ಕತಾರ್ ಮೇಲೆ ಇರಾನ್ ದಾಳಿ: ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

ಇರಾನ್, ಇಸ್ರೇಲ್, ಅಮೆರಿಕ ಸಂಘರ್ಷದ ಬಿಸಿ ಮಂಗಳೂರು ಅಂತಾರಾಷ್ಟ್ರೀಯ ವಿಮನ ನಿಲ್ದಾಣದಿಂದ ಪ್ರಯಾಣಿಸುವವರಿಗೂ ತಟ್ಟಿದೆ. ಮಧ್ಯಪ್ರಾಚ್ಯದ ದೇಶಗಳು ವಾಯುಮಾರ್ಗಗಳನ್ನು ಬಂದ್ ಮಾಡಿದ ಕಾರಣ, ಮಂಗಳೂರಿನಿಂದ ಹೊರಟಿದ್ದ ಎರಡು ವಿಮಾನಗಳು ವಾಪಸಾಗಿವೆ. ಅಲ್ಲದೆ, ವಿದೇಶಗಳಿಗೆ ಹೋಗುವ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಈ ಬಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮನ ನಿಲ್ದಾಣ ಮಾಹಿತಿ ಹಂಚಿಕೊಂಡಿದೆ.

ಕತಾರ್ ಮೇಲೆ ಇರಾನ್ ದಾಳಿ: ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ
ಮಂಗಳೂರು ಅಂತಾರಾಷ್ಟ್ರೀಯ ವಿಮನ ನಿಲ್ದಾಣ
Edited By:

Updated on: Jun 24, 2025 | 9:39 AM

ಮಂಗಳೂರು, ಜೂನ್ 24: ಕೊಲ್ಲಿ ರಾಷ್ಟ್ರ ಕತಾರ್​ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿರುವ ಕಾರಣ ಮಂಗಳೂರು ಅಂತಾರಾಷ್ಟ್ರೀಯ ವಿಮನ ನಿಲ್ದಾಣದಿಂದ (Mangaluru Airport) ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಮಂಗಳೂರಿನಿಂದ (Mangaluru) ಹೊರಟಿದ್ದ ಎರ್ ಇಂಡಿಯಾ ಎಕ್ಸ್‌ಪ್ರೆಸ್‌ ದಮ್ಮಾಮ್‌ಗೆ ಹೋಗುವ ಬದಲು ಮುಸ್ಕತ್‌ ಕಡೆ ತಿರುಗಿಸಲಾಗಿತ್ತು. ಅಬುದಾಭಿಗೆ ಹೋಗುವ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿತ್ತು. ಇದೀಗ ಎರಡೂ ವಿಮಾನಗಳು ಮಂಗಳೂರಿಗೆ ವಾಪಸ್ ಆಗಿವೆ.

ಇರಾನ್ ಮಿಸೈಲ್ ದಾಳಿ ಮಾಡಿದ ಕಾರಣ ಮಧ್ಯಪ್ರಾಚ್ಯದ ದೇಶಗಳು ವಾಯುಮಾರ್ಗಗಳನ್ನು ಬಂದ್ ಮಾಡಿವೆ. ಅಲ್ಲಿನ ವಿಮಾನಯಾನ ವಲಯ ಮುಚ್ಚಲ್ಪಟ್ಟ ಕಾರಣ ವಿಮಾನಗಳು ಮಂಗಳೂರಿಗೆ ವಾಪಸಾಗಿವೆ.

ಇದನ್ನೂ ಓದಿ
ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್​ಐಆರ್
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ನಷ್ಟದಲ್ಲಿದ್ದ ದಾವಣಗೆರೆ ರೈತರ ಕೈ ಹಿಡಿದ ಡ್ರ್ಯಾಗನ್ ಫ್ರೂಟ್

ಮಂಗಳೂರಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಬಗ್ಗೆ ಏರ್​ಪೋರ್ಟ್ ಆಡಳಿತ ಮಾಹಿತಿ ನೀಡಿದೆ. ವಿಮಾನ ನಿಲ್ದಾಣಕ್ಕೆ ಬರುವ ಮುನ್ನ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಪ್ರಯಾಣಿಕರಿಗೆ ಮನವಿ ಮಾಡಲಾಗಿದೆ.

ಮಂಗಳೂರು ವಿಮಾನ ನಿಲ್ದಾಣ ಎಕ್ಸ್ ಸಂದೇಶ


ಇಸ್ರೇಲ್ ಇರಾನ್ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಅಮೆರಿಕ ಕೂಡ ಇರಾನ್​​ನ ಪರಮಾಣು ಘಟಗಳ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆ, ಕೊಲ್ಲಿ ರಾಷ್ಟ್ರ ಕತಾರ್​ನಲ್ಲಿರುವ ಅಮೇರಿಕಾ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಮಾಹಿತಿ ನೀಡಿದ್ದು, ಇರಾನ್ ದಾಳಿಯಿಂದ ಅಮೆರಿಕ ನೆಲೆಗಳಿಗೆ ಏನೂ ಹಾನಿಯಾಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕತಾರ್‌ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಈ ಸಂಘರ್ಷದ ಬೆನ್ನಲ್ಲೇ ಮಧ್ಯಪ್ರಾಚ್ಯ ದೇಶಗಳು ಏರ್​ಸ್ಪೇಸ್​ ಬಂದ್ ಮಾಡಿವೆ. ಇದರ ಬಿಸಿ ಮಂಗಳೂರಿನ ಪ್ರಯಾಣಿಕರಿಗೂ ತಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us