ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಪೊಲೀಸ್ ಅತ್ಯಾಚಾರ ಪ್ರಕರಣ; ಆರೋಪಿ ಅರೆಸ್ಟ್
ಕಡಬ ಠಾಣೆಯಲ್ಲಿರುವ ಆರೋಪಿ ಪೊಲೀಸ್ ಕಾನ್ಸ್ಟೇಬಲ್ ಶಿವರಾಜ್ ಬಗ್ಗೆ ಟಿವಿ9 ವಿಸ್ತೃತ ವರದಿ ಬಿತ್ತರಿಸಿತ್ತು. ಇಂದು ಬೆಳಗ್ಗೆ ಬಿತ್ತರಿಸಿದ ವರದಿ ನೋಡಿ ಸ್ಥಳಕ್ಕೆ ಖುದ್ದು ಐಜಿಪಿ ಭೇಟಿ ನೀಡಿದ್ದಾರೆ.
ಮಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಅತ್ಯಾಚಾರ ಸಂತ್ರಸ್ತೆಯನ್ನೇ ದೈಹಿಕವಾಗಿ ಬಳಸಿಕೊಂಡು ಗರ್ಭಿಣಿಯನ್ನಾಗಿಸಿದ ಘಟನೆ ನಿನ್ನೆ(ಸೆ.27) ಬೆಳಕಿಗೆ ಬಂದಿತ್ತು. ಈ ಪ್ರಕರಕ್ಕೆ ಸಂಬಂಧಿಸಿ ಆರೋಪಿ ಶಿವರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಾಗಿರುವ ಪೊಲೀಸ್ ಕಾನ್ಟ್ಟೇಬಲ್ ಶಿವರಾಜ್ನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ, ಸಂತ್ರಸ್ತ ಯುವತಿ ಮತ್ತು ತಾಯಿ ಪತ್ತೆಯಾಗಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ ಅಂತ ತಿಳಿಸಿದ್ದಾರೆ.
ಕಡಬ ಠಾಣೆಯಲ್ಲಿರುವ ಆರೋಪಿ ಪೊಲೀಸ್ ಕಾನ್ಸ್ಟೇಬಲ್ ಶಿವರಾಜ್ ಬಗ್ಗೆ ಟಿವಿ9 ವಿಸ್ತೃತ ವರದಿ ಬಿತ್ತರಿಸಿತ್ತು. ಇಂದು ಬೆಳಗ್ಗೆ ಬಿತ್ತರಿಸಿದ ವರದಿ ನೋಡಿ ಸ್ಥಳಕ್ಕೆ ಖುದ್ದು ಐಜಿಪಿ ಭೇಟಿ ನೀಡಿದ್ದಾರೆ. ಕಾನ್ಸ್ಟೇಬಲ್ ಶಿವರಾಜ್ ವಿರುದ್ಧ ಐಪಿಸಿ ಸೆಕ್ಷನ್ 376(2), 506, 5(A), 5(J) (ii)6 ಪೋಕ್ಸೊ ಕಾಯ್ದೆಯಡಿ 2012ರ ಪ್ರಕಾರ ಕೇಸ್ ದಾಖಲಾಗಿದೆ.
2 ವರ್ಷದ ಹಿಂದೆ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಅಂತ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣ ಸಂಬಂಧ ಠಾಣೆಗೆ ದೂರು ನೀಡಿದ್ದರು. ಆದರೆ ದೂರು ನೀಡಿದ ಪೊಲೀಸ್ ಠಾಣೆಯ ಸಿಬ್ಬಂದಿಯೇ ಸಂತ್ರಸ್ತ ಯುವತಿಯನ್ನು ದೈಹಿಕವಾಗಿ ಬಳಸಿಕೊಂಡ ಆರೋಪ ಕೇಳಿಬಂದಿದೆ.
ಪೊಲೀಸ್ ಕಾನ್ಸ್ಟೇಬಲ್ ಶಿವರಾಜ್ ಎಂಬಾತ ಸಂತ್ರಸ್ತೆಯ ಕುಟುಂಬಕ್ಕೆ ಪರಿಚಯವಾಗಿದ್ದ. ಪ್ರಕರಣಕ್ಕೆ ಸಂಬಂಧಿಸಿ ಸಮನ್ಸ್ ಕೊಡುವ ನೆಪದಲ್ಲಿ ಮನೆಗೆ ಶಿವರಾಜ್ ಸಂತ್ರಸ್ತೆಯ ಮನೆಗೆ ಆಗಾಗ ಬರುತ್ತಿದ್ದ. ಇದೇ ಸಂದರ್ಭದಲ್ಲಿ ಸಂತ್ರಸ್ತೆಯ ಮೇಲೆ ಕಾನ್ಟ್ಟೇಬಲ್ ಶಿವರಾಜ್ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ
Gang Rape: ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲ್ವೆ ಹಳಿ ಮೇಲೆ ಬಿಸಾಡಿದ ಕಾಮುಕರು
ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಪೊಲೀಸ್ ಸಿಬ್ಬಂದಿಯೇ ದೈಹಿಕವಾಗಿ ಬಳಸಿಕೊಂಡ ಆರೋಪ; ಸಂತ್ರಸ್ತೆ ಗರ್ಭಿಣಿ
(Kadaba Police arrested a constable who physically used the rape victims in Mangluru)
Published On - 2:37 pm, Tue, 28 September 21