ಮಂಗಳೂರು, ಅ.29: ಊಟ ಸಿಗದಿದ್ರೂ ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ. ಪೊಲೀಸರು ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಮಂಗಳೂರಿನ ಪಿಲಿಕುಳದಲ್ಲಿ ನಡೆಯುತ್ತಿರುವ ಪೊಲೀಸ್ ಇಲಾಖೆ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ (UT Khader) ಹೇಳಿದರು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರಿಂದ ನೂತನ ಬಜ್ಪೆ ಪೊಲೀಸ್ ಠಾಣೆ, ಮಂಗಳೂರು ಗ್ರಾಮಾಂತರ ಠಾಣೆ, ಸಿಎಆರ್ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಶಾಸಕ ಭರತ್ ಶೆಟ್ಟಿ ಭಾಗಿ, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಉಪಸ್ಥಿತರಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್, ಊಟ ಸಿಗದಿದ್ರು ಪರವಾಗಿಲ್ಲ, ಜನರಿಗೆ ನ್ಯಾಯ ತುಂಬಾ ಅಗತ್ಯ ಎಂದರು.
ನ್ಯಾಯ ಕೊಡದೆ ತಮ್ಮ ಉದ್ದೇಶ ಅಂತಾ ಪೊಲೀಸರು ಕರ್ತವ್ಯ ನಿರ್ಹಹಿಸಬೇಕು. 90% ಒಳ್ಳೆಯವರಿದ್ದು, ಹತ್ತು ಪರ್ಸೆಂಟ್ ಕೆಟ್ವವರಿದ್ರೆ ಈ 90% ಪೊಲೀಸರಿಗೆ ಕೆಟ್ಟ ಹೆಸರು ಬರುತ್ತೆ. ಆದ್ರಿಂದ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸರಿಯಾಗಿ ಕೆಸಲ ಮಾಡಿ. ಒಂದು ಠಾಣಾ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಇದ್ರೆ. ಆ ಲಿಮಿಟ್ಸ್ ನಲ್ಲಿ ಯಾವುದೇ ತೊಂದರೆ ಆಗೋದಿಲ್ಲ ಎಂದು ಯು.ಟಿ.ಖಾದರ್ ಪೊಲೀಸರಿಗೆ ಪ್ರಾಮಾಣಿಕತೆಯ ಪಾಠ ಮಾಡಿದರು
ಇದನ್ನೂ ಓದಿ: ಬೆರಳು ಕೊಟ್ಟರೆ ಹಸ್ತ ನುಂಗಿದ್ರಾ? ಸಿಎಂ, ಸಚಿವರಿಗೆ ಮಾಹಿತಿ ನೀಡಿದೇ ವರ್ಗಾವಣೆ ಪಟ್ಟಿ ತಯಾರಿಸಿದ ಅಧಿಕಾರಿಗಳು
ಇನ್ನು ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್, ರಾಜ್ಯದಲ್ಲಿ ಮೂರ್ನಾಲ್ಕು ತಿಂಗಳಿಂದ ಕ್ರೈಂ ರೇಟ್ ಕಡಿಮೆಯಾಗಿದೆ. ಆದರೆ ವೈಟ್ ಕಾಲರ್ ಕ್ರೈಂ ಆದ ಸೈಬರ್ ಕ್ರೈಂ ಹೆಚ್ಚಾಗಿದೆ. ಅದಕ್ಕಾಗಿ ಏನು ಕ್ರಮ ಆಗಬೇಕು ಅದನ್ನು ಮಾಡುತ್ತಿದ್ದೇವೆ. ದ.ಕನ್ನಡ ಜಿಲ್ಲೆಯಲ್ಲಿ ಕಮಿಷನರ್, SPಗೆ ಟಾರ್ಗೆಟ್ ಕೊಟ್ಟಿದ್ದೇನೆ. ಕರಾವಳಿ ಭಾಗದಲ್ಲಿ ಶಾಂತಿ ಕಾಪಾಡಬೇಕು ಅಂತಾ ಹೇಳಿದ್ದೇನೆ. ಇಲ್ಲದಿದ್ರೆ ನಿಮ್ಮನ್ನು ಟಾರ್ಗೆಟ್ ಮಾಡುತ್ತೇನೆ ಅಂತಾ ಹೇಳಿದ್ದೇನೆ. ಠಾಣೆಗೆ ಬರುವವರ ಜೊತೆ ಸಮಾಧಾನವಾಗಿ ವ್ಯವಹರಿಸಬೇಕು. ನ್ಯಾಯ ಸಿಗುತ್ತೆ ಅಂತಾ ಅನ್ನಿಸಿ ಅವರು ವಾಪಸ್ ಹೋಗಬೇಕು. ರಾಜ್ಯದಲ್ಲಿ ಸೆಂಟ್ರಲ್ ಕಮಾಂಡ್ ಸೆಂಟರ್ ಸ್ಥಾಪಿಸುತ್ತಿದ್ದೇವೆ. 134 ಕೋಟಿ ವೆಚ್ಚದಲ್ಲಿ ಕಟ್ಟಡ ಮತ್ತು ಇನ್ಫಾಸ್ಟ್ರಕ್ಚರ್ ತಯಾರಾಗಿದೆ. ಇಡೀ ರಾಜ್ಯದ ಯಾವ ಪೊಲೀಸ್ ಠಾಣೆಯಲ್ಲಿ ಏನು ನಡೀತಾ ಇದೆ ಎಂಬ ಬಗ್ಗೆ ಬೆಂಗಳೂರಿನ ಒಂದೇ ಕಟ್ಟಡದಲ್ಲಿ ಗೊತ್ತಾಗಲಿದೆ. ಶೀಘ್ರದಲ್ಲೇ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದೇವೆ ಎಂದರು.
ಕಾಂಗ್ರೆಸ್ನ ಮುಖ್ಯಮಂತ್ರಿ ಗಾದಿಯ ಬೆಂಕಿಗೆ ಬಿಜೆಪಿ ಶಾಸಕ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಗೃಹ ಸಚಿವರಿಗೆ, ನೀವು ಸಿಎಂ ಆಗಿ ಮಂಗಳೂರಿಗೆ ಬನ್ನಿ ಎಂದು ಭಾಷಣದ ವೇಳೆ ಶಾಸಕ ಭರತ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ಡಾ.ಜಿ.ಪರಮೇಶ್ವರ್ ನಕ್ಕು ಸುಮ್ಮನಾದರು.
ಕೇರಳದ ಎರ್ನಾಕುಲಮ್ನಲ್ಲಿ ಸರಣಿ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು ಕರ್ನಾಟಕದಲ್ಲೂ ಹೈಅಲರ್ಟ್ ಇರುವಂತೆ ಅಧಿಕಾರಿಗಳಿಗೆ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ಎಲ್ಲೆಡೆ ಕಟ್ಟೆಚ್ಚರವಹಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ