Weekend Curfew: ಗಡಿ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಲು ರಾಜ್ಯ ಸರ್ಕಾರ ಆದೇಶ
ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.
ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.
(Karnataka Government clears weekend curfew in border district of Kodagu Dakshina Kannada Udupi Hassan)