Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ -ಸ್ಪೀಕರ್ ಯು.ಟಿ.ಖಾದರ್

ಊಟ ಸಿಗದಿದ್ರು ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ. ನ್ಯಾಯ ಕೊಡದೆ ತಮ್ಮ ಉದ್ದೇಶ ಅಂತಾ ಪೊಲೀಸರು ಕರ್ತವ್ಯ ನಿರ್ಹಹಿಸಬೇಕು. 90% ಒಳ್ಳೆಯವರಿದ್ದು, ಹತ್ತು ಪರ್ಸೆಂಟ್ ಕೆಟ್ವವರಿದ್ರೆ ಈ 90% ಪೊಲೀಸರಿಗೆ ಕೆಟ್ಟ ಹೆಸರು ಬರುತ್ತೆ. ಆದ್ರಿಂದ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸರಿಯಾಗಿ ಕೆಸಲ ಮಾಡಿ ಎಂದು ಯು.ಟಿ.ಖಾದರ್ ಹೇಳಿದರು.

ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ -ಸ್ಪೀಕರ್ ಯು.ಟಿ.ಖಾದರ್
ಯು.ಟಿ.ಖಾದರ್
Follow us
TV9 Web
| Updated By: ಆಯೇಷಾ ಬಾನು

Updated on: Oct 29, 2023 | 2:25 PM

ಮಂಗಳೂರು, ಅ.29: ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ. ಪೊಲೀಸರು ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಮಂಗಳೂರಿನ ಪಿಲಿಕುಳದಲ್ಲಿ ನಡೆಯುತ್ತಿರುವ ಪೊಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ (UT Khader) ಹೇಳಿದರು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರಿಂದ ನೂತನ ಬಜ್ಪೆ ಪೊಲೀಸ್ ಠಾಣೆ, ಮಂಗಳೂರು ಗ್ರಾಮಾಂತರ ಠಾಣೆ, ಸಿಎಆರ್ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಶಾಸಕ ಭರತ್ ಶೆಟ್ಟಿ ಭಾಗಿ, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಉಪಸ್ಥಿತರಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಪೀಕರ್​​ ಯು.ಟಿ.ಖಾದರ್, ಊಟ ಸಿಗದಿದ್ರು ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ ಎಂದರು.

ನ್ಯಾಯ ಕೊಡದೆ ತಮ್ಮ ಉದ್ದೇಶ ಅಂತಾ ಪೊಲೀಸರು ಕರ್ತವ್ಯ ನಿರ್ಹಹಿಸಬೇಕು. 90% ಒಳ್ಳೆಯವರಿದ್ದು, ಹತ್ತು ಪರ್ಸೆಂಟ್ ಕೆಟ್ವವರಿದ್ರೆ ಈ 90% ಪೊಲೀಸರಿಗೆ ಕೆಟ್ಟ ಹೆಸರು ಬರುತ್ತೆ. ಆದ್ರಿಂದ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸರಿಯಾಗಿ ಕೆಸಲ ಮಾಡಿ. ಒಂದು ಠಾಣಾ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಇದ್ರೆ. ಆ ಲಿಮಿಟ್ಸ್ ನಲ್ಲಿ ಯಾವುದೇ ತೊಂದರೆ ಆಗೋದಿಲ್ಲ ಎಂದು ಯು.ಟಿ.ಖಾದರ್ ಪೊಲೀಸರಿಗೆ ಪ್ರಾಮಾಣಿಕತೆಯ ಪಾಠ ಮಾಡಿದರು

ಇದನ್ನೂ ಓದಿ: ಬೆರಳು ಕೊಟ್ಟರೆ ಹಸ್ತ ನುಂಗಿದ್ರಾ? ಸಿಎಂ, ಸಚಿವರಿಗೆ ಮಾಹಿತಿ ನೀಡಿದೇ ವರ್ಗಾವಣೆ ಪಟ್ಟಿ ತಯಾರಿಸಿದ ಅಧಿಕಾರಿಗಳು

ರಾಜ್ಯದಲ್ಲಿ ಮೂರ್ನಾಲ್ಕು ತಿಂಗಳಿಂದ ಕ್ರೈಂ ರೇಟ್ ಕಡಿಮೆಯಾಗಿದೆ

ಇನ್ನು ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್, ರಾಜ್ಯದಲ್ಲಿ ಮೂರ್ನಾಲ್ಕು ತಿಂಗಳಿಂದ ಕ್ರೈಂ ರೇಟ್ ಕಡಿಮೆಯಾಗಿದೆ. ಆದರೆ ವೈಟ್ ಕಾಲರ್ ಕ್ರೈಂ ಆದ ಸೈಬರ್ ಕ್ರೈಂ ಹೆಚ್ಚಾಗಿದೆ. ಅದಕ್ಕಾಗಿ ಏನು ಕ್ರಮ ಆಗಬೇಕು ಅದನ್ನು ಮಾಡುತ್ತಿದ್ದೇವೆ. ದ.ಕನ್ನಡ ಜಿಲ್ಲೆಯಲ್ಲಿ ಕಮಿಷನರ್​, SPಗೆ ಟಾರ್ಗೆಟ್ ಕೊಟ್ಟಿದ್ದೇನೆ‌. ಕರಾವಳಿ ಭಾಗದಲ್ಲಿ ಶಾಂತಿ ಕಾಪಾಡಬೇಕು ಅಂತಾ ಹೇಳಿದ್ದೇನೆ. ಇಲ್ಲದಿದ್ರೆ ನಿಮ್ಮನ್ನು ಟಾರ್ಗೆಟ್ ಮಾಡುತ್ತೇನೆ ಅಂತಾ ಹೇಳಿದ್ದೇನೆ. ಠಾಣೆಗೆ ಬರುವವರ ಜೊತೆ ಸಮಾಧಾನವಾಗಿ ವ್ಯವಹರಿಸಬೇಕು. ನ್ಯಾಯ ಸಿಗುತ್ತೆ ಅಂತಾ ಅನ್ನಿಸಿ ಅವರು ವಾಪಸ್ ಹೋಗಬೇಕು. ರಾಜ್ಯದಲ್ಲಿ ಸೆಂಟ್ರಲ್ ಕಮಾಂಡ್ ಸೆಂಟರ್ ಸ್ಥಾಪಿಸುತ್ತಿದ್ದೇವೆ. 134 ಕೋಟಿ ವೆಚ್ಚದಲ್ಲಿ ಕಟ್ಟಡ ಮತ್ತು ಇನ್ಫಾಸ್ಟ್ರಕ್ಚರ್ ತಯಾರಾಗಿದೆ. ಇಡೀ ರಾಜ್ಯದ ಯಾವ ಪೊಲೀಸ್ ಠಾಣೆಯಲ್ಲಿ ಏನು ನಡೀತಾ ಇದೆ ಎಂಬ ಬಗ್ಗೆ ಬೆಂಗಳೂರಿನ ಒಂದೇ ಕಟ್ಟಡದಲ್ಲಿ ಗೊತ್ತಾಗಲಿದೆ. ಶೀಘ್ರದಲ್ಲೇ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದೇವೆ ಎಂದರು.

ಜಿ.ಪರಮೇಶ್ವರ್ ಎದುರಲ್ಲೇ ಸಿಎಂ ಆಗಿ ಬನ್ನಿ ಎಂದ ಶಾಸಕ

ಕಾಂಗ್ರೆಸ್​ನ ಮುಖ್ಯಮಂತ್ರಿ ಗಾದಿಯ ಬೆಂಕಿಗೆ ಬಿಜೆಪಿ ಶಾಸಕ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಗೃಹ ಸಚಿವರಿಗೆ, ನೀವು ಸಿಎಂ ಆಗಿ ಮಂಗಳೂರಿಗೆ ಬನ್ನಿ ಎಂದು ಭಾಷಣದ ವೇಳೆ ಶಾಸಕ ಭರತ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ಡಾ.ಜಿ.ಪರಮೇಶ್ವರ್ ನಕ್ಕು ಸುಮ್ಮನಾದರು.

ಕರ್ನಾಟಕದಲ್ಲಿ ಹೈ ಅಲರ್ಟ್​ಗೆ ಜಿ.ಪರಮೇಶ್ವರ್ ಸೂಚನೆ

ಕೇರಳದ ಎರ್ನಾಕುಲಮ್​ನಲ್ಲಿ ಸರಣಿ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು ಕರ್ನಾಟಕದಲ್ಲೂ ಹೈಅಲರ್ಟ್​ ಇರುವಂತೆ ಅಧಿಕಾರಿಗಳಿಗೆ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್  ಸೂಚನೆ ನೀಡಿದ್ದಾರೆ. ಎಲ್ಲೆಡೆ ಕಟ್ಟೆಚ್ಚರವಹಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ