ಮಂಗಳೂರು ಐಟಿ ಪಾರ್ಕ್‌ ಸ್ಥಾಪನೆಗೆ ಸರ್ಕಾರ ಸಮ್ಮತಿ; ದಿನೇಶ್‌ ಗುಂಡೂರಾವ್‌

|

Updated on: Sep 11, 2023 | 9:09 PM

ಕದ್ರಿ ಪಾರ್ಕ್ ರಸ್ತೆಯಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಹೊಸ ಮಳಿಗೆಗಳಿಗೆ ಷರತ್ತುಗಳ ಬದಲಾವಣೆಯೊಂದಿಗೆ ಹೊಸ ಟೆಂಡರ್‌ಗಳನ್ನು ಶೀಘ್ರದಲ್ಲಿಯೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಕರಡು ವಲಯ ನಿಯಮಾವಳಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರು ಐಟಿ ಪಾರ್ಕ್‌ ಸ್ಥಾಪನೆಗೆ ಸರ್ಕಾರ ಸಮ್ಮತಿ; ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌
Follow us on

ಮಂಗಳೂರು, ಸೆಪ್ಟೆಂಬರ್ 11: ಮಂಗಳೂರಿನ ದೇರೆಬೈಲ್‌ನಲ್ಲಿ ಐಟಿ ಪಾರ್ಕ್‌ (Mangalore IT Park) ಸ್ಥಾಪನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್‌ ಗುಂಡೂರಾವ್‌ (Dinesh Gundu Rao) ಹೇಳಿದ್ದಾರೆ. ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನ (KEONICS) ಮೂರು ಎಕರೆಗಿಂತಲೂ ಹೆಚ್ಚು ಪ್ರದೇಶದಲ್ಲಿ ಈ ಯೋಜನೆಯನ್ನು ಸರ್ಕಾರಿ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಸ್ಥಾಪಿಸಲಾಗುವುದು. ಯೋಜನೆಗೆ ಪ್ರಸ್ತಾವನೆ (RFP) ಎರಡು ತಿಂಗಳೊಳಗೆ ಸಿದ್ಧವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಐಟಿ ಪಾರ್ಕ್ ಅನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಯೋಜನೆಯ ಪ್ರಸ್ತಾವಿತ ವಲಯ ನಿಯಂತ್ರಣದ ಮೇಲೆ ಪಿಪಿಪಿ ಅವಧಿಯನ್ನು 30 ವರ್ಷದಿಂದ 60 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಂಗಳೂರು ನಗರದ ಮಹಾಯೋಜನೆಗೆ ಸಂಬಂಧಿಸಿದಂತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಾಡಿರುವ ತಿದ್ದುಪಡಿಗಳು ಮತ್ತು ಶಿಫಾರಸುಗಳ ಕುರಿತು ಅಧ್ಯಯನ ನಡೆಸುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯಕ್ಕೆ (ಡಿಟಿಸಿಪಿ) ಸೂಚಿಸಿರುವುದಾಗಿ ಸಚಿವರು ತಿಳಿಸಿದ್ದಾರೆ.

ಕದ್ರಿ ಪಾರ್ಕ್ ರಸ್ತೆಯಲ್ಲಿರುವ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ಹೊಸ ಮಳಿಗೆಗಳಿಗೆ ಷರತ್ತುಗಳ ಬದಲಾವಣೆಯೊಂದಿಗೆ ಹೊಸ ಟೆಂಡರ್‌ಗಳನ್ನು ಶೀಘ್ರದಲ್ಲಿಯೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಕರಡು ವಲಯ ನಿಯಮಾವಳಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿ: ಬಿಕೆ ಹರಿಪ್ರಸಾದ್ ಯಾರ ಬಗ್ಗೆ ಯಾಕೆ ಟೀಕೆ ಮಾಡುತ್ತಿದ್ದಾರೆ ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್

ಗಣೇಶ ಹಬ್ಬಕ್ಕೆ ಸಾರ್ವಜನಿಕ ರಜೆ ವಿಚಾರದಲ್ಲಿ ಗೊಂದಲ

ಈ ವರ್ಷ ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 19 ರಂದು ಸಾರ್ವಜನಿಕ ರಜೆ ಇಲ್ಲ. ಬದಲಿಗೆ ಸೆಪ್ಟೆಂಬರ್ 18ರಂದು ಸರ್ಕಾರಿ ರಜೆ ಇರಲಿದೆ. ಸರ್ಕಾರಿ ಕ್ಯಾಲೆಂಡರ್ ಪ್ರಕಾರ ಸೆಪ್ಟೆಂಬರ್ 18 ರಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ, ಆದರೆ ನಿಜವಾದ ಹಬ್ಬ ಸೆಪ್ಟೆಂಬರ್ 19 ರಂದು ಆಚರಿಸಲಾಗುತ್ತದೆ. ಇದು ಕರಾವಳಿ ಪ್ರದೇಶದ ಜನರಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ.ಸೆಪ್ಟೆಂಬರ್ 19 ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪೋಷಕರು ಕೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ರಾಜ್ಯ ಸರ್ಕಾರ ಮಾತ್ರ ನಿರ್ಧಾರ ಕೈಗೊಳ್ಳಲು ಸಾಧ್ಯ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ