ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ: ಡಾ ಡಿ ವೀರೇಂದ್ರ ಹೆಗ್ಗಡೆ ಖಂಡನೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ವಿಚಾರವಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಖಂಡಿಸಿದ್ದು, ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ ಎಂದಿದ್ದಾರೆ.
ಮಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ವಿಚಾರವಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ (Veerendra Heggade) ಅವರು ಖಂಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ ಎಂದು ಹೇಳಿದ್ದಾರೆ.
ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಾಗುತ್ತದೆ. ಮುನಿಗಳಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಅಂತಾ ಗೊತ್ತಿಲ್ಲ. ಕೃತ್ಯ ಎಸಗಿದವರ ಬಂಧನ ಆಗಿರೋದು ತಿಳಿದುಬಂದಿದೆ. ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಪ್ಪಿತಸ್ಥರಿಗೆ ತಕ್ಷ ಶಿಕ್ಷೆಯಾಗಬೇಕು. ಮುನಿಗಳಿಗೆ ಸರ್ಕಾರ ರಕ್ಷಣೆ ಕೊಡಬೇಕಿದೆ ಎಂದರು.
ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ
ಮಾಹಿತಿ ಇಲ್ಲಿದೆ ನಾನು ಮಾತನಾಡಲ್ಲ: ಸಚಿವ ದಿನೇಶ್ ಗುಂಡೂರಾವ್
ಇದೇ ಪ್ರಕರಣ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ನನಗೆ ಹತ್ಯೆಯ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿಲ್ಲ. ಗೃಹ ಸಚಿವರ ಜೊತೆ ಮಾತನಾಡುತ್ತೇನೆ. ಮಾಹಿತಿ ಇಲ್ಲದೆ ನಾನು ಮಾತಾನಾಡಲು ಆಗಲ್ಲ ಎಂದು ಹೇಳಿದ್ದಾರೆ.
ಜೈನ ಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೈನ ಸಮುದಾಯದವರು ಕೊಲೆ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್; ವಿದ್ಯುತ್ ಶಾಕ್ ಕೊಟ್ಟು ಹತ್ಯೆ ಮಾಡಿದ್ರಾ ಆರೋಪಿಗಳು?
ನಂದಿಪರ್ವತ ಆಶ್ರಮದಲ್ಲಿ ಅಂತ್ಯಕ್ರಿಯೆ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯೊಂದರ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹದ ತುಂಡುಗಳು ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಮೃತದೇಹ ಶಿಫ್ಟ್ ಮಾಡಿದ್ದು, ನಾಳೆ ನಂದಿಪರ್ವತ ಆಶ್ರಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ನಿರ್ಧಾರ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:38 pm, Sat, 8 July 23