೋಮವಾರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ.

229 ಪ್ರಯಾಣಿಕರು, 7 ಸಿಬ್ಬಂದಿ ಇದ್ದ ವಿಮಾನ

229 ಪ್ರಯಾಣಿಕರು ಮತ್ತು ಏಳು ಮಂದಿ ಸಿಬ್ಬಂದಿ ಇದ್ದ ವಿಮಾನ ಸಂಜೆ 6.10ರ ಸುಮಾರಿಗೆ ಟೇಕಾಫ್‌ಗೆ ಸಿದ್ಧವಾಗಿತ್ತು. ರನ್‌ವೇನಲ್ಲಿ ವೇಗವಾಗಿ ಸಾಗುತ್ತಿದ್ದ ವಿಮಾನ ಟೇಕಾಫ್ ಆಗಲು ಸುಮಾರು 100 ಮೀಟರ್ ಅಂತರ ಬಾಕಿ ಇರುವಾಗ ಅದರ ಕೆಳಭಾಗದಲ್ಲಿ ಬೆಂಕಿಯ ಕಿಡಿಯೊಂದಿಗೆ ಸ್ಪಾರ್ಕ್ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪೈಲಟ್ ತಕ್ಷಣವೇ ವಿಮಾನದ ವೇಗವನ್ನು ಕಡಿಮೆ ಮಾಡಿ ರನ್‌ವೇನಲ್ಲೇ ನಿಲ್ಲಿಸಿದ್ದಾರೆ. ವಿಮಾನದ ಚಕ್ರವೊಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದೆ. ಪೈಲಟ್ ಸಕಾಲದಲ್ಲಿ ವಿಮಾನವನ್ನು ನಿಲ್ಲಿಸಿದ್ದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಟೇಕಾಫ್‌ನ ಕೊನೆಯ ಕ್ಷಣದಲ್ಲಿ ವಿಮಾನವನ್ನು ನಿಲ್ಲಿಸಿದ ಪೈಲಟ್‌ನ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಮಾನ ಟೇಕಾಫ್ ಆಗಿದ್ದರೆ ಅಪಾಯ ಸಂಭವಿಸುವ ಸಾಧ್ಯತೆಯಿತ್ತು ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಿಂದ ಹೊರಟ್ಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಇದಕ್ಕೂ ಮುನ್ನ ಬೆಂಗಳೂರಿನಿಂದ ಮಧುರೈಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲೂ ಟೇಕಾಫ್ ವೇಳೆ ಹೈಡ್ರಾಲಿಕ್ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. 92 ಪ್ರಯಾಣಿಕರಿದ್ದ ಆ ವಿಮಾನವನ್ನು ಪೈಲಟ್ ತುರ್ತು ಬ್ರೇಕ್ ಹಾಕಿ ರನ್‌ವೇನಲ್ಲೇ ನಿಲ್ಲಿಸಿದ್ದರು. ಒಂದೇ ದಿನ ರಾಜ್ಯದ ಎರಡು ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ವಿಮಾನಗಳಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಗಮನ ಸೆಳೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ