AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ, ರಜೆ ಕೇಳಬೇಡಿ; ಶಾಸಕರು, ಸಚಿವರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ

ಕರ್ನಾಟಕ ವಿಧಾನಸಭೆಯ ಮೌಲ್ಯತೆ ಕುಸಿಯದಂತೆ ವರ್ತಿಸಬೇಕು ಎಂದು ಅವರು ಮುಂಚಿತವಾಗಿ ಸೂಚನೆ ನೀಡಿದರು.

ಅಧಿವೇಶನಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ, ರಜೆ ಕೇಳಬೇಡಿ; ಶಾಸಕರು, ಸಚಿವರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
TV9 Web
| Updated By: guruganesh bhat|

Updated on: Aug 27, 2021 | 6:12 PM

Share

ಮಂಗಳೂರು: ಸೆಪ್ಟೆಂಬರ್13 ರಿಂದ 24 ರವರೆಗೆ ವಿಧಾನಸಭಾ ಅಧಿವೇಶನ (Karnataka  Assembly session 2021) ನಡೆಯಲಿದ್ದು, ಈ ಅಧಿವೇಶನದಲ್ಲಿ ಯಾರೂ ನನ್ನ ಬಳಿ ರಜೆ ಕೇಳುವ ಸ್ಥಿತಿ ಬರಬಾರದು. ಎಲ್ಲಾ ಶಾಸಕರು ಮತ್ತು ಸಚಿವರು ಕಡ್ಡಾಯವಾಗಿ ಪೂರ್ಣಪ್ರಮಾಣದಲ್ಲಿ ಅಧಿವೇಶನದಲ್ಲಿ ಹಾಜರಿರಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Speaker Vishweshwar Hegde Kageri) ಸೂಚನೆ ನೀಡಿದರು.

ಮಂಗಳೂರಿನಲ್ಲಿ ಈಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಜನಪ್ರತಿನಿಧಿಗಳ ಸಂಪೂರ್ಣ ಹಾಜರಾತಿಯ ಅಗತ್ಯತೆ ವಿವರಿಸಿ ಮುಖ್ಯಮಂತ್ರಿಗಳಿಗೂ ಪತ್ರ ಬರೆದಿದ್ದೇನೆ. ಅಧಿವೇಶನದಲ್ಲಿ ಮಂಡಿಸಬೇಕಾದ ಬಿಲ್​ಗಳನ್ನು ಸಹ ಮೊದಲೇ ನನ್ನ ಗಮನಕ್ಕೆ ತರಲು ತಿಳಿಸಿದ್ದೇನೆ. ಎಲ್ಲ ಸಂಬಂಧಿಸಿದ ಅಧಿಕಾರಿಗಳು ಕೂಡ ಕಡ್ಡಾಯವಾಗಿ ಅಧಿವೇಶನದಲ್ಲಿ ಹಾಜರಿರಬೇಕು. ಶಾಸಕರು ಸಹ ಅಧಿವೇಶನವನ್ನ ಗಂಭೀರವಾಗಿ ತೆಗೆದುಕೊಂಡು ಹಾಜರಾಗಬೇಕು. ಜನರು ವ್ಯವಸ್ಥೆಯ ವಿರುದ್ಧ ಅನೇಕ ಬಾರಿ ಬೇಸತ್ತು ಹೋಗಿದ್ದಾರೆ. ಹೀಗಾಗಿ ಸದನದ ಹಾಜರಾತಿ, ಪಾಲ್ಗೊಳ್ಳುವಿಗೆ ಹಾಗೂ ಸದನದ ಶಿಸ್ತಿನ ಚೌಕಟ್ಟು ಮೀರದೆ ವರ್ತಿಸಬೇಕು. ಕರ್ನಾಟಕ ವಿಧಾನಸಭೆಯ ಮೌಲ್ಯತೆ ಕುಸಿಯದಂತೆ ವರ್ತಿಸಬೇಕು ಎಂದು ಅವರು ಮುಂಚಿತವಾಗಿ ಸೂಚನೆ ನೀಡಿದರು.

CET 2021: ಆಗಸ್ಟ್​ 27ರಿಂದ ಸಿಇಟಿ; ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷಾರ್ಥಿಗಳಿಗೆ ಮಾಸ್ಕ್ ವಿತರಣೆ: ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ ರಾಜ್ಯದಲ್ಲಿ ನಾಳೆಯಿಂದ (ಆಗಸ್ಟ್ 27) ಆಗಸ್ಟ್ 30ರವರೆಗೆ ಸಿಇಟಿ (Karnataka CET 2021) ನಡೆಯಲಿದ್ದು, 530 ಕೇಂದ್ರಗಳಲ್ಲೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕೊವಿಡ್ ಸೋಂಕಿತರು, ಶಂಕಿತರಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಾಗುತ್ತದೆ. ಅಗತ್ಯವುಳ್ಳವರಿಗಾಗಿ ಐಸೋಲೇಷನ್ ಸೆಂಟರ್​ಗಳಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸುತ್ತೇವೆ. ಗಡಿ ಭಾಗದಲ್ಲಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲು ಸೂಚನೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಮಾಸ್ಕ್​ಗಳನ್ನು ನೀಡಲಾಗುತ್ತದೆ. ಆನ್​ಲೈನ್​ನಲ್ಲಿಯೇ ದಾಖಲೆಗಳನ್ನು ಸಲ್ಲಿಸುವುದಕ್ಕೆ ಅವಕಾಶ ಒದಗಿಸಲಾಗಿದೆ. ಪರಿಶೀಲನೆ ಕೂಡ ಆನ್​ಲೈನ್​ ಮೂಲಕವೇ ನಡೆಯಲಿದೆ. ಬೆಂಗಳೂರು 10, ಶಿವಮೊಗ್ಗ 1, ಕೋಲಾರ 1 ಸೇರಿದಂತೆ ಒಟ್ಟು 12 ಸೋಂಕಿತ ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಈ ವರ್ಷ ಎಲ್ಲರೂ ಪಿಯು‌ಸಿ ಪಾಸ್ ಆಗಿರುವುದರಿಂದ ಪಿಯು ಅಂಕ ಪರಿಗಣಿಸದೇ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ರ್ಯಾಂಕ್ ನೀಡುತ್ತೇವೆ ಎಂದು ಸಹ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: 

ನಿಮ್ಮ ಸ್ಮಾರ್ಟ್‌ಫೋನಿನಲ್ಲಿರುವ ಡುಪ್ಲಿಕೇಟ್ ಕಾಂಟೆಕ್ಟ್‌ಗಳನ್ನು ಒಮ್ಮೆಲೇ ಡಿಲೀಟ್ ಮಾಡಲು ಇಲ್ಲಿದೆ ಟ್ರಿಕ್

ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಎಷ್ಟು ಸಿಮ್ ಲಿಂಕ್ ಆಗಿವೆ?: ಟೆಲಿಕಾಂ ಇಲಾಖೆಯಿಂದ ಹೊಸ ಪೋರ್ಟಲ್

(Karnataka Assembly session 2021 Speaker Vishweshwar Hegde Kageri says MLAs and Ministers Participation in a session mandatory do not ask for leave)

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್