ಹುಲಿವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗನನ್ನು 58 ಬಾರಿ ಕೊಚ್ಚಿ ಕೊಲೆ: ಕಾಂಗ್ರೆಸ್​ ಮುಖಂಡ ಸೇರಿ ನಾಲ್ವರು ಪೊಲೀಸ್ ವಶಕ್ಕೆ

Mangalore News: ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ವೈದ್ಯರು, ಮೃತದೇಹದದಲ್ಲಿ 58 ಮಚ್ಚಿನ ಏಟುಗಳನ್ನು ನೋಡಿ ಶಾಕ್ ಆಗಿದ್ದಾರೆ.

ಹುಲಿವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗನನ್ನು 58 ಬಾರಿ ಕೊಚ್ಚಿ ಕೊಲೆ: ಕಾಂಗ್ರೆಸ್​ ಮುಖಂಡ ಸೇರಿ ನಾಲ್ವರು ಪೊಲೀಸ್ ವಶಕ್ಕೆ
ಕೊಲೆಯಾದ ಅಕ್ಷಯ್ ಕಲ್ಲೇಗ ಮತ್ತು ಕೊಲೆ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ಕೇಶವ ಪಡೀಲು
Follow us
| Updated By: Rakesh Nayak Manchi

Updated on:Nov 07, 2023 | 3:42 PM

ಮಂಗಳೂರು, ನ.7: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರದಲ್ಲಿ ನಡೆದ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕೊಲೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ವೈದ್ಯರು, ಮೃತದೇಹದದಲ್ಲಿ 58 ಮಚ್ಚಿನ ಏಟುಗಳನ್ನು ನೋಡಿ ಶಾಕ್ ಆಗಿದ್ದಾರೆ.

ಗಾಂಜಾ ಮತ್ತಿನಲ್ಲಿ ಆರೋಪಿಗಳು ಅಕ್ಷಯ್ ಮೇಲೆ ಮಚ್ಚಿನಿಂದ ಕೊಚ್ಚಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಚೇತನ್, ಮನೀಶ್, ಮಂಜ, ಕೇಶವ ಪಡೀಲು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕೇಶವ ಕಾಂಗ್ರೆಸ್ ಮುಖಂಡನಾಗಿದ್ದಾನೆ.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷನಾಗಿರುವ ಕೇಶವನನ್ನು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಬಿ ವಿಶ್ವನಾಥ ರೈ ಶಿಫಾರಸ್ಸಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಶೇಖರ್ ಕುಕ್ಕೇಡಿ ಅವರು ನೇಮಕ ಮಾಡಿದ್ದರು.

ಇದನ್ನೂ ಓದಿ: ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮೇಸ್ತ್ರಿ ಹತ್ಯೆ

ಏನಿದು ಪ್ರಕರಣ?

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿತ್ತು.

ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿತ್ತು. ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡವು ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್​ನಲ್ಲಿ ಅಕ್ಷಯ್​ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Tue, 7 November 23