ಹಮಾಸ್ ಉಗ್ರರಿಗೆ ಜಯ ಸಿಗಲಿ ಎಂದ ಮಂಗಳೂರಿನ ಝಾಕಿರ್; ವಿಡಿಯೋ ವೈರಲ್​​

ಪ್ಯಾಲೆಸ್ತೀನ್​, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ. ಹಮಾಸಿಗರು​​ ದೇಶ ಪ್ರೇಮಿ ಯೋಧರು. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸಬೇಕು ಎಂದು ಝಾಕಿರ್ ಹೇಳಿದ್ದಾನೆ.

ಮಂಗಳೂರು ಅ.14: ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್ (Israel-Hamas War) ​ಉಗ್ರರ ನಡುವೆ ಯುದ್ಧ ಆರಂಭವಾಗಿ ಏಳು ದಿನಗಳು ಕಳೆದಿವೆ. ಈ ಯುದ್ಧದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಇಸ್ರೇಲ್​ನಲ್ಲಿ‌ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ (Mangaluru) ವ್ಯಕ್ತಿಯೊಬ್ಬ ವಿಡಿಯೋ ಹರಿಬಿಟ್ಟಿದ್ದಾನೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್‌ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ “ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು” ಎಂದು ಕರೆದಿದ್ದಾನೆ.

ಪ್ಯಾಲೆಸ್ತೀನ್​, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ. ಹಮಾಸಿಗರು​​ ದೇಶ ಪ್ರೇಮಿ ಯೋಧರು. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸಬೇಕು ಎಂದು ಝಾಕಿರ್ ಹೇಳಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಝಾಕಿರ್ ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂ‌ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಝಾಕಿರ್​ನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

 ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆಯಿಂದ ವೈಮಾನಿಕ ದಾಳಿ

ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆಯಿಂದ ವೈಮಾನಿಕ ದಾಳಿ ಮಾಡಿದ್ದು, 70 ಜನ ಮೃತಪಟ್ಟಿದ್ದಾರೆ. ಇಸ್ರೇಲ್​ 24 ಗಂಟೆಯಲ್ಲಿ ಗಾಜಾಪಟ್ಟಿ ತೊರೆಯಲು ಜನರಿಗೆ ಗಡುವು ನೀಡಿತ್ತು. ಗಡುವು ಮುಕ್ತಾಯ ಹಿನ್ನೆಲೆ ಗಾಜಾಪಟ್ಟಿ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಇದರಿಂದ ಗಾಜಾಪಟ್ಟಿ ತೊರೆಯುತ್ತಿದ್ದ 70 ಜನ ಸಾವೀಗಿಡಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:16 am, Sat, 14 October 23

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us