ಮಂಗಳೂರು: ಕರ್ತವ್ಯದಲ್ಲೇ ಗುಪ್ತಚರ ಇಲಾಖೆ ಸಿಬ್ಬಂದಿಗೆ ಹೃದಯಾಘಾತ; ಸ್ಥಳದಲ್ಲೇ ಸಾವು
ಇಂದು(ಸೆ.16) ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಎ ಎಸ್.ಐ ರಾಜೇಶ್ ಬಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ, ಸೆ.16: ಕರ್ತವ್ಯದಲ್ಲಿ ಇದ್ದಾಗಲೇ ಗುಪ್ತಚರ ಇಲಾಖೆ ಸಿಬ್ಬಂದಿಗೆ ಹೃದಯಾಘಾತವಾಗಿ (Heart Attack) ಸಾವನ್ನಪ್ಪಿದ ಘಟನೆ ನಡೆದಿದೆ. ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತ ಸಿಬ್ಬಂದಿ. ಇಂದು(ಸೆ.16) ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಎ ಎಸ್.ಐ ರಾಜೇಶ್ ಬಿ ಕುಸಿದು ಬಿದ್ದಿದ್ದಾರೆ. 1993 ನೇ ಬ್ಯಾಚ್ನ ಪೂಲೀಸ್ ಸಿಬ್ಬಂದಿಯಾಗಿದ್ದ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿಯೂ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಅಂತರ್ ರಾಜ್ಯ ಬೈಕ್ ಕಳ್ಳನ ಬಂಧನ
ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಸೂರ್ಯನಗರ ಪೋಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಂತರ್ ರಾಜ್ಯ ಬೈಕ್ ಕಳ್ಳನನ್ನು ಬಂಧಿಸಿದ್ದಾರೆ. ತಮಿಳುನಾಡಿನ ಬೇರಿಕೆ ನಿವಾಸಿ ನರಸಿಂಹ(28) ಬಂಧಿತ ಆರೋಪಿ. ಇತ ಶೋಕಿಗಾಗಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಎಂಬುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಇನ್ನು ಬಂಧಿತನಿಂದ 15 ಲಕ್ಷ ರೂ ಮೌಲ್ಯದ 13 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಬಂಧಿಸಿ ಸೂರ್ಯನಗರ ಪೋಲೀಸರು ಜೈಲಿಗೆ ಅಟ್ಟಿದ್ದಾರೆ.
ಇದನ್ನೂ ಓದಿ:ಮಹಿಳೆಯರಲ್ಲಿ ಈ ಸಮಸ್ಯೆಗಳು ಹೃದಯಾಘಾತದ ಲಕ್ಷಣಗಳೂ ಆಗಿರಬಹುದು!
ತೋಟಕ್ಕೆ ನುಗ್ಗಿ 5 ಲಕ್ಷ ಮೌಲ್ಯದ ದಾಳಿಂಬೆ ಕಳುವು
ಚಿಕ್ಕಬಳ್ಳಾಪುರ: ಈ ಹಿಂದೆ ಟೊಮೆಟೊ ಬೆಳೆಗೆ ಕಳ್ಳರ ಕಾಟ ಹೆಚ್ಚಾಗಿತ್ತು. ಇದೀಗ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವರ ಗ್ರಾಮದ ಬಳಿಯಿರುವ ರೈತ ಚನ್ನಕೇಶವ ಎಂಬುವವರ ಜಮೀನಿನಲ್ಲಿ ವಿದ್ಯುತ್ ತಂತಿ ಬೇಲಿ ಕಟ್ ಮಾಡಿ, ಸಿಸಿಕ್ಯಾಮರಾ ಬಂದ್ ಮಾಡಿ, 5 ಲಕ್ಷ ರೂ ಮೌಲ್ಯದ ದಾಳಿಂಬೆಯನ್ನು ಕಳವು ಮಾಡಿದ್ದಾರೆ. ಕಷ್ಟಪಟ್ಟು ಬೆಳೆದಿರುವ ದಾಳಿಂಬೆ ಬೆಳೆ ಉಳಿಸಿಕೊಳ್ಳಲು ರೈತರು ಪರದಾಟ ನಡೆಸುವಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ