ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು

ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.

ಹೊಸ ಸರ್ಕಾರ ಅಸ್ವಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು
ಪ್ರವೀಣ ನೆಟ್ಟಾರು ದಂಪತಿ
Follow us
|

Updated on:May 27, 2023 | 9:37 AM

ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ (BJP) ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ (Praveen Nettaru) ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ.

ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಕೇಸ್​: ಮತ್ತಿಬ್ಬರ ವಿರುದ್ದ ಚಾರ್ಜ್​ಶೀಟ್​, ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಅಲ್ಲದೆ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 am, Sat, 27 May 23

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್