ನಡೆದಾಡಲು ಕಷ್ಟಪಡುತ್ತಿರುವ ಕಾಡಾನೆ: ಅಸ್ವಸ್ಥಗೊಂಡ ಕಾಡಾನೆ ಸಂಚಾರದ ಬಗ್ಗೆ ಸಾರ್ವಜನಿಕರಿಂದ ಮಾಹಿತಿ

ಅಸ್ವಸ್ಥಗೊಂಡ ಕಾಡಾನೆ ಸಂಚಾರದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ನಡೆದಾಡಲು ಕಷ್ಟಪಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ನಡೆದಾಡಲು ಕಷ್ಟಪಡುತ್ತಿರುವ ಕಾಡಾನೆ: ಅಸ್ವಸ್ಥಗೊಂಡ ಕಾಡಾನೆ ಸಂಚಾರದ ಬಗ್ಗೆ ಸಾರ್ವಜನಿಕರಿಂದ ಮಾಹಿತಿ
ರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆ.
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 24, 2023 | 8:38 PM

ಮಂಗಳೂರು: ಅಸ್ವಸ್ಥಗೊಂಡ ಕಾಡಾನೆ (Elephant) ಸಂಚಾರದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ನಡೆದಾಡಲು ಕಷ್ಟಪಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆ 7 ಗಂಟೆಯಿಂದ ರಾತ್ರಿ 1.30ರ ತನಕ ಸುಬ್ರಹ್ಮಣ್ಯ ಸಮೀಪದ ಚೇರು ಭಾಗದಲ್ಲಿ ಕಾಡಾನೆ ಸಂಚಾರ ಮಾಡಿದ್ದು, ಇಂದು ಮುಂಜಾನೆ ಮತ್ತೆ ಎರ್ಮಾಯಿಲ್ ಎಂಬಲ್ಲಿ ಬೆಳಿಗ್ಗೆ 7 ಗಂಟೆಗೆ ರಸ್ತೆಯಲ್ಲೇ ಕಾಣಿಸಿಕೊಂಡಿದೆ. ತೀರಾ ಅಸ್ವಸ್ಥಗೊಂಡು ಬಳಲಿದಂತೇ ಕಾಣುವ ಕಾಡಾನೆ, ನಡೆಯಲು ಅಸಾಧ್ಯವಾಗಿ ಕಷ್ಟಪಡುತ್ತಿದೆ ಎನ್ನಲಾಗುತ್ತಿದೆ. ಸಾರ್ವಜನಿಕರ ಮಾಹಿತಿ ಪ್ರಕಾರ, ಎಡಗಾಲಿಗೆ ಏನೋ ಬಲವಾದ ಗಾಯ ಆದಂತೆ ಕಾಣುತ್ತಿದ್ದು, ನಿಧಾನಗತಿಯಲ್ಲಿ ನಡೆಯುತ್ತಿದೆ. ತಿಂದ ಆಹಾರವನ್ನು ಜಗಿದು ಅಲ್ಲಲ್ಲೆ ಉಗಿದು ಹೋಗುತ್ತಿದೆ ಎಂಬುದಾಗಿ ಹೇಳಿದ್ದಾರೆ.

ಈ ಕುರಿತಾಗಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದು, ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ, ಆನೆಯ ಚಲನವಲನಗಳನ್ನು ಗಮನಿಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬನ್ನೇರುಘಟ್ಟ ಉದ್ಯಾನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಆನೆ ಸಹ ಸಾವು

ಬೆಂಗಳೂರು : ಜಿಲ್ಲೆಯ ಆನೇಕಲ್​​​ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಏ.20 ರಂದು  ತಾಯಿ ಆನೆ ಭ್ರೂಣದಲ್ಲೇ ಮರಿಯಾನೆ ಮೃತಪಟ್ಟಿತ್ತು. ಇದರ ಬೆನ್ನಲ್ಲೇ ಏ.21 ರಂದು ಮಧ್ಯಾಹ್ನ 12:13 ಕ್ಕೆ 47 ವರ್ಷದ ಸುವರ್ಣ ಆನೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿತ್ತು. ನಿನ್ನೆ ಭ್ರೂಣದಲ್ಲೇ ಮರಿ ಮೃತಪಟ್ಟಿದ್ದು, ಪ್ರಾಣಿ‌ ಶಸ್ತ್ರ ‌ಚಿಕಿತ್ಸೆ ತಜ್ಞರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಪರೇಶನ್ ಮಾಡುವ ಮೂಲಕ ಮೃತಪಟ್ಟ ಮರಿಯನ್ನ ಪಶುವೈದ್ಯರು ತೆಗೆದಿದ್ದರು. ಆದರೆ ಮರಿ ಮೃತಪಟ್ಟಿದ್ದರಿಂದ ಆನೆ ದೇಹದಲ್ಲಿ ಇನ್ಫೆಕ್ಷನ್ ಹರಡಿಕೊಂಡು ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿತ್ತು.

ಇದನ್ನೂ ಓದಿ: ಮಂಗಳೂರು: ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಸಾವು; ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಸುವರ್ಣ ಅಗಲಿಕೆಗೆ ಪಾರ್ಕ್​ನಲ್ಲಿ ನೀರವ ಮೌನ: ಪ್ರಸವ ವೇದನೆ ಮುಗಿದರೂ ಮರಿ ಜನನ ಆಗದ ಹಿನ್ನೆಲೆ ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದ್ದರು. ಈ ವೇಳೆ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿತ್ತು. ಕೂಡಲೇ ಸುವರ್ಣ ಜೀವ ಉಳಿಸಲು ವೈದ್ಯರು ಪ್ರಯತ್ನ ಪಟ್ಟಿದ್ದರು. ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸುವರ್ಣಳಿಗೆ ಪ್ರಾಣಿ ಶಸ್ತ್ರ ಚಿಕಿತ್ಸೆ ತಜ್ಞರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿತ್ತು. ತಾಯಿ ಆನೆ ಉಳಿಸಿಕೊಳ್ಳಲು ವೈದ್ಯರು ಶತತ ಪ್ರಯತ್ನ ಮಾಡಿದ್ದರು. ಆನೆಯ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿಗಳು ಕಳವಳಕ್ಕೊಳಗಾಗಿದ್ದರು. ಸುವರ್ಣಳ ಅಗಲಿಕೆಯಿಂದ ಪಾರ್ಕ್​ನಲ್ಲಿ ನೀರವ ಮೌನ ಆವರಿಸಿದೆ.

ಕಾಡಾನೆ ಸೆರೆ 

ದಕ್ಷಿಣ ಕನ್ನಡ: ಇಬ್ಬರನ್ನು ಕೊಂದಿದ್ದ ಎರಡು ಕಾಡಾನೆ ಪೈಕಿ ಒಂದು ಕಾಡಾನೆಯನ್ನು ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿತ್ತು. ಅರಿವಳಿಕೆ ಚುಚ್ಚುಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯಲಾಗಿದೆ. ಅಭಿಮನ್ಯು ನೇತೃತ್ವದ 5 ಸಾಕಾನೆಗಳಿಂದ ಯಶಸ್ವಿ ಕಾರ್ಯಾಚರಣೆ ಮಾಡಿ ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: ಸೌದಿ ಅರೇಬಿಯಾ: ಒಂಟೆಗೆ ಕಾರು ಡಿಕ್ಕಿ ಹೊಡೆದು ಮಂಗಳೂರಿನ ಮೂವರು, ಬಾಂಗ್ಲಾದ ಓರ್ವನ ಸಾವು

ಫೆಬ್ರವರಿ 20ರಂದು ಎರಡು ಕಾಡಾನೆಗಳು ಇಬ್ಬರನ್ನು ಬಲಿಪಡೆದಿದ್ದವು. ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿ ಎಂಬಲ್ಲಿ ಘಟನೆ ನಡೆದಿತ್ತು. 3ನೇ ದಿನ ನಡೆದ ಕಾರ್ಯಾಚರಣೆಯಲ್ಲಿ ಒಂದು ಕಾಡಾನೆ ಸೆರೆಯಾಗಿದ್ದು, ಕಾಡಾನೆ ಸೆರೆ ಸಿಕ್ಕ 1 ಕಿ.ಮೀ ವ್ಯಾಪ್ತಿಯಲ್ಲಿ ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:38 pm, Mon, 24 April 23

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ